![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 28, 2022, 10:30 PM IST
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಒಡಕಿಲ್ಲ, ಯಾರು ಕೂಡ ಪಕ್ಷ ತೊರೆಯುವುದಿಲ್ಲ. ಆದರೆ, ಮುಂದಿನ ಎರಡು ತಿಂಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಕೆಲ ಶಾಸಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೇಳಿದರು.
ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಬೆನ್ನಲ್ಲೇ ಕಾಂಗ್ರೆಸ್‌ನ ಕೆಲ ಹಿರಿಯರು “ಕಾಂಗ್ರೆಸ್ ಚೋಡೋ’ ಮಾಡುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಆ ರೀತಿಯ ವಾತಾವರಣ ಇಲ್ಲ ಎಂದು ಸ್ಪಷ್ಟಪಡಿಸಿದರು. ದಾವಣಗೆರೆಯಲ್ಲಿ ನಡೆದ ಸಮಾವೇಶ ಮತ್ತು ಸ್ವತಂತ್ರ ನಡಿಗೆ ಕಾರ್ಯಕ್ರಮಗಳಿಗೆ ಜನರು ಸೇರಿರುವುದನ್ನು ನೋಡಿ ಆಡಳಿತ ಪಕ್ಷ ಬಿಜೆಪಿ ಮುಖಂಡರಿಗೆ ಭಯ, ಆತಂಕ ಎರಡೂ ಕಾಡತೊಡಗಿದೆ. ಶೀಘ್ರದಲ್ಲೇ ಬಿಜೆಪಿ ಮತ್ತು ಜೆಡಿಎಸ್‌ನ ಕೆಲ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದರು.
ಬಿಜೆಪಿ ಅಧ್ಯಕ್ಷರ ಬದಲಾವಣೆ ಅದು ಆ ಪಕ್ಷದ ಆಂತರಿಕ ವಿಚಾರ. ಆದರೆ, ಒಂದು ವಾರದ ಹಿಂದಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದು ಹೇಳುತ್ತಿದ್ದರು. ಆದರೆ, ಈಗ ಸಾಮೂಹಿಕ ನಾಯಕತ್ವದ ಜಪ ಮಾಡುತ್ತಿದ್ದಾರೆ. ಸರ್ಕಾರ ಯಾವ ರೀತಿಯಲ್ಲಿ ನಡೆಯುತ್ತಿದೆ ಎಂಬುವುದನ್ನು ಆ ಪಕ್ಷದ ವರ್ತನೆಗಳಿಗೆ ಹೇಳುತ್ತಿವೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿರುವ ಭ್ರಷ್ಟ ಸರ್ಕಾರವನ್ನು ಜನರು ಕಿತ್ತೂಗೆಯಲಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಕಾರ್ಯಕ್ರಮ ದೇಶದ ಎಲ್ಲ ಜರನ್ನು ಒಗ್ಗೂಡಿಸುವ ಕಾರ್ಯಕ್ರಮ ಆಗಲಿದೆ. ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಭ್ರಷ್ಟ ಆಡಳಿತವನ್ನು, ಕರ್ಮಕಾಂಡವನ್ನು ಕೂಡ ಯಾತ್ರೆ ವೇಳೆ ಜನರ ಮುಂದಿಡುವುದಾಗಿ ತಿಳಿಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.