ದೇಶದ ಪ್ರತಿಯೊಬ್ಬರಿಗೂ ಮೂಲಭೂತ ಸೌಲಭ್ಯ ನಮ್ಮ ಆದ್ಯತೆ: ಪ್ರಧಾನಿ ಮೋದಿ
ಭ್ರಷ್ಟಾಚಾರದ ವಿರುದ್ಧ ಕ್ರಮ ತೀವ್ರಗೊಳ್ಳುತ್ತಿದ್ದಂತೆ ರಾಜಕೀಯದಲ್ಲಿ ಧ್ರುವೀಕರಣ
Team Udayavani, Sep 1, 2022, 7:52 PM IST
ಕೊಚ್ಚಿ : ದೇಶದ ಪ್ರತಿಯೊಬ್ಬ ನಾಗರಿಕರಿಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಮತ್ತು ಆಧುನಿಕ ಮೂಲಸೌಕರ್ಯಗಳನ್ನು ನಿರ್ಮಿಸುವುದು ಕೇಂದ್ರ ಸರ್ಕಾರದ ದೊಡ್ಡ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
ಎರಡು ದಿನಗಳ ಭೇಟಿಗಾಗಿ ಆಗಮಿಸಿ, ನೆಡುಂಬಶ್ಶೇರಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ತಮ್ಮ ಸರ್ಕಾರ ಬಡವರಿಗೆ ಮನೆಗಳನ್ನು ಒದಗಿಸಲು ಕೆಲಸ ಮಾಡುತ್ತಿದೆ. ‘ಪ್ರಧಾನ ಮಂತ್ರಿ ಆವಾಸ್ ಯೋಜನೆ’ ಅಡಿಯಲ್ಲಿ, ಎರಡು ಲಕ್ಷ ಮನೆಗಳನ್ನು ಅನುಮೋದಿಸಲಾಗಿದೆ ಮತ್ತು ಕೇರಳದಲ್ಲಿ 1.30 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದರು.
“ಕೇಂದ್ರ ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ವೈದ್ಯಕೀಯ ಕಾಲೇಜನ್ನು ತೆರೆಯಲು ಕೆಲಸ ಮಾಡುತ್ತಿದೆ ಮತ್ತು ಇದು ಕೇರಳದ ಯುವಕರಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಆಧುನಿಕ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು, ಬಿಜೆಪಿ ಸರ್ಕಾರವು ಕೇರಳದಲ್ಲಿ ಬಹು ಯೋಜನೆಗಳಿಗೆ ಸುಮಾರು 1 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ ಎಂದು ಅವರು ಹೇಳಿದರು.
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕ್ಷಿಪ್ರ ಬೆಳವಣಿಗೆಯನ್ನು ಕಾಣಬಹುದು. ಡಬಲ್ ಇಂಜಿನ್ ಸರ್ಕಾರವು ಈ ಅಭಿವೃದ್ಧಿಯನ್ನು ಸಾಧ್ಯವಾಗಿಸಿದೆ ಎಂದರು.
ಭ್ರಷ್ಟಾಚಾರವು ಅಭಿವೃದ್ಧಿಯ ಹಾದಿಯಲ್ಲಿ ದೊಡ್ಡ ಅಡಚಣೆಯಾಗಿದೆ. ಭ್ರಷ್ಟಾಚಾರದ ವಿರುದ್ಧ ನಿರ್ಣಾಯಕ ಹೋರಾಟದ ಸಮಯ ಬಂದಿದೆ ಎಂದು ಆಗಸ್ಟ್ 15ರಂದು ಕೆಂಪುಕೋಟೆಯಿಂದ ಹೇಳಿದ್ದೆ. ಭ್ರಷ್ಟಾಚಾರದ ವಿರುದ್ಧ ಕ್ರಮ ತೀವ್ರಗೊಳ್ಳುತ್ತಿದ್ದಂತೆ ರಾಜಕೀಯದಲ್ಲಿ ಧ್ರುವೀಕರಣ ಆರಂಭವಾಗಿದೆ ಎಂದರು.
ಆದಿ ಶಂಕರಾಚಾರ್ಯರ ಜನ್ಮಸ್ಥಳಕ್ಕೆ ಭೇಟಿ
ಕೇರಳದ ಎರ್ನಾಕುಲಂ ಜಿಲ್ಲೆಯ ಕಾಲಡಿ ಗ್ರಾಮದಲ್ಲಿರುವ ಸಂತ-ತತ್ತ್ವಜ್ಞಾನಿ ಆದಿ ಶಂಕರಾಚಾರ್ಯರ ಜನ್ಮಸ್ಥಳವಾದ ಆದಿ ಶಂಕರ ಜನ್ಮ ಭೂಮಿ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಭೇಟಿ ನೀಡಿದರು.
ಕಾಲಡಿಗೆ ತೆರಳುವ ಮುನ್ನ ಮೋದಿ ಅವರು ಭಾರತಕ್ಕೆ ಸಂತ ದಾರ್ಶನಿಕರ ಕೊಡುಗೆಗಳನ್ನು ನೆನಪಿಸಿಕೊಂಡರು ಮತ್ತು ಅದ್ವೈತ ತತ್ವಕ್ಕೆ ಹೆಸರುವಾಸಿಯಾದ ಆದಿ ಶಂಕರ ಪರಂಪರೆಯನ್ನು ಕೇರಳದಿಂದ ವಿವಿಧ ಆಧ್ಯಾತ್ಮಿಕ ನಾಯಕರು ಮತ್ತು ಶ್ರೀ ನಾರಾಯಣ ಗುರು, ಚಟ್ಟಂಪಿ ಸ್ವಾಮಿಕಲ್ ಮತ್ತು ಅಯ್ಯಂಕಾಳಿ ಮುಂತಾದ ಸಮಾಜ ಸುಧಾರಕರು ಮುನ್ನಡೆಸಿದರು ಎಂದು ಹೇಳಿದರು.
“ಭಾರತೀಯ ಮಹಾನ್ ಸಂತರ ಪರಂಪರೆಯನ್ನು ಗೌರವಿಸಲು” ಪೆರಿಯಾರ್ ನದಿಯ ದಂಡೆಯ ಮೇಲಿರುವ ಆದಿಶಂಕರರ ಜನ್ಮಸ್ಥಳಕ್ಕೆ ಪ್ರಧಾನಿ ಭೇಟಿ ನೀಡಿದ್ದಾರೆ ಎಂದು ಬಿಜೆಪಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.