ಪಂಚಸೂತ್ರದ ಮೂಲಕ ಭಾರತ್ ಜೋಡೋ ಯಾತ್ರೆ: ಡಿ.ಕೆ ಶಿವಕುಮಾರ್


Team Udayavani, Aug 28, 2022, 2:07 PM IST

tdy-7

ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧೀಜಿಯವರ ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಪ್ರದೇಶ ಕಾಂಗ್ರಸ್ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಭಾನುವಾರ ಯಾತ್ರೆಯ ಲೋಗೊ ಬಿಡುಗಡೆ ಗೊಳಿಸಿದರು.

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಸಲೀಂ ಅಹಮದ್, ರಾಮಲಿಂಗಾ ರೆಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಡಿ.ಕೆ ಶಿವಕುಮಾರ್ ಮಾತನಾಡಿ, ಭಾರತ ಐಕ್ಯತೆ ಯಾತ್ರೆ ಗುಂಡ್ಲುಪೇಟೆಯಿಂದ ಪ್ರಾರಂಭ ಆಗಲಿದೆ. 21 ದಿನ ಕರ್ನಾಟಕದಲ್ಲಿ ರೂಟ್ ಫಿಕ್ಸ್ ಮಾಡಿದ್ದೇವೆ. ಪ್ರತಿದಿನ‌ 25 ಕಿಮೀ ನಂತೆ ಪಾದಯಾತ್ರೆ ನಡೆಯುತ್ತದೆ. ಭಾರತವನ್ನು ಒಗ್ಗೂಡಿಸುವ ಐಕ್ಯತೆ ಮಾಡುವ ಕೆಲಸ ಮಾಡುತ್ತೇವೆ ಎಂದರು.

ಇದು ಕೇವಲ ಪಕ್ಷದ ಕಾರ್ಯಕ್ರಮ ಅಲ್ಲ, ಭಾರತವನ್ನು ಓಗ್ಗೂಡಿಸುವ ಕೆಲಸದಲ್ಲಿ ಯಾರು ಬೇಕಾದರೂ ಹೆಜ್ಜೆ ಹಾಕಬಹುದು. ಬಳ್ಳಾರಿ ಮೇಕೆದಾಟು ಸ್ವಾತಂತ್ರ್ಯ ನಡಿಗೆ ಬಳಿಕ ಇದು ಮಹತ್ವ ಪಡೆದುಕೊಂಡಿದೆ ಎಂದರು.

ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗ್ತಿದ್ದಾರೆ. ಯುವಕರಿಗೆ ಉದ್ಯೋಗ ಸಿಗದೇ ಮಾನಸಿಕ ಒತ್ತಡ ಆಗ್ತಿದೆ. ಖಾಸಗಿಯಾಗಿ ಅಥವಾ ಸರ್ಕಾರಿ ಉದ್ಯೋಗ‌ ನೀಡಬೇಕು. ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಸರ್ಕಾರ ರಚನೆ ಆಗಬೇಕು. ರಾಜ್ಯದಲ್ಲಿ ಇರುವ ಪ್ರತಿ ರೈತನ ಬದುಕು ಹಸನಾಗಬೇಕು. ಎಲ್ಲರಿಗೂ ಉತ್ತಮವಾದ ವಾತಾವರಣ ನಿರ್ಮಾಣ ಮಾಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಮುರುಘಾ ಶ್ರೀಗಳ ವಿರುದ್ಧ ಕೇಳಿ ಬಂದಿರುವ ಆರೋಪ ಸುಳ್ಳು: ಬಿಎಸ್‌ ವೈ

ಹಸ್ತದಲ್ಲಿ 5 ಬೆರಳುಗಳು ಇರುವ ರೀತಿ ಪಂಚಸೂತ್ರದ ಮೂಲಕ ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಾಣ ಮಾಡಬೇಕಿದೆ. ಭಾರತ್ ಜೋಡೋ ಯಾತ್ರೆ ಹೊಸ ಟ್ರೆಂಡ್ ಸೆಟ್ ಮಾಡುತ್ತದೆ ಎಂಬ ನಂಬಿಕೆ ಇದೆ. ಇಡೀ ದೇಶಕ್ಕೆ ಈ ಯಾತ್ರೆ ಮಾದರಿಯಾಗುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಕನ್ಯಾಕುಮಾರಿಯಿಂದ ರಾಹುಲ್​ ಗಾಂಧಿ ಪಾದಯಾತ್ರೆ ನಡೆಯಲಿದ್ದು, ಸೆ.7ರಿಂದ 19 ದಿನ ಕೇರಳ, 4 ದಿನ ತಮಿಳುನಾಡಿನಲ್ಲಿ ಸಾಗುತ್ತೆ. ರಾಹುಲ್ ಗಾಂಧಿ​ ಜೊತೆಗೆ 125 ಜನರು ಪಾಲ್ಗೊಳ್ಳಲಿದ್ದಾರೆ. 12 ರಾಜ್ಯ, 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಾದುಹೋಗುತ್ತೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ತಿಳಿಸಿದರು. ಕರ್ನಾಟಕದಲ್ಲಿ 511 ಕಿ.ಮೀ., 21 ದಿನಗಳ ಕಾಲ ಪಾದಯಾತ್ರೆ ನಡೆಯಲಿದ್ದು, ಕರ್ನಾಟಕದ 125 ಜನ ಪಾದಯಾತ್ರೆಯಲ್ಲಿ ಭಾಗಿಯಾಗುತ್ತಾರೆ ಎಂದು ಹೇಳಿದರು

ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ,ದೇಶವನ್ನು ಒಗ್ಗೂಡಿಸಲು, ದೇಶಾಭಿಮಾನ, ಜನರನ್ನು ಒಗ್ಗೂಡಿಸಲು, ಸಾಮರಸ್ಯ ಮೂಡಿಸಲು, ಜನರ ಸಮಸ್ಯೆ ಅರಿಯಲು ರಾಹುಲ್​ ಗಾಂಧಿಯಿಂದ ಪಾದಯಾತ್ರೆ ಮಾಡಲಾಗುತ್ತಿದೆ. ದೇಶದ 130 ಕೋಟಿ ಜನರು ಸಾಮರಸ್ಯದಿಂದ ಬದುಕಬೇಕಾಗಿದೆ. ಭಾರತ ಐಕ್ಯತಾ ಯಾತ್ರೆ ಹೆಸರಿನಲ್ಲಿ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಹೇಳಿದರು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.