ಗಣೇಶ ವಿಸರ್ಜನೆ: ಸೆ.2 ರಂದು ಮಂಗಳೂರು ನಗರದ ಕಮೀಷನರೇಟ್ ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ರಜೆ
Team Udayavani, Aug 30, 2022, 4:16 PM IST
ಮಂಗಳೂರು: ಗಣೇಶೋತ್ಸವದ ಹಿನ್ನೆಲೆಯಲ್ಲಿ ಅನೇಕ ಕಡೆಗಳಲ್ಲಿ ಗಣಪತಿ ವಿಗ್ರಹದ ವಿಸರ್ಜನೆಯ ಶೋಭಾಯಾತ್ರೆ ನಡೆಯಲಿರುವುದರಿಂದ ಸೆ. 2 ರಂದು (ಶುಕ್ರವಾರ) ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ಸೆ.2 ರಂದು ಮಂಗಳೂರು ಕಮೀಷನರ್ ವ್ಯಾಪ್ತಿಯಲ್ಲಿ ಅನೇಕ ಕಡೆಗಳಲ್ಲಿ ಗಣಪತಿ ವಿಗ್ರಹಗಳು ವಿಸರ್ಜನೆಯಾಗಲಿವೆ. ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆಗಳಿರುವುದರಿಂದ, ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ, ಸ್ನಾತಕೋತ್ತರ,ಡಿಪ್ಲೋಮಾ, ಐಟಿಐ, ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.
ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಂಡು ಹೋಗಬೇಕೆಂದು ಆದೇಶದಲ್ಲಿ ಹೇಳಲಾಗಿದೆ.
ಸೆ. 2 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡ ಮಂಗಳೂರಿಗೆ ಬರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.