ಜಲಪಾತದಂತಾದ ರಸ್ತೆ ಮಾರ್ಗ: ಸಂಚಾರ ಅಸ್ತವ್ಯಸ್ತ

Team Udayavani, Aug 27, 2022, 11:29 PM IST

ಜಲಪಾತದಂತಾದ ರಸ್ತೆ ಮಾರ್ಗ: ಸಂಚಾರ ಅಸ್ತವ್ಯಸ್ತ

ರಾಮನಗರ: ಜಿಲ್ಲಾದ್ಯಂತ ಸುರಿಯಲಾರಂಭಿಸಿರುವ ಮಳೆಗೆ ನಿಜಕ್ಕೂ ಜನತೆ ಹೈರಾಣಾಗಿದ್ದಾರೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ನಗರ ಪ್ರದೇಶಗಳಲ್ಲೇ ಮನೆಗೆ ನೀರು ನುಗ್ಗಲಾರಂಬಿಸಿದ್ದು ಹಲವೆಡೆ ಅವಾಂತರಗಳನ್ನ ಸೃಷ್ಟಿಸಿದೆ. ಅಲ್ಲದೆ ಬೆಂಗಳೂರು-ಮೈಸೂರು ಹೆದ್ದಾರಿ ಯಂತೂ ಮಳೆಗೆ ಕೆರೆಯಂತಾಗಿ ರೂಪುಗೊಂಡಿದೆ.

ನಗರದ ಟಿಪ್ಪುನಗರದಲ್ಲಿ ಬ್ರಿಡ್ಜ್ ಕಟ್ಟಿಕೊಂಡಿದ್ದು, ನೀರಿನ ಹರಿವು ಕಷ್ಟವಾಗಿದ್ದು, ಸುರಿದ ಧಾರಾಕಾರ ಮಳೆಗೆ ನೀರು ಮನೆಗಳಿಗೆ ನುಗ್ಗಲಾರಂಭಿಸಿದೆ. 23ನೇ ವಾರ್ಡ್‌ ಟಿಪ್ಪುನಗರದಲ್ಲಿ ಬರುವ ಸೀರಳ್ಳ ತುಂಬಿ ಹರಿಯುತ್ತಿದ್ದು, ಆ ಭಾಗದ ಹತ್ತಾರು ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನತೆ ರಾತ್ರಿ ನಿದ್ರೆ ಇಲ್ಲದೆ ನೀರು ಮನೆಗೆ ನುಗ್ಗದಂತೆ ನೋಡಿಕೊಳ್ಳುವುದೇ ಆಗಿತ್ತು. ಅಲ್ಲದೆ ಮನೆಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿಟ್ಟಿದ್ದ ಪಡಿತರ ಸೇರಿದಂತೆ ಆಹಾರ ಸಾಮಗ್ರಿ ಹಾಗೂ ಬಟ್ಟೆ ಬರೆ ಎಲ್ಲವೂ ನೀರಿನಲ್ಲಿ ತೋಯ್ದು ಕೆಲವು ಕಡೆ ಕೊಚ್ಚಿಕೊಂಡು ಹೋದ ದೃಶ್ಯ ಸಾಮಾನ್ಯವಾಗಿತ್ತು.

ಮನೆಗಳಿಗೆ ನುಗ್ಗಿದ ನೀರು: ವಾರ್ಡ್‌ ನಂ 21ರ ಅರ್ಕೇ ಶ್ವರ ಕಾಲೋನಿಯಲ್ಲಿ ನೀರು ಮನೆಗಳಿಗೆ ನುಗ್ಗಿದ್ದು, ಸೇತುವೆಯ ಕೆಳಭಾಗ ನೀರು ತುಂಬಿ ಹುಣಸನಹಳ್ಳಿ, ಕೊತ್ತಿಪುರ ಸೇರಿದಂತೆ ಇತರ ಮಾರ್ಗದ ಕೆಳ ಸೇತುವೆ ಸಂಚಾರಕ್ಕೆ ಅಡ್ಡಿಯಾಗಿದ್ದು, ಸಾರ್ವಜನಿಕರು ತೀವ್ರ ತೊಂದರೆಗೆ ಒಳಗಾಗಿದ್ದಾರೆ. ಅಲ್ಲದೆ, ನಗರದ ಕೊಳಚೆ ನೀರು ಮನೆಗಳಿಗೆ ಹೆಚ್ಚಾಗಿ ನುಗ್ಗಿದ್ದು ದುರ್ನಾತ ಹೊಡೆ ಯಲಾರಂಭಿಸಿದೆ. ಕೂಡಲೇ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಸ್ಥಿತಿ ಸರಿಪಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿ ದ್ದಾರೆ. ಚನ್ನಮಾನಹಳ್ಳಿ ಬಳಿಯ ಕೆರೆ ಕೋಡಿ ಹೊಡೆದು ನೀರು ಕನಕಪುರ ರಸ್ತೆಯತ್ತ ನುಗ್ಗಿದೆ. ಇದರಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಅರ್ಚಕಹಳ್ಳಿ ಬಳಿಯ ರಂಗರಾಯರದೊಡ್ಡಿ ಕೆರೆ ಕೋಡಿ ಹೊಡೆದ ಪರಿಣಾಮ ಬೆಂಗಳೂರು-ಮೈಸೂರು ರಸ್ತೆಗೆ ನೀರು ನುಗ್ಗಿದ್ದು, ಕೆಲ ಕಾಲ ಪ್ರವಾಹದಂತ ಅನುಭವ ನೀಡಿತ್ತು.

ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗ ಬದಲಾವಣೆ
ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನೀರು ನಿಂತು ಕೆರೆಯಂತಾಗಿದ್ದರಿಂದ ಜೀವ ಕೈಯಲ್ಲಿಡಿದು ವಾಹನ ಚಾಲಕರು ಸಂಚರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನರಿತ ಜಿಲ್ಲಾಡಳಿತ ಬೆಂಗಳೂರು ಮತ್ತು ಮೈಸೂರು ನಡುವಣ ಸಂಚಾರಕ್ಕೆ ರಸ್ತೆ ಬಳಸದಂತೆ ಎಚ್ಚರಿಕೆ ನೀಡಿದ್ದು, ಪರ್ಯಾಯ ಮಾರ್ಗವಾಗಿ ಕನಕಪುರ ಮಾರ್ಗ ಅಥವಾ ಮಾಗಡಿ ಮಾರ್ಗದ ರಸ್ತೆಗಳಲ್ಲಿ ಸಂಚಾರಕ್ಕೆ ಬಳಸುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ವಿಶೇಷವಾಗಿ ಬೆಂಗಳೂರಿನಿಂದ-ಮೈಸೂರಿಗೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅವೈಜ್ಞಾನಿಕ ಕಾಮಗಾರಿಯಾಗಿದೆ ಎಂದು ಆರೋಪಗಳು ಕೇಳಿ ಬರುತ್ತಿವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಳಪೆ ಕಾಮಗಾರಿಯಾಗಿದ್ದು, ರಸ್ತೆ ನಿರ್ಮಾಣದ ವೇಳೆ ಬಿದ್ದ ನೀರು ಮೋರಿ ಅಥವಾ ರಾಜಕಾಲುವೆಗೆ ನೇರವಾಗಿ ಹೋಗುವಂತೆ ಕಾಮಗಾರಿ ನಿರ್ಮಿಸುವಲ್ಲಿ ವಿಫಲವಾಗಿದ್ದೆ ಇದಕ್ಕೆಲ್ಲ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

JJ Perry of Hollywood came to Yash film Toxic

Toxic: ಯಶ್‌ ಚಿತ್ರಕ್ಕೆ ಬಂದ ಹಾಲಿವುಡ್‌ ನ ಜೆ.ಜೆ.ಪೆರ್ರಿ

final Verdict: ಬುಲ್ಡೋಜರ್‌ ನ್ಯಾಯ ಒಪ್ಪಲು ಅಸಾಧ್ಯ: ಸಿಜೆಐ ಚಂದ್ರಚೂಡ್‌ ಅಂತಿಮ ತೀರ್ಪು

Final Verdict: ಬುಲ್ಡೋಜರ್‌ ನ್ಯಾಯ ಒಪ್ಪಲು ಅಸಾಧ್ಯ: ಸಿಜೆಐ ಚಂದ್ರಚೂಡ್‌ ಅಂತಿಮ ತೀರ್ಪು

BGT 2024-25: Australia’s Squad For 1st Test against India announced

BGT: ಭಾರತ ವಿರುದ್ದದ ಮೊದಲ ಟೆಸ್ಟ್‌ ಗೆ ಆಸೀಸ್‌ ತಂಡ ಪ್ರಕಟ; ಒಂದು ಅಚ್ಚರಿಯ ಆಯ್ಕೆ

Pilikulka-Kambala

Kambala: ಪಿಲಿಕುಳ ಜೋಡುಕರೆಯಲ್ಲಿ ಮತ್ತೆ ಮೊಳಗಲಿದೆ ಕಹಳೆಗಳ ಸದ್ದು!

BS-yadiyurappa

Covid Scam: ಕೋವಿಡ್‌ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

Palimaru-Swamji

Waqf Notice: ವಕ್ಫ್ ಬೋರ್ಡ್‌ ರದ್ದತಿಗೆ ಪಕ್ಷಭೇದ ಮರೆತು ಶ್ರಮಿಸಿ: ಪಲಿಮಾರು ಶ್ರೀ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BS-yadiyurappa

Covid Scam: ಕೋವಿಡ್‌ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

Palimaru-Swamji

Waqf Notice: ವಕ್ಫ್ ಬೋರ್ಡ್‌ ರದ್ದತಿಗೆ ಪಕ್ಷಭೇದ ಮರೆತು ಶ್ರಮಿಸಿ: ಪಲಿಮಾರು ಶ್ರೀ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

BJP-JDS-congress-Party

Election Campaign: ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ

Finance-Minister-Nirmala

Loan facility: ಕೇಂದ್ರ ಸರಕಾರದ ಯೋಜನೆಗಳಡಿ ಸಾಲ ಮಂಜೂರು ಹೆಚ್ಚಿಸಿ: ನಿರ್ಮಲಾ

MUST WATCH

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

ಹೊಸ ಸೇರ್ಪಡೆ

JJ Perry of Hollywood came to Yash film Toxic

Toxic: ಯಶ್‌ ಚಿತ್ರಕ್ಕೆ ಬಂದ ಹಾಲಿವುಡ್‌ ನ ಜೆ.ಜೆ.ಪೆರ್ರಿ

final Verdict: ಬುಲ್ಡೋಜರ್‌ ನ್ಯಾಯ ಒಪ್ಪಲು ಅಸಾಧ್ಯ: ಸಿಜೆಐ ಚಂದ್ರಚೂಡ್‌ ಅಂತಿಮ ತೀರ್ಪು

Final Verdict: ಬುಲ್ಡೋಜರ್‌ ನ್ಯಾಯ ಒಪ್ಪಲು ಅಸಾಧ್ಯ: ಸಿಜೆಐ ಚಂದ್ರಚೂಡ್‌ ಅಂತಿಮ ತೀರ್ಪು

BGT 2024-25: Australia’s Squad For 1st Test against India announced

BGT: ಭಾರತ ವಿರುದ್ದದ ಮೊದಲ ಟೆಸ್ಟ್‌ ಗೆ ಆಸೀಸ್‌ ತಂಡ ಪ್ರಕಟ; ಒಂದು ಅಚ್ಚರಿಯ ಆಯ್ಕೆ

Pilikulka-Kambala

Kambala: ಪಿಲಿಕುಳ ಜೋಡುಕರೆಯಲ್ಲಿ ಮತ್ತೆ ಮೊಳಗಲಿದೆ ಕಹಳೆಗಳ ಸದ್ದು!

BS-yadiyurappa

Covid Scam: ಕೋವಿಡ್‌ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.