ಬೆಣ್ಣೆಹಳ್ಳ ಪ್ರವಾಹ ತಡೆಗೆ ಕ್ರಮ: ಜೋಶಿ

ಬೆಣ್ಣೆಹಳ್ಳ ಪಾತ್ರದ ಅತಿಕ್ರಮಣವೇ ಪ್ರವಾಹ ಸ್ಥಿತಿಗೆ ಕಾರಣವಾಗುತ್ತಿದೆ.

Team Udayavani, Sep 1, 2022, 3:56 PM IST

ಬೆಣ್ಣೆಹಳ್ಳ ಪ್ರವಾಹ ತಡೆಗೆ ಕ್ರಮ: ಜೋಶಿ

ಹುಬ್ಬಳ್ಳಿ: ಬೆಣ್ಣೆ ಹಳ್ಳದ ಪ್ರವಾಹ ತಡೆ ನಿಟ್ಟಿನ ಯೋಜನೆಗೆ ನೀರಾವರಿ ಮಂಡಳಿ ಒಪ್ಪಿಗೆ ನೀಡಿದೆ. ಇದನ್ನು ಸಂಪುಟ ಸಭೆಗೆ ತರುವಂತೆ ಈಗಾಗಲೇ ಮುಖ್ಯಮಂತ್ರಿಯವರಿಗೆ ತಿಳಿಸಿದ್ದು, ಮತ್ತೂಮ್ಮೆ ಅವರ ಗಮನಕ್ಕೆ ತರಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

ಇಂಗಳಹಳ್ಳಿಯಲ್ಲಿ ಬೆಣ್ಣೆ ಹಳ್ಳ ಪ್ರವಾಹಕ್ಕೆ ಯುವಕನೊಬ್ಬ ಕೊಚ್ಚಿ ಹೋಗಿದ್ದು, ಸುಮಾರು 29 ಜನರನ್ನು ರಕ್ಷಣೆ ಮಾಡಿದ್ದರ ಹಿನ್ನೆಲೆಯಲ್ಲಿ ಮಂಗಳವಾರ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರೊಂದಿಗೆ ಗ್ರಾಮಕ್ಕೆ ತೆರಳಿ ಪರಿಶೀಲಿಸಿದ ನಂತರ ಅಣ್ಣಿಗೇರಿ ತಾಲೂಕಿನ ಭದ್ರಾಪುರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಈಗಾಗಲೇ ಅಂದಾಜು 350 ಕೋಟಿ ರೂ. ವೆಚ್ಚದಲ್ಲಿ ತುಪ್ಪರಿಹಳ್ಳದ ಅಗಲೀಕರಣ ಹಾಗೂ ಸ್ವತ್ಛತಾ ಕಾರ್ಯಕ್ಕೆ ಕ್ರಿಯಾಯೋಜನೆ ಆಗಿದೆ. ಅದೇ ರೀತಿ ಬೆಣ್ಣೆಹಳ್ಳದ ಅಗಲೀಕರಣ, ಸ್ವತ್ಛತೆ ನಿಟ್ಟಿನಲ್ಲಿ ಸಂಪುಟ ಸಭೆಯಲ್ಲಿ ವಿಷಯ ತಂದು ಒಪ್ಪಿಗೆ ನೀಡುವಂತೆ ಮುಖ್ಯಮಂತ್ರಿಯವರಿಗೆ ಈಗಾಗಲೇ ನಾನು, ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕ ಅಮೃತ ದೇಸಾಯಿ ಮನವಿ ಮಾಡಿದ್ದು, ಒಂದೆರಡು ದಿನಗಳಲ್ಲಿ ಮತ್ತೂಮ್ಮೆ ಮುಖ್ಯಮಂತ್ರಿಯವರ ಗಮನಕ್ಕೆ ಇದನ್ನು ತರುವುದಾಗಿ ತಿಳಿಸಿದರು.

ಬೆಣ್ಣೆಹಳ್ಳ ಪ್ರವಾಹ ತಡೆ ನಿಟ್ಟಿನಲ್ಲಿ ಈಗಾಗಲೇ ಅಂದಾಜು 500 ಕೋಟಿ ರೂ. ವೆಚ್ಚದಲ್ಲಿ ಸೇತುವೆಗಳ ಎತ್ತರ ಹೆಚ್ಚಳ, ಕೆಲವೊಂದು ಕಡೆ ಅಗಲೀಕರಣ, ಹೂಳು ತೆಗೆಯುವುದು ಇನ್ನಿತರ ಕಾರ್ಯ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಹಳ್ಳದ ಅಗಲೀಕರಣ ಸೇರಿದಂತೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳ ಲಾಗುವುದು. ಬೆಣ್ಣೆಹಳ್ಳ ಪಾತ್ರದ ಅತಿಕ್ರಮಣವೇ ಪ್ರವಾಹ ಸ್ಥಿತಿಗೆ ಕಾರಣವಾಗುತ್ತಿದೆ. ಮಳೆ ಹಾಗೂ ಪ್ರವಾಹದಿಂದ ಬೆಳೆ ಹಾನಿಗೆ ಪ್ರಧಾನಮಂತ್ರಿ ಬೆಳೆವಿಮೆ ಯೋಜನೆಯಡಿ ಪರಿಹಾರ ದೊರೆಯ ಲಿದ್ದು, ಇದಲ್ಲದೆ ಎನ್‌ಡಿಆರ್‌ಎಫ್‌ನಿಂದ ಪರಿಹಾರ ನಿಟ್ಟಿನಲ್ಲಿ ಸಮೀಕ್ಷೆ ನಡೆಸಲು ಡಿಸಿಗೆ ಸೂಚಿಸಲಾಗಿದೆ. ಬೆಳೆ ಹಾನಿಗೆ ಹೆಚ್ಚಿನ ಪರಿಹಾರ ಒದಗಿಸಲು ಯತ್ನ ನಡೆಯುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಹೆಸರು-ಉದ್ದು ಬೆಳೆಗಳ ಖರೀದಿ ಕೇಂದ್ರ ಆರಂಭಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕ್ರಮ ಕೈಗೊಂಡಿದೆ. ಕಳೆದ ವರ್ಷ ಬೆಂಬಲ ಬೆಲೆಯಡಿ ಖರೀದಿ ಕೇಂದ್ರದಲ್ಲಿ ಪ್ರತಿ ರೈತರಿಂದ ಗರಿಷ್ಠ 10 ಕ್ವಿಂಟಲ್‌ವರೆಗೆ ಹೆಸರು ಖರೀದಿ ಮಾಡಲಾಗಿತ್ತು. ಈ ವರ್ಷ ಅದನ್ನು 15 ಕ್ವಿಂಟಲ್‌ಗೆ ಹೆಚ್ಚಿಸಲಾಗಿದೆ ಎಂದರು. ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಡಿಸಿ ಗುರುದತ್ತ ಹೆಗಡೆ ಇನ್ನಿತರರಿದ್ದರು.

ಪತ್ತೆಯಾಗದ ಆನಂದ
ಇಂಗಳಹಳ್ಳಿ ಬಳಿ ಸೋಮವಾರ ಬೆಣ್ಣೆಹಳ್ಳದಲ್ಲಿ ಕೊಚ್ಚಿಕೊಂಡು ಹೋದ ಆನಂದ ಹಿರೇಗೌಡರ ಶೋಧ ಕಾರ್ಯ ಮುಂದುವರಿದಿದೆ. ಹುಡುಕಾಟ ನಡೆಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಮಂಗಳವಾರ ಸಹ ಕಾರ್ಯಾಚರಣೆ ಮುಂದುವರಿಸಿ ಹುಡುಕಾಟ ನಡೆಸಿದರೂ ಪತ್ತೆ ಆಗಿಲ್ಲ. ಕಾರ್ಯಾಚರಣೆ ಬುಧವಾರಕ್ಕೆ ಮುಂದೂಡಲಾಗಿದೆ. ಎರಡು ಬೋಟ್‌ ಹಾಗೂ ಇನ್ನಿತರ ಸಲಕರಣೆಗಳೊಂದಿಗೆ ಹುಡುಕಾಟ ನಡೆಸಿದ್ದಾರೆ. ಸ್ಥಳದಲ್ಲಿ ಗ್ರಾಮೀಣ ತಹಶೀಲ್ದಾರ್‌ ಪ್ರಕಾಶ ನಾಶಿ ಸೇರಿದಂತೆ ಹಲವು ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

KLE Technological University: Awarded Honorary Doctorate to Murugesh Nirani

KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.