ಅಕ್ಟೋಬರ್ 17 ರಂದು ಕೈ ಅಧ್ಯಕ್ಷೀಯ ಚುನಾವಣೆ; ಸೆ.24ರಿಂದ ನಾಮಪತ್ರ ಸಲ್ಲಿಕೆ
Team Udayavani, Aug 28, 2022, 4:45 PM IST
ನವದೆಹಲಿ: ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಪಕ್ಷದ ಪೂರ್ಣಾವಧಿ ಅಧ್ಯಕ್ಷರ ಚುನಾವಣೆಯನ್ನು ಅಕ್ಟೋಬರ್ 17 ರಂದು ನಡೆಸಲು ನಿರ್ಧರಿಸಿದೆ.
ಚುನಾವಣಾ ಅಧಿಸೂಚನೆಯನ್ನು ಸೆಪ್ಟೆಂಬರ್ 22 ರಂದು ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಕೆ ಸೆ. 24 ರಂದು ಪ್ರಾರಂಭವಾಗಿ ಸೆ. 30 ರವರೆಗೆ ಮುಂದುವರಿಯುತ್ತದೆ ಎಂದು ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಸುಮಾರು 30 ನಿಮಿಷಗಳ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.
ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದಲ್ಲಿ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದೆ, ಅಗತ್ಯವಿದ್ದರೆ ಮತಗಳ ಎಣಿಕೆ ಅಕ್ಟೋಬರ್ 19 ರಂದು ನಡೆಯಲಿದೆ ಎಂದು ತಿಳಿಸಿದ್ದಾರೆ.
ಶುಕ್ರವಾರ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರ ಆಘಾತಕಾರಿ ರಾಜೀನಾಮೆ ಬಳಿಕ ಪಕ್ಷದಲ್ಲಿ ಹೊಸ ಕೋಲಾಹಲದ ನಡುವೆಯೇ ಕಾಂಗ್ರೆಸ್‌ನ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಸಿಡಬ್ಲ್ಯೂಸಿ ಸಭೆ ನಡೆಯಿತು.
22 ವರ್ಷಗಳ ಹಿಂದೆ:
2 ಸಾವಿರನೇ ಇಸ್ವಿಯ ನವೆಂಬರ್‌ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಆ ಸಂದರ್ಭದಲ್ಲಿ ಸದ್ಯ ಬಿಜೆಪಿಯಲ್ಲಿರುವ ಜಿತೇಂದ್ರ ಪ್ರಸಾದ, ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. 1997ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಸೀತಾರಾಂ ಕೇಸರಿ ಅವರು ಶರದ್ ಪವಾರ್ ಮತ್ತು ರಾಜೇಶ್ ಪೈಲಟ್ ಅವರನ್ನು ಸೋಲಿಸಿದ್ದರು.
ಕಾಂಗ್ರೆಸ್‌ನಲ್ಲಿ ಪ್ರಜಾಪ್ರಭುತ್ವಕ್ಕೆ ಅವಕಾಶವೇ ಇಲ್ಲ ಮತ್ತು ವಂಶಪಾರಂರಪರ್ಯ ಅಧಿಕಾರಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂಬ ಬಿಜೆಪಿಯ ಕಟು ಟೀಕೆ ಮಾಡುತ್ತಾ ಬಂದಿರುವಂತೆಯೇ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದೆ. 2017ರಿಂದ 2019ರ ವರೆಗೆ ರಾಹುಲ್ ಗಾಂಧಿಯವರು ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಉಳಿದಂತೆ ಸೋನಿಯಾ ಗಾಂಧಿಯವರೇ 1999ರಿಂದ 2017ರ ವರೆಗೆ ಸತತವಾಗಿ ಅಧ್ಯಕ್ಷರಾಗಿದ್ದರು. 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಬಳಿಕ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿಯವರು ರಾಜೀನಾಮೆ ನೀಡಿದ್ದರು. ಅಲ್ಲಿಂದ ಇದುವರೆಗೆ ಸೋನಿಯಾ ಗಾಂಧಿಯವರು ಹಂಗಾಮಿ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ.
ಮುಂದೂಡಿಕೆ:
ಈ ವರ್ಷದ ಆ.21ರಿಂದ ಸೆ.20ರ ಒಳಗಾಗಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ ಎಂದು 2021ರ ಅಕ್ಟೋಬರ್‌ನಲ್ಲಿ ಕಾಂಗ್ರೆಸ್ ಪ್ರಕಟಿಸಿತ್ತು. ಈಗ ಈ ವೇಳಾಪಟ್ಟಿಯನ್ನು ಬದಲಿಸಿ, ಅಕ್ಟೋಬರ್ 19ರ ಒಳಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.