ಡಿಎಂಎಸ್‌ಎಸ್‌ನಿಂದ ನಾಡಿದ್ದು ಪ್ರತಿಭಟನೆ: ಮುಗುಟಿ


Team Udayavani, Aug 28, 2022, 3:48 PM IST

10-maruthi

ಸೇಡಂ: ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ದಲಿತರ ಅಭಿವೃದ್ಧಿ ಕಡೆಗಣಿಸಿದ್ದು, ಹಿಂದಿನ ಯೋಜನೆಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿ ದಲಿತ ಸಮನ್ವಯ ಸಮಿತಿಯಿಂದ ಆ.30ರಂದು ಕಲಬುರಗಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಮಾದಿಗ ಸಮನ್ವಯ ಸಮಿತಿ ತಾಲೂಕಾಧ್ಯಕ್ಷ ಮಾರುತಿ ಮುಗುಟಿ ಹೇಳಿದರು.

ಈ ಹಿಂದೆ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಎಚ್‌. ಆಂಜನೇಯ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದಾಗ ದಲಿತರ ಅಭಿವೃದ್ಧಿಗಾಗಿ ಮಹಿಳಾ ಸಮೃದ್ಧಿ, ಅಂಗವಿಕಲ, ಟಮೈಕೋ ಕ್ರೆಡಿಟ್‌, ಉದ್ಯಮಶೀಲತಾ ಯೋಜನೆ ಸಹಾಯಧನ, ಗಂಗಾ ಕಲ್ಯಾಣ, ಐರಾವತ, ಪ್ರಭುತ್ವ ಯೋಜನೆ, ಡಾ|ಬಿ. ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮ, ಆದಿ ಜಾಂಬವ ಅಭಿವೃದ್ಧಿ ನಿಗಮದಿಂದ ಅನೇಕ ಸೌಲಭ್ಯಗಳನ್ನು ನೀಡುವುದರ ಜೊತೆಗೆ ಸಾಲ ಸೌಲಭ್ಯ ನೀಡುತ್ತಿದ್ದರು. ಇಂತಹ ಯೋಜನೆಗಳ ಮೂಲಕ ದಲಿತರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದರು. ಆದರೆ ಬಿಜೆಪಿ ಸರ್ಕಾರ ಈ ಹಿಂದಿನ ಅನೇಕ ಯೋಜನೆಗಳ ಸಹಾಯಧನ ಮತ್ತು ಇತರೆ ಸೌಲಭ್ಯಗಳನ್ನು ಕಡಿಮೆ ಮಾಡಿದೆ ಎಂದು ಆರೋಪಿಸಿದರು.

ಸೆ.17ರಂದು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಗೆ ಮುಖ್ಯಮಂತ್ರಿ ಕಲಬುರಗಿಗೆ ಆಗಮಿಸುತ್ತಿದ್ದಾರೆ. ಅಂದು ಕಪ್ಪು ಬಾವುಟ ಪ್ರದರ್ಶನ ಮಾಡಿ ಸಿಎಂಗೆ ಘೇರಾವ್‌ ಹಾಕಲಾಗುವುದು. ಮುಂದಿನ ದಿನಗಳಲ್ಲಿ ಯಾವುದೇ ಸಚಿವರು ಕಲಬುರಗಿಗೆ ಬಂದರೆ ಅವರಿಗೂ ಘೇರಾವ್‌ ಹಾಕಲಾಗುವದು ಎಂದು ಎಚ್ಚರಿಸಿದರು.

ಸಂಘಟನೆ ಪ್ರಧಾನ ಕಾರ್ಯದರ್ಶಿ ಅಶೋಕ ಫಿರಂಗಿ ಮಾತನಾಡಿ, ಹಿಂದಿನ ಯೋಜನೆಗಳನ್ನು ಯಥಾವತ್ತಾಗಿ ಮುಂದುವರಿಸುವಂತೆ ಹಾಗೂ ದಲಿತ ವಿರೋಧ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಕಲಬುರಗಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಡಾ|ಬಾಬು ಜಗಜೀವನರಾಮ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು.

ಡಿಎಂಎಸ್‌ಎಸ್‌ ಮಹಿಳಾ ಘಟಕದ ಅಧ್ಯಕ್ಷೆ ಅಮೃತಮ್ಮ ದುಗನೂರ ಮಾತನಾಡಿ, ಕಲಬುರಗಿಯಲ್ಲಿ ನಡೆಯುವ ಪ್ರತಿಭಟನೆಗೆ ತಾಲೂಕಿನಿಂದ 200 ಮಹಿಳೆಯರು ತೆರಳುತ್ತಿದ್ದೇವೆ ಎಂದು ತಿಳಿಸಿದರು. ಡಿಎಂಎಸ್‌ಎಸ್‌ನ ತಾಲೂಕು ಗೌರವಾಧ್ಯಕ್ಷ ವೆಂಕಟಪ್ಪ ಮೋತಕಪಲ್ಲಿ, ವಲಯ ಅಧ್ಯಕ್ಷ ಭೀಮು ಮುಧೋಳ, ತಾಲೂಕು ಪ್ರಧಾನ ಕಾರ್ಯದರ್ಶಿ ಭಗವಾನ ದೊಡಮನಿ ಇದ್ದರು.

ಟಾಪ್ ನ್ಯೂಸ್

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

UV Interview: ಕೇಂದ್ರದ ಎಥೆನಾಲ್‌ ನೀತಿಯಿಂದ ರೈತರಿಗಿಲ್ಲ ಲಾಭ…

UV Interview: ಕೇಂದ್ರದ ಎಥೆನಾಲ್‌ ನೀತಿಯಿಂದ ರೈತರಿಗಿಲ್ಲ ಲಾಭ…

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Suri Loves Sandhya movie teaser

Suri Loves Sandhya: ಟೀಸರ್‌ನಲ್ಲಿ ಸೂರಿ ಲವ್‌ ಸ್ಟೋರಿ

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

3

Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.