ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತ ಸೂಚನೆ


Team Udayavani, Aug 27, 2022, 1:12 PM IST

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತ ಸೂಚನೆ

ರಾಮನಗರ: ಜಲ ಮಾಲಿನ್ಯ ಮತ್ತು ನಿಯಂತ್ರಣ ಕಾಯ್ದೆ 1974 ನದಿ ಮೂಲ ಮಾಲಿನ್ಯವಾಗದಂತೆ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ಸ್ಥಳೀಯ ಸಂಸ್ಥೆಗಳಲ್ಲಿ ಕಲ್ಯಾಣಿ, ಪ್ರತ್ಯೇಕ ಹೊಂಡ ವ್ಯವಸ್ಥೆ ಮಾಡಲಾಗಿದೆ. ಟ್ರ್ಯಾಕ್ಟರ್‌ಗಳಲ್ಲಿ ತಾತ್ಕಾಲಿಕ ವಿಸರ್ಜನೆ ವ್ಯವಸ್ಥೆ ಮಾಡಿದ್ದು, ಅವುಗಳಲ್ಲಿ ಮನೆ-ಮನೆಗಳಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಗಳ ವಿಸರ್ಜನೆಗೆ ಸ್ಥಳೀಯ ಸಂಸ್ಥೆಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳಬಹುದು. ನ್ಯಾಯಾಲಯದ ನಿರ್ದೇಶನ, ಇಲಾಖೆಗಳು ಹಾಗೂ ಸಮಿತಿಯು ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವ ಕುರಿತು ಕಾರ್ಯಕ್ರಮ ಆಯೋ ಜಕರಿಂದ ಮುಚ್ಚಳಿಕೆ ಪಡೆಯು ವುದು ಕಡ್ಡಾಯವಾಗಿದೆ ಎಂದು ಜಿಲ್ಲಾಢಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸಾರ್ವಜನಿಕ ಸ್ಥಳದ ಅಗತ್ಯವಿರುವ ಸೂಕ್ಷ್ಮ ಪ್ರದೇಶಗಳಲ್ಲಿ ಅರ್ಜಿದಾರರು ಸಿ.ಸಿ. ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಷರತ್ತನ್ನು ವಿಧೀಸಿ ಪರವಾನಗಿ ನೀಡಲು ಸ್ಥಳೀಯ ಸಂಸ್ಥೆಯ ಮುಖ್ಯಸ್ಥರಿಗೆ ಸೂಚಿಸಲಾಗಿದೆ.

ಪರಿಸರ ಸ್ನೇಹಿ ಮಣ್ಣಿನ ಹಾಗೂ ನೈಸರ್ಗಿಕ ಬಣ್ಣದ ಗಣೇಶ ಮೂರ್ತಿಗಳನ್ನು ಮಾತ್ರ ಬಳಸುವಂತೆ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿ ಅನುಸರಿಸುವಂತೆ ಹಾಗೂ ಪಿಒಪಿ ಗಣೇಶ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡುವುದನ್ನು ನಿಷೇಧಿಸಲಾಗಿರುತ್ತದೆ. ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಬಗ್ಗೆ ಅಗತ್ಯವಿರುವ ಸ್ಥಳ, ಪೆಂಡಾಲ್‌, ವಿದ್ಯುತ್‌ ಸಂಪರ್ಕ ಇನ್ನು ಮುಂತಾದ ಪರವಾನಗಿ ನೀಡಲು ವಿವಿಧ ಇಲಾಖೆಗಳ (ಕಂದಾಯ, ಲೋಕೋಪಯೋಗಿ, ಅಗ್ನಿಶಾಮಕ, ಸಹಯೋಗದೊಂದಿಗೆ) ಏಕ ಗವಾಕ್ಷಿ ಅಡಿಯಲ್ಲಿ ಅನುಮತಿ ನೀಡುವ ಬಗ್ಗೆ ಕ್ರಮವಹಿಸಲಾಗುತ್ತಿದೆ. ಪರವಾನಗಿ ನೀಡುವಾಗ ಎಲ್ಲಾ ಇಲಾಖೆಗಳ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಕೋಮುಸೌಹಾರ್ದ ಸಭೆ ನಡೆಸಿ ಕ್ರಮ: ಪೊಲೀಸ್‌ ಇಲಾಖೆಯ ಸಹಯೋಗ ದೊಂದಿಗೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹಾಗೂ ಪಟ್ಟಣದ ಪ್ರಮುಖರೊಂದಿಗೆ, ಸಂಘ ಸಂಸ್ಥೆಗಳೊಂದಿಗೆ (ನಾಗರೀಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ, ಇತ್ಯಾದಿ) ಕೋಮುಸೌಹಾರ್ದ ಸಭೆಯನ್ನು ನಡೆಸಿ ಕ್ರಮ ವಹಿಸಲು ಸೂಚಿಸಲಾಗಿದೆ. ವಿಶೇಷವಾಗಿ ಹೈಟೆನ್ಷನ್‌ ತಂತಿ ಹಾದುಹೋಗಿರುವ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿ ನೀಡದಿರುವುದು. ಗಣೇಶ ಪ್ರತಿಷ್ಠಾಪನೆ ಸಂದರ್ಭದಲ್ಲಿ ಸಾರ್ವಜನಿಕ ರಸ್ತೆ ಮತ್ತು ಬೀದಿಗಳಲ್ಲಿ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುವಂತೆ ಪೆಂಡಾಲ್‌ ನಿರ್ಮಿಸದಂತೆ ಕ್ರಮವಹಿಸುವುದು ಎಂದು ತಿಳಿಸಲಾಗಿದೆ.

ಮೇಲ್ಕಂಡ ಎಲ್ಲಾ ಅಂಶಗಳ ಪಾಲನೆ ಹಾಗೂ ವಿವಿಧ ಇಲಾಖೆಗಳ ಜೊತೆ ಸಮನ್ವಯ ಸಾಧಿಸಿಕೊಂಡು, ಏಕಗವಾಕ್ಷಿ ಸಮಿತಿಯ ಪರವಾನಗಿ ಇಲ್ಲದೇ ಗಣೇಶ ಮೂರ್ತಿಯನ್ನು ಸ್ಥಾಪಿಸದಂತೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿಲಾಗಿದೆ.

ಟಾಪ್ ನ್ಯೂಸ್

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

BPL-CARD

Food Department Operation: ಬಿಪಿಎಲ್‌ ಚೀಟಿದಾರರಿಗೆ ಎಪಿಎಲ್‌ ಕಾವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.