ಪರಿಸರ ಉಳಿಸಿ ಮುಂದಿನ ಪೀಳಿಗೆಗೆ ಕೊಡುಗೆ ನೀಡಿ
Team Udayavani, Aug 30, 2022, 6:06 PM IST
ಅಫಜಲಪುರ: ಸ್ವಾತಂತ್ರ್ಯ ಬಂದಾಗ ದೇಶದ ಜನಸಂಖ್ಯೆ 30ಕೋಟಿಯಷ್ಟಿತ್ತು. ಆದರೆ ಈಗ 130 ಕೋಟಿಯಾಗಿದೆ. ಹೆಚ್ಚಾದ ಜನಸಂಖ್ಯೆಯಿಂದ ನಾವು ಪರಿಸರ ನಾಶ ಮಾಡಿದ್ದೇವೆ. ಅದರ ದುಷ್ಪರಿಣಾಮವನ್ನು ಅನುಭವಿಸುತ್ತಿದ್ದೇವೆ ಎಂದು ಮಾಜಿ ಜಿ.ಪಂ ಸದಸ್ಯ ಅರುಣಕುಮಾರ ಪಾಟೀಲ ಕಳವಳ ವ್ಯಕ್ತಪಡಿಸಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ, ತಂತ್ರಜ್ಞಾನ ಕೌನ್ಸಿಲ್, ಅರಣ್ಯ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ನಡೆದ ವಿಶ್ವ ಜೈವಿಕ ಇಂಧನ ದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಮಾಡಿದ ತಪ್ಪಿಗೆ ನಾವೇ ಪರಿಸರವನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಗಿಡಮರಗಳನ್ನು ನೆಟ್ಟು ಬೆಳೆಸೋಣ ಎಂದರು.
ಅರಣ್ಯ ಇಲಾಖೆ ಅಧಿಕಾರಿ ಶಿವಗೊಂಡ ಪೂಜಾರಿ ಮಾತನಾಡಿ, ಅರಣ್ಯ ಇಲಾಖೆ ಯಾವಾಗಲೂ ಅರಣ್ಯ ರಕ್ಷಣೆಗೆ ಸಿದ್ಧವಿದೆ. ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಹೆಚ್ಚು ಗಿಡಮರಗಳನ್ನು ಹಚ್ಚುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.
ಬಿಎ 6ನೇ ಸೆಮಿಸ್ಟರ್ ವಿದ್ಯಾರ್ಥಿನಿ ಕಾವ್ಯ ಜೈವಿಕ ಇಂಧನದ ಲಾಭಗಳ ಕುರಿತು ಮಾತನಾಡಿದರು. ವಿಜ್ಞಾನಿ ಡಾ|ಎಂ.ಎಸ್ ಜೋಗದ್ ಉಪನ್ಯಾಸ ನೀಡಿದರು. ಮುಖಂಡರಾದ ಡಾ|ಸೂಗೂರೇಶ್ವರ ಆರ್.ಎಂ, ಡಾ|ವಿನಾಯಕ ಜಿ.ಕೆ, ಡಾ|ಸುರೇಖಾ ಕರೂಟಿ, ಡಾ|ಸಂಗಣ್ಣ ಎಂ ಸಿಂಗೆ ಆನೂರ, ಡಾ|ಶಾಂತಪ್ಪ ಮೇಲಕೇರಿ, ಗೌರಿಶಂಕರ ಭೂರೆ, ವೈಜನಾಥ ಭಾವಿ, ಹೀರೂ ರಾಠೊಡ, ಮುಖಂಡರಾದ ಸದಾಶಿವ ಮೇತ್ರಿ, ಅಂಬರೀಷ ಬುರಲಿ, ಪ್ರವೀಣ ಕಲ್ಲೂರ ಹಾಗೂ ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.