ಗುಡ್‌ ನ್ಯೂಸ್: ಚಿತ್ರರಂಗಕ್ಕೆ‌ ಸ್ಯಾಂಡಲ್‌ ವುಡ್‌ ಕ್ವೀನ್ ರಮ್ಯಾ ಕಂಬ್ಯಾಕ್‌ ಆದರೆ ಈ ಬಾರಿ…

Team Udayavani, Aug 31, 2022, 11:14 AM IST

ಗುಡ್‌ ನ್ಯೂಸ್: ಚಿತ್ರರಂಗಕ್ಕೆ‌ ಸ್ಯಾಂಡಲ್‌ ವುಡ್‌ ಕ್ವೀನ್ ರಮ್ಯಾ ಕಂಬ್ಯಾಕ್‌ ಆದರೆ ಈ ಬಾರಿ…

ಬೆಂಗಳೂರು: ಸ್ಯಾಂಡಲ್‌ ವುಡ್‌ ಕ್ವೀನ್‌ ರಮ್ಯಾ ನಿನ್ನೆ ಹೇಳಿದ್ದ ಸಿಹಿ ಸುದ್ದಿ ಇಂದು (ಆ.31 ರಂದು) ರಿವೀಲ್‌ ಆಗಿದೆ. ಈ ವಿಚಾರ ತಿಳಿದು ಅಭಿಮಾನಿಗಳು ಫುಲ್‌ ಖುಷ್‌ ಆಗಿದ್ದಾರೆ.

ಬಹು ಸಮಯದಿಂದ ನಟಿ ರಮ್ಯಾ ಬಣ್ಣದ ಲೋಕದಿಂದ ದೂರ ಉಳಿದಿದ್ದರು. ಇತ್ತೀಚಿನ ದಿನಗಳಲ್ಲಿ ಅವರು ಚಿತ್ರರಂಗದ ಸ್ನೇಹಿತರೊಂದಿಗೆ ಆತ್ಮೀಯವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೊಸ ತಂಡದ ಚಿತ್ರಗಳನ್ನು ಬೆಂಬಲಿಸಿ, ಆಗಾಗ ಸೋಶಿಯಲ್‌ ಮೀಡಿಯಾದಲ್ಲಿ ಅವರು, ಪೋಸ್ಟ್‌ ಹಾಕುತ್ತಲೇ ಇರುತ್ತಾರೆ.

ಕಳೆದ ಕೆಲ ದಿನಗಳ ಹಿಂದೆ, ಅವರು “ಹೊಯ್ಸಳ” ಚಿತ್ರ ತಂಡದ ಸೆಟ್‌ ಗೆ ಭೇಟಿ ನೀಡಿದ್ದರು. ರಾಜ್.‌ ಬಿ.ಶೆಟ್ಟಿ ಅವರೊಂದಿಗೆ ಚಿತ್ರ ಮಾಡಲಿದ್ದಾರೆ ಎನ್ನುವ ಸುದ್ದಿಯೊಂದು ಕಾಡ್ಗಿಚ್ಚಿನಂತೆ ಹಬ್ಬಿತ್ತು. ಕಂಬ್ಯಾಕ್‌ ಮಾಡುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಲೇ ಇರುವಾಗ ಅವರು ನಿನ್ನೆ ಪೋಸ್ಟ್‌ ವೊಂದನ್ನು ಹಾಕಿ ಗಣೇಶ ಹಬ್ಬದಂದು ಸಿಹಿ ಸುದ್ದಿ ಹಂಚಿಕೊಳ್ಳಲಿದ್ದೇನೆ ಎಂದು ಹೇಳಿದ್ದರು.

ಇಂದು ಮೋಹಕ ತಾರೆ, ಆ ಸುದ್ದಿಯನ್ನು ರಿವೀಲ್‌ ಮಾಡಿದ್ದಾರೆ. ಗಣೇಶ ಹಬ್ಬದ ಶುಭಾಶಯವನ್ನು ಕೇಳಿ, ನಾನು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದೇನೆ. ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ, ಆ್ಯಪಲ್‌ ಬಾಕ್ಸ್‌ ಮೂಲಕ ನಿರ್ಮಾಪಕಿಯಾಗಲಿದ್ದೇನೆ ಎನ್ನುವುದು ವಿಶೇಷ.

ಏನಿದು ಆ್ಯಪಲ್‌ ಬಾಕ್ಸ್‌ ಅದೊಂದು ಸಾಧಾರಣವಾದ ಅಷ್ಟೇ ಉಪಯುಕ್ತವಾದ ಪುಟ್ಟ ಮರದ ಪೆಟ್ಟಿಗೆ. ನನ್ನ ಚಿತ್ರರಂಗದ ಪಯಣದುದ್ದಕ್ಕೂ ನಿರಂತರವಾಗಿ ಆ್ಯಪಲ್‌ ಬಾಕ್ಸ್‌ ಜೊತೆಗಿದೆ. ಸೆಟ್‌ ನಲ್ಲಿ ಕುರ್ಚಿಗಳಿಲ್ಲದೇ ಇದ್ದಾಗ ಅಥವಾ ಕ್ಯಾಮರಾ, ಇಲ್ಲವೇ ನಟರ ಎತ್ತರ ಹೆಚ್ಚಿಸಬೇಕದಾಗ ಈ ಆ್ಯಪಲ್‌ ಬಾಕ್ಸ್‌ ನೆರವಿಗೆ ಬಂದಿದೆ. ಈ ಪೆಟ್ಟಿಗೆಯ ಸರಳತೆ ನನಗೆ ಸ್ಪೂರ್ತಿಯಾಗಿ ಪ್ರೇರೇಪಿಸಿದೆ ಎಂದು ಹೇಳಿದ್ದಾರೆ.

ಪ್ರಸುತ್ತ  ಆ್ಯಪಲ್‌ ಬಾಕ್ಸ್‌ ಎರಡು ಚಿತ್ರಗಳನ್ನು ನಿರ್ಮಿಸಲು ಸಜ್ಜಾಗಿದೆ ಎಂದು ಹೇಳುವಲ್ಲಿ ನನಗೆ ಸಂತಸವಿದೆ. ಈ ಎರಡೂ ಚಿತ್ರಗಳು ಕೆ.ಆರ್.ಜಿ. ಸಂಸ್ಥೆಯ ವಿತರಣೆಯ ಮೂಲಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ಅದರ ಜೊತೆಯಲ್ಲೇ ಓಟಿಟಿ ಫ್ಲ್ಯಾಟ್‌ ಫಾರಂಗಳಿಗಾಗಿ ಸಿನಿಮಾ ಹಾಗೂ ವೆಬ್‌ ಸಿರೀಸ್‌ ನಿರ್ಮಾಣ ಮಾಡಲು ಆ್ಯಪಲ್‌ ಬಾಕ್ಸ್‌ ಸ್ಟುಡಿಯೋಸ್‌ ಸಿದ್ದವಾಗುತ್ತಿದೆ ಎಂದಿದ್ದಾರೆ.

ಈ ಬಗ್ಗೆ ಮತ್ತಷ್ಟು ವಿವರಗಳನ್ನು ಆ್ಯಪಲ್‌ ಬಾಕ್ಸ್‌ ನ ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಿಸಿ.

ನನ್ನೆಲ್ಲಾ ಪ್ರಯತ್ನಗಳಲ್ಲೂ ನಿರಂತರವಾಗಿ ಜೊತೆಗಿರುವ ನನ್ನ ಕುಟುಂಬ, ಸ್ನೇಹಿತರು ಹಿತೈಷಿಗಳು, ಸಿನಿಮಾವರ್ಗದವರು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ನನ್ನ ಪ್ರೀತಿಯ ಅಭಿಮಾನಿಗಳಿಗೆ ಹೃತ್ಪೂರ್ವಕ ವಂದನೆಗಳು. ನಿಮ್ಮೆಲ್ಲರ ಸಹಕಾರ ಮತ್ತು ಪ್ರೋತ್ಸಾಹಕ್ಕೆ ಬೆಲೆ ಕಟ್ಟಲಾಗದ್ದು.

ಇದೇ ವೇಳೆ ವಿಜಯ್‌ ಕಿರಂಗಂದೂರ್‌,ಜಯಣ್ಣ, ಯೋಗಿ ಜಿ ರಾಜ್‌ ಮತ್ತು ಕಾರ್ತಿಕ್‌ ಗೌಡ ಇವರಿಗೂ ವಿಶೇಷ ಧನ್ಯವಾದಗಳನ್ನು ತಿಳಿಸಿದ್ದಾರೆ.

ಟಾಪ್ ನ್ಯೂಸ್

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.