ಮಿಸ್ ದಿವಾ ಯೂನಿವರ್ಸ್- 2022 ಕಿರೀಟ ಮುಡಿಗೇರಿಸಿಕೊಂಡ ಮಂಗಳೂರಿನ ಬ್ಯೂಟಿ ದಿವಿತಾ ರೈ
ತೆಲಂಗಾಣದ ಪ್ರಜ್ಞಾ ಅಯ್ಯಗಾರಿ ಮುಡಿಗೆ ಮಿಸ್ ದಿವಾ ಸೂಪರ್‌ನ್ಯಾಷನಲ್
Team Udayavani, Aug 29, 2022, 1:21 PM IST
ಮುಂಬಯಿ: ಮಿಸ್ ದಿವಾ ಯೂನಿವರ್ಸ್ 2022 ಕಿರೀಟವನ್ನು ಈ ಬಾರಿ ಮಂಗಳೂರಿನ ದಿವಿತಾ ರೈ ತನ್ನ ಮುಡಿಗೇರಿಸಿಕೊಂಡಿದ್ದಾರೆ.2021ರ ಮಿಸ್ ಯುನಿವರ್ಸ್ ಹರ್ನಾಜ್ ಸಂಧು ಅವರು ಭಾನುವಾರ ಸಂಜೆ ಮುಂಬೈನಲ್ಲಿ ನಡೆದ ಗಣ್ಯರು ಸಿನಿಮಾ ತಾರೆಯರಿಂದ ತುಂಬಿದ್ದ ಸಮಾರಂಭದಲ್ಲಿ 23 ವರ್ಷದ ದಿವಿತಾ ರೈ ಅವರಿಗೆ ಮಿಸ್ ದಿವಾ ಯುನಿವರ್ಸ್ 2022ರ ಕಿರೀಟ ತೊಡಿಸಿದರು.
ಮಿಸ್ ಯುನಿವರ್ಸ್‌ನ ಅಧಿಕೃತ ಇನ್ಸ್ಟಾಗ್ರಾಮ್ ಪೇಜ್‌ನಲ್ಲಿ ಹರ್ನಾಜ್ ಸಂಧು ಅವರು ದಿವಿತಾ ರೈ ಅವರಿಗೆ ಕಿರೀಟ ತೊಡಿಸುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಇದೇ ವೇಳೆ ತೆಲಂಗಾಣ ಮೂಲದ ಪ್ರಜ್ಞಾ ಅಯ್ಯಗಾರಿ ಅವರು ಮಿಸ್ ದಿವಾ ಸೂಪರ್‌ನ್ಯಾಷನಲ್ 2022 ಆಗಿ ಆಯ್ಕೆಯಾಗಿದ್ದಾರೆ.
ಹರ್ನಾಜ್ ಸಂಧು ಅವರು ಕಿರೀಟವನ್ನು ತೆಗೆದು ದೀವಿತಾ ರೈ ಅವರಿಗೆ ತೊಡಿಸಿದ್ದಾರೆ. ನಂತರ ಇಬ್ಬರು ಸುಂದರಿಯರು ಜೊತೆಯಾಗಿ ರಾಂಪ್‌ನಲ್ಲಿ ಹೆಜ್ಜೆ ಇಡುವ ಮೂಲಕ ವೇದಿಕೆಗೆ ಇನ್ನಷ್ಟು ಕಳೆತಂದಿದ್ದರು.
View this post on Instagram
ಇದನ್ನೂ ಓದಿ:ಕೋಬ್ರಾ ಜೊತೆ ಶ್ರೀನಿಧಿ ಎಂಟಿ: ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಕೆಜಿಎಫ್ ಚೆಲುವೆ
ಮಂಗಳೂರಿನಲ್ಲಿ ಜನಿಸಿದ ದಿವಿತಾ ರೈ ಅವರು ದಿಲೀಪ್ ರೈ ಹಾಗೂ ಪವಿತ್ರಾ ದಂಪತಿಯ ಪುತ್ರಿ. ತಂದೆ ಸರ್ಕಾರಿ ನೌಕರಿಯಲ್ಲಿ ಇದ್ದುದರಿಂದ ದೇಶದ ವಿವಿಧ ನಗರಗಳಲ್ಲಿ ಅವರು ವಿದ್ಯಾಭ್ಯಾಸ ಮಾಡಿದ್ದಾರೆ. ಈಕೆ ಆರ್ಕಿಟೆಕ್ಟ್ ಓದಿದ್ದು, ಮಾಡೆಲ್ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು, ಇದರೊಂದಿಗೆ ಅವರು ಬ್ಯಾಡ್ಮಿಂಟನ್, ಬಾಸ್ಕೆಟ್‌ಬಾಲ್, ಪೈಂಟಿಂಗ್ ನಲ್ಲಿ ಆಸಕ್ತಿ ಹೊಂದಿದ್ದಾರೆ. ಸಂಗೀತ ಕೇಳುವುದು, ಪುಸ್ತಕ ಓದುವುದು ಇವರ ಹವ್ಯಾಸವಾಗಿದೆ. ಇದರೊಂದಿಗೆ ಅವರು 71ನೇ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.