ಸೊನಾಲಿ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರ?
Team Udayavani, Aug 28, 2022, 8:54 PM IST
ಪಣಜಿ: ಗೋವಾದಲ್ಲಿ ಇತ್ತೀಚೆಗೆ ಕೊಲೆಯಾದ ಹರ್ಯಾಣದ ಬಿಜೆಪಿ ನಾಯಕಿ ಸೊನಾಲಿ ಫೋಗಟ್ ಅವರ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ(ಸಿಬಿಐ)ಕ್ಕೆ ಹಸ್ತಾಂತರಿಸಲು ಸಿದ್ಧ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.
ಭಾನುವಾರ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ಸೊನಾಲಿ ಅವರ ಕುಟುಂಬ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ, ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲು ಮನವಿ ಮಾಡಿದ್ದಾರೆ. ಈ ಬಗ್ಗೆ ಹರ್ಯಾಣ ಸಿಎಂ ನಮ್ಮೊಂದಿಗೆ ಮಾತನಾಡಿದ್ದಾರೆ. ಪ್ರಕರಣವನ್ನು ಹಸ್ತಾಂತರಿಸಲು ನಮಗೆ ಯಾವುದೇ ಅಭ್ಯಂತರವಿಲ್ಲ. ಅವಶ್ಯಕತೆಯಿದ್ದರೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗುವುದು’ ಎಂದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಡ್ರಗ್ ಡೀಲರ್ ಅನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಐವರ ಬಂಧನವಾದಂತಾಗಿದೆ. ಈಗಾಗಲೇ ಬಂಧಿತನಾಗಿರುವ ಡ್ರಗ್ಸ್ ಡೀಲರ್ ದತ್ತಪ್ರಸಾದ್ ಗಾಂವ್ಕರ್‌ಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಡೀಲರ್ ರಾಮ ಮಂಡ್ರೇಕರ್ ಬಂಧಿತ ಆರೋಪಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್
ಮಣಿಪುರವನ್ನು ರಕ್ಷಿಸಿ: ರಾಷ್ಟ್ರಪತಿಗೆ ಖರ್ಗೆ ಪತ್ರ
Chennai: ಕೃಷ್ಣಗೆ ಎಂ.ಎಸ್.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್ ಹೈಕೋರ್ಟ್ ತಡೆ
Savarkar defamation case:: ಡಿ.2ರಂದು ಖುದ್ದು ಹಾಜರಾಗಲು ರಾಹುಲ್‌ಗೆ ಆದೇಶ
Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.