ಮೂಡಲಗಿ: ಕಳ್ಳನ ಬಂಧನ, ಚಿನ್ನಾಭರಣ ವಶ
Team Udayavani, Aug 31, 2022, 7:47 PM IST
ಮೂಡಲಗಿ: ತಾಲೂಕಿನ ಕುಲಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆಗಳ ಕಳ್ಳತನ ಪ್ರಕರಣ ದಾಖಲಾಗಿದ್ದವು. ಪ್ರಕರಣ ಬೇಧಿಸಿರುವ ಕುಲಗೋಡ ಪೊಲೀಸರು ಕಳ್ಳನನ್ನು ಬಂಧಿಸಿ 4 ತೊಲಿ 9 ಗ್ರಾಂ ಬಂಗಾರ ವಶಪಡೆಸಿಕೊಂಡಿದ್ದಾರೆ.
ಕೆಲವು ದಿನಗಳ ಹಿಂದೆ ಠಾಣಾ ವ್ಯಾಪ್ತಿಯ ತೋಕರಟ್ಟಿ ಗ್ರಾಮದ ಚನ್ನವ್ವ ಬಿರಾನಿ ಮತ್ತು ತಿಗಡಿ ಗ್ರಾಮದ ಲಕ್ಷ್ಮೀ ಹೊಸೂರ ಎಂಬುವರ ಮನೆಗಳಲ್ಲಿ ಆರೋಪಿತ ತೋಕರಟ್ಟಿ ಗ್ರಾಮದ ಸಿದ್ಧಾರೂಡ ಚಂದ್ರಪ್ಪ ತೋಕ್ಯಾಗೋಳ (ನಾಯಿಕ) ಈತ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಬೀಗ ಮುರಿದು ಬಂಗಾರದ ಆಭರಣ ಕಳ್ಳತನ ಮಾಡಿದ್ದ. ಆರೋಪಿತನಿಂದ 1 ನಕ್ಲೇಸ್, 1 ಚೈನ್ ತಾಳಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕುಲಗೋಡ ಪಿ.ಎಸ್.ಐ ಗಳಾದ ಜಿ.ಎಸ್ ಪಾಟೀಲ್, ಎಸ್. ಎಚ್ ಕರನಿಂಗ ಹಾಗೂ ಸಿಬ್ಬಂದಿ ತನಿಖೆ ಕೈಗೊಂಡು ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಯಚರಣೆಯಲ್ಲಿ ಎ.ಡಿ ಕೊಪ್ಪದ. ಬಿ.ಬಿ ಬಿರಾದಾರ. ಎಮ್.ಟಿ ಬಳಿಗಾರ. ವ್ಹಿ.ಎ ದೇಸಾಯಿ, ಎಸ್.ಎಸ್ ವಜ್ರಮಟ್ಟಿ, ವ್ಹಿ.ಎಲ್ ದೂಳಪ್ಪನ್ನವರ ,ಎಮ್.ಆರ್ ಲದ್ದಿ. ಎಮ್.ಎಸ್ ಕುರೆನ್ನವರ, ಎಸ್.ಎಲ್ ಮಂಗಿ, ಎಸ್.ಪಿ ಮುಗ್ಗನ್ನವರ, ಮಾಳಪ್ಪ ಆಡಿನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.