ಸೆಪ್ಟೆಂಬರ್ -ಅಕ್ಟೋಬರ್ ತಿಂಗಳಲ್ಲಿ ರಾಜ್ಯದ ಆರು ಕಡೆಗಳಲ್ಲಿ ದೊಡ್ಡ ರ್ಯಾಲಿ: ಸಿಎಂ
Team Udayavani, Aug 29, 2022, 3:09 PM IST
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಪಕ್ಷದ ಸಂಘಟನೆ, ಪ್ರವಾಸ, ಜನಸಂಪರ್ಕದ ಬಗ್ಗೆ ಚರ್ಚೆ ಮಾಡಿದ್ದು , ಆರು ಕಡೆ ದೊಡ್ಡ ರ್ಯಾಲಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿಳಿಸಿದರು.
ಮಾಜಿ.ಮುಖ್ಯ ಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಯಡಿಯೂರಪ್ಪ ಅವರು ಪಕ್ಷದ ಸಂಘಟನೆಯ ಬಗ್ಗೆ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ದಿಲ್ಲಿಗೆ ಹೋಗಿ ಭೇಟಿಯಾಗಿ ಬಂದಿದ್ದಾರೆ. ಅಲ್ಲಿಯ ಮಾತುಕತೆ, ಸೂಚನೆಯ ಬಗ್ಗೆ ವಿವರವಾಗಿ ಚರ್ಚೆ ಮಾಡಿದ್ದೇವೆ. ನಮ್ಮ ಪ್ರಧಾನಮಂತ್ರಿ ಗಳು ಸೆಪ್ಟೆಂಬರ್ 02 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅವರು ಭೇಟಿ ನೀಡುವ ಸಂದರ್ಭದಲ್ಲಿ ಪಕ್ಷದ ವತಿಯಿಂದ ಮಾಡಬೇಕಿರುವ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಸುದೀರ್ಘ ವಾಗಿ ಚರ್ಚೆ ಮಾಡಿದ್ದೇವೆ ಎಂದರು.
ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಅರುಣ್ ಸಿಂಗ್ ಅವರು ವಿವಿಧ ತಂಡಗಳಲ್ಲಿ ಪ್ರವಾಸ ಮಾಡುವ ಬಗ್ಗೆ ಚರ್ಚೆಯಾಗಿದೆ. ಬರುವ ದಿನಗಳಲ್ಲಿ ಇನ್ನೊಂದು ಸಭೆಯನ್ನು ರಾಜ್ಯ ಮಟ್ಟದ ಹಿರಿಯ ನಾಯಕರೊಂದಿಗೆ ನಡೆಸಿ, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಕಾರ್ಯಕ್ರಮದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ನಿರ್ಣಯವಾಗಿದೆ. ಸೆಪ್ಟೆಂಬರ್ 08 ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅದನ್ನು ಯಶಸ್ವಿ ಮಾಡಲು ಕೆಲವು ಸೂಚನೆ ಗಳನ್ನು ನೀಡಿದ್ದಾರೆ. ಅದನ್ನು ಕಾರ್ಯಗತ ಮಾಡಲು ಸಂಘಟಕರಿಗೆ ತಿಳಿಸಲಾಗಿದೆ.ಸಚಿವ ಡಾ.ಸುಧಾಕರ್, ಶಾಸಕರು, ಪದಾಧಿಕಾರಿಗಳು ಎಲ್ಲರೂ ಸೇರಿ ಜನೋತ್ಸವ ಯಶಸ್ವಿ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.