ಬಿಜೆಪಿ ನಾಯಕಿ ಸೋನಾಲಿ ಕೊಲೆ ಪ್ರಕರಣ: ಕ್ಲಬ್ ಮಾಲೀಕ ಮತ್ತು ಡ್ರಗ್ ಡೀಲರ್ ಬಂಧನ
ಸೋನಾಲಿಯ ಇಬ್ಬರು ಸಹಾಯಕರಾದ ಸುಧೀರ್ ಸಾಂಗ್ವಾನ್ ಮತ್ತು ಸುಖ್ ವಿಂದರ್ಅ ಸಿಂಗ್ ನನ್ನು ಈ ಮೊದಲು ಬಂಧಿಸಲಾಗಿತ್ತು.
Team Udayavani, Aug 27, 2022, 11:12 AM IST
ಪಣಜಿ: ಬಿಜೆಪಿ ನಾಯಕಿ, ಟಿಕ್ ಟಾಕ್ ಸ್ಟಾರ್ ಸೋನಾಲಿ ಪೋಗಟ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾದ ಕ್ಲಬ್ ಮಾಲೀಕ ಮತ್ತು ಡ್ರಗ್ ಡೀಲರ್ ಅನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಕಾಫಿನಾಡಿನಲ್ಲಿ ಮುಂದುವರಿದ ಹುಲಿ ದಾಳಿ : ಜಾನುವಾರು ಬಲಿ, ಆತಂಕದಲ್ಲಿ ಗ್ರಾಮಸ್ಥರು
ಪೋಗಟ್ ಪ್ರಕರಣದಲ್ಲಿ ಈವರೆಗೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ. ಸೋನಾಲಿಯ ಇಬ್ಬರು ಸಹಾಯಕರಾದ ಸುಧೀರ್ ಸಾಂಗ್ವಾನ್ ಮತ್ತು ಸುಖ್ ವಿಂದರ್ಅ ಸಿಂಗ್ ನನ್ನು ಈ ಮೊದಲು ಬಂಧಿಸಲಾಗಿತ್ತು.
ಹರ್ಯಾಣದ ಬಿಜೆಪಿ ನಾಯಕಿ ಸೋನಾಲಿ ಪೋಗಟ್ ಗೋವಾದ ಅಂಜುನಾ ಬೀಚ್ ನಲ್ಲಿರುವ ನೈಟ್ ಕ್ಲಬ್ ನಲ್ಲಿದ್ದಾಗ ಆಕೆಗೆ ಒತ್ತಾಯಪೂರ್ವಕವಾಗಿ ರಾಸಾಯನಿಕ ಮಿಶ್ರಿತ ಡ್ರಗ್ಸ್ ನೀಡಲಾಗಿತ್ತು. ಅದರಿಂದಾಗಿಯೇ ಅವರು ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದರು.
ಹಣದ ವಿಚಾರಕ್ಕಾಗಿಯೇ ಅವರ ಇಬ್ಬರು ನಿಕಟವರ್ತಿಗಳು ಈ ಕೃತ್ಯ ಎಸಗಿದ್ದಾರೆಂದು ಪೊಲೀಸರು ತಿಳಿಸಿದ್ದು, ಆಕೆಗೆ ಬಲವಂತವಾಗಿ ಡ್ರಗ್ಸ್ ನೀಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.