ಮನೆ ಕೆಲಸದಾಕೆಗೆ ಚಿತ್ರಹಿಂಸೆ ನೀಡಿದ ಆರೋಪ: ಬಿಜೆಪಿ ನಾಯಕಿ ಬಂಧನ
Team Udayavani, Aug 31, 2022, 10:37 AM IST
ರಾಂಚಿ: ಮನೆ ಕೆಲಸದಾಕೆಗೆ ಚಿತ್ರಹಿಂಸೆ ನೀಡಿದ ಆರೋಪದಲ್ಲಿ ಅಮಾನತುಗೊಂಡಿರುವ ಬಿಜೆಪಿ ನಾಯಕಿ ಸೀಮಾ ಪಾತ್ರಾ ಅವರನ್ನು ಬಂಧಿಸಲಾಗಿದೆ.
ಸುನೀತಾ ಎಂದು ಗುರುತಿಸಲಾದ ಕೆಲಸದಾಳುವಿಗೆ ಸೀಮಾ ಟಾಯ್ಲೆಟ್ ಅನ್ನು ನಾಲಿಗೆಯಿಂದ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಪ್ರಕರಣ ಬಯಲಿಗೆ ಬಂದ ಬಳಿಕ ಜಾರ್ಖಂಡ್ ಬಿಜೆಪಿ ಅವರನ್ನು ಅಮಾನತುಗೊಳಿಸಿತ್ತು. ಇದರ ಬೆನ್ನಲ್ಲೇ ಅವರನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಪ್ರಧಾನಿ ಸ್ವಾಗತಕ್ಕೆ ಮಂಗಳೂರು ಸಜ್ಜು : ವ್ಯಾಪಕ ಭದ್ರತೆ, ನಗರದಲ್ಲಿ ಕಟ್ಟೆಚ್ಚರ
ಸೀಮಾ ಪಾತ್ರಾ ತನ್ನ ಮನೆ ಕೆಲಸದಾಕೆಗೆ ಕಿರುಕುಳ ನೀಡಿದ ವರದಿಯನ್ನು ರಾಷ್ಟ್ರೀಯ ಮಹಿಳಾ ಆಯೋಗ ತನ್ನ ಗಮನಕ್ಕೆ ತೆಗೆದುಕೊಂಡಿದೆ. ಎನ್ಸಿಡಬ್ಲ್ಯು ಅಧ್ಯಕ್ಷೆ ರೇಖಾ ಶರ್ಮಾ, ಸಮಿತಿ ಜಾರ್ಖಂಡ್ನ ಡಿಜಿಪಿಗೆ ಪತ್ರ ಬರೆದಿದ್ದು, ಈ ಆರೋಪಗಳು ನಿಜವೆಂದು ಕಂಡುಬಂದಲ್ಲಿ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.