ರಾಯಣ್ಣನ ಇತಿಹಾಸ ಯುವಕರಿಗೆ ಪರಿಚಯಿಸಬೇಕಿದೆ: ದೀಪಕ್
ವೀರ ಪರಂಪರೆಯ ವಾರಸುದಾರರಾದ ನಾವೆಲ್ಲ ಕನ್ನಡಕ್ಕಾಗಿ ಕೈ ಎತ್ತಬೇಕು
Team Udayavani, Sep 1, 2022, 5:45 PM IST
ಬೆಳಗಾವಿ: ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಪ್ರಥಮ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟನಾಗಿ, ಕನ್ನಡ ನಾಡಿನ ಹೆಮ್ಮೆಯ ಪುತ್ರ ವೀರ
ಸಂಗೊಳ್ಳಿ ರಾಯಣ್ಣನವರ ನಿಜ ಇತಿಹಾಸವನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಸಂಶೋಧಕರ, ಸಾಹಿತಿಗಳ ಹಾಗೂ ಕನ್ನಡ ಹೋರಾಟಗಾರರ ಮೇಲಿದೆ ಎಂದು ಕರುನಾಡ ವಿಜಯ ಸೇನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷರಾದ ಹ. ನೀ. ದೀಪಕ ಹೇಳಿದರು.
ನಗರದ ಮಹಾತ್ಮಾ ಗಾಂಧಿ ಭವನದಲ್ಲಿ ಕರುನಾಡ ವಿಜಯ ಸೇನೆಯ ವತಿಯಿಂದ ಹಮ್ಮಿಕೊಂಡಿದ್ದ ರಾಯಣ್ಣನ ಅದ್ದೂರಿ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ನಾಡು, ನುಡಿಗಾಗಿ ಶ್ರಮಿಸಿದ ವೀರ ಪರಂಪರೆಯ ವಾರಸುದಾರರಾದ ನಾವೆಲ್ಲ ಕನ್ನಡಕ್ಕಾಗಿ ಕೈ ಎತ್ತಬೇಕು. ಕನ್ನಡ ಅನ್ನದ ಭಾಷೆಯಾಗಬೇಕು. ಹೊರ ರಾಜ್ಯದ ಕಂಪನಿಗಳು ನಮ್ಮ ನೆಲದಲ್ಲಿ ಘಟಕ ಸ್ಥಾಪಿಸಿದರೆ ಅಲ್ಲಿಯೂ ಕೂಡ ಕನ್ನಡಿಗರಿಗೆ ಉದ್ಯೋಗ ಕೊಡುವಂತಾಗಲು ಸೇನೆ ನಿರಂತರ ಹೋರಾಟ ಮಾಡುತ್ತಿದೆ ಎಂದರು.
ಸಾನ್ನಿಧ್ಯ ವಹಿಸಿದ್ದ ಬೆಳಗಾವಿ ಕಾರಂಜಿ ಮಠದ ಶಿವಯೋಗಿ ದೇವರು ಮಾತನಾಡಿ, ಕನ್ನಡ ಪರಂಪರೆಯಲ್ಲಿ ರಾಯಣ್ಣ ಚಿರಸ್ಥಾಯಿಯಾಗಿದ್ದಾರೆ. ಅವನ ದಿಟ್ಟ ಹೋರಾಟ ಹೊಸ ಪೀಳಿಗೆಗೆ ಮಾದರಿಯಾಗಲಿ ಎಂದರು. ಸೇನೆಯ ಯುವ ರಾಜ್ಯಾಧ್ಯಕ್ಷ ಮಹೇಶ ಆರ್. ಎಸ್., ರಾಜ್ಯ ಉಪಾಧ್ಯಕ್ಷ ಸಚ್ಚಿದಾನಂದ, ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನಕುಮಾರ, ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ನೆ. ಲ. ಶಾಮಪ್ರಸಾದ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ
ಹಾಗೂ ಉತ್ತರ ಕರ್ನಾಟಕ ಉಸ್ತುವಾರಿ ಶಿವಪುತ್ರ ಗಾಣದಾಳ, ಬೆಳಗಾವಿ ಜಿಲ್ಲಾ ಗೌರವಾಧ್ಯಕ್ಷ ರವಿ ಭದ್ರಕಾಳಿ, ಜಿಲ್ಲಾಧ್ಯಕ್ಷ ಸುರೇಶ ಇಟಗಿ, ಉಪಾಧ್ಯಕ್ಷ ಮಂಜುನಾಥ ಹಲಗಾ, ಸೋಮಲಿಂಗೇಶ್ವರ ನೀಡುಮಾಮಿ ಸ್ವಾಮೀಜಿ, ಚೆನ್ನಮ್ಮಾ ವಂಶಸ್ಥರಾದ ಬಾಬಾಸಹೆಬ ಶಂಕರಗೌಡ ದೇಸಾಯಿ ಮೊದಲಾದವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕನ್ನಡ ಸೇವೆಗೆ ಸದಾ ಕ್ರಿಯಾಶೀಲರಾಗಿರುವ ಐವತ್ತು ಕನ್ನಡ ಹೋರಾಟಗಾರರನ್ನು ಸೇನೆಯ ವತಿಯಿಂದ ಸತ್ಕರಿಸಲಾಯಿತು. ಇದಕ್ಕೂ ಮುನ್ನ ಕ್ಯಾಂಪ್ ಪ್ರದೇಶದ ಹನುಮಾನ ಮೂರ್ತಿಯಿಂದ ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣ ಮೂರ್ತಿಯ ಭವ್ಯ ಮೆರವಣಿಗೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.