ಕಾಂಗ್ರೆಸ್‌ಗೆ “ಪಾರದರ್ಶಕ’ ಸಂಕಟ: ಮತದಾರರ ಪಟ್ಟಿ ಬಿಡುಗಡೆಗೆ ಒತ್ತಾಯ
Team Udayavani, Sep 2, 2022, 6:50 AM IST
ನವದೆಹಲಿ: ಮುಂದಿನ ತಿಂಗಳು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ನಡೆಯಲಿರುವಂತೆಯೇ ಪಾರದರ್ಶಕತೆ ವಿಚಾರ ಮತ್ತೆ ಪಕ್ಷದ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಪಕ್ಷದಲ್ಲಿ ಅರ್ಹ ಮತದಾರರು ಯಾರು ಮತ್ತು ಅವರ ವಿವರಗಳನ್ನು ಬಹಿರಂಗ ಮಾಡಬೇಕು ಎಂಬ ಬಗ್ಗೆ ಕಾಂಗ್ರೆಸ್‌ನ ಪ್ರಮುಖ ನಾಯಕರಾಗಿರುವ ಮನೀಶ್ ತಿವಾರಿ, ಕಾರ್ತಿ ಚಿದಂಬರಂ, ಶಶಿ ತರೂರ್ ಒತ್ತಾಯಿಸಿದ್ದಾರೆ.
ಆದರೆ, ಈ ಬೇಡಿಕೆಯನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿರಸ್ಕರಿಸಿದ್ದಾರೆ. ಆಲಪ್ಪುಳದಲ್ಲಿ ಮಾತನಾಡಿದ ಅವರು, ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಗೆ ತೆರಳಿ ಯಾರೂ ಬೇಕಾದರೂ ಮತದಾರರ ಪಟ್ಟಿ ಪರಿಶೀಲಿಸಬಹುದು ಎಂದು ತಿರುಗೇಟು ನೀಡಿದ್ದಾರೆ.
ಇದೊಂದು ಪಕ್ಷದ ಆಂತರಿಕ ವಿಚಾರ. ಸಾರ್ವಜನಿಕವಾಗಿ ಅದನ್ನು ಪ್ರಕಟಿಸುವ ಅಗತ್ಯವಿಲ್ಲ ಎಂದರು. ಕಾಂಗ್ರೆಸ್‌ನಲ್ಲಿ ಇಂಥ ಪ್ರಕ್ರಿಯೆ ಇಲ್ಲ. ಹಳೆಯ ವ್ಯವಸ್ಥೆಯನ್ನೇ ಮುಂದುವರಿಸುವುದಾಗಿ ಹೇಳಿದ್ದಾರೆ.
2 ಸಾವಿರನೇ ಇಸ್ವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧ್ಯಕೀಯ ಚುನಾವಣೆಯಲ್ಲಿ ಕೂಡ ಸ್ಪರ್ಧಿಸಿದ್ದ ಜಿತೇಂದ್ರ ಪ್ರಸಾದ ಕೂಡ ಪಾರದರ್ಶಕತೆಯ ವಿಚಾರ ಮಾತನಾಡಿದ್ದರು. ಇದೀಗ ಸಂಸದ ಮನೀಶ್ ತಿವಾರಿ ಕೂಡ ಸರಣಿ ಟ್ವೀಟ್ ಮಾಡಿ ಸಾರ್ವಜನಿಕವಾಗಿ ಪಕ್ಷದಲ್ಲಿ ಮತ ಹಾಕಲು ಅರ್ಹರು ಯಾರು ಎಂಬ ವಿವರ ಇಲ್ಲದೆ ಪ್ರಕ್ರಿಯೆ ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ. ಸಂಸದ ಕಾರ್ತಿ ಚಿದಂಬರಂ ಕೂಡ ಬೆಂಬಲ ವ್ಯಕ್ತಪಡಿಸಿ “ಸುಧಾರಣಾವಾದಿಗಳು ಬಂಡಾಯಗಾರರಲ್ಲ’ ಎಂದು ಹೇಳಿದ್ದಾರೆ.
ಹರ್ಯಾಣದಲ್ಲಿ ಗುದ್ದಾಟ:
ಮತ್ತೂಂದೆಡೆ, ಮಾಜಿ ಸಚಿವ ಗುಲಾಂ ನಬಿ ಆಜಾದ್ ಕಾಂಗ್ರೆಸ್ ತೊರೆದಿರುವುದು ಪಕ್ಷಕ್ಕೆ ಇನ್ನಷ್ಟು ಸವಾಲುಗಳನ್ನು ಒಡ್ಡಿದೆ. ಜಮ್ಮು ಮತ್ತು ಕಾಶ್ಮೀರ, ಹರ್ಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿನ 5 ಸಾವಿರ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷ ತೊರೆಯುವ ಮಾತಾಡುತ್ತಿದ್ದಾರೆ.
ಹರ್ಯಾಣದಲ್ಲಿ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಅವರು ಆಜಾದ್ ಅವರನ್ನು ಭೇಟಿಯಾಗಿರುವುದು ಪಕ್ಷದ ನಾಯಕಿ ಕುಮಾರಿ ಸೈಲ್ಜಾ ಅವರನ್ನು ಸಿಟ್ಟಿಗೆಬ್ಬಿಸಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ವರಿಷ್ಠರಿಗೆ ಪತ್ರ ಬರೆದಿದ್ದಾರೆ. ಜತೆಗೆ ವರಿಷ್ಠರಿಗೆ ಈ ಬಗ್ಗೆ ಮಾಹಿತಿ ನೀಡಿದ್ದನ್ನು ಸೈಲ್ಜಾ ಖಚಿತಪಡಿಸಿದ್ದಾರೆ. ಆದರೆ, ಆಜಾದ್ ಅವರನ್ನು ಭೇಟಿ ಮಾಡಿರುವುದನ್ನು ಹೂಡ ಸಮರ್ಥಿಸಿಕೊಂಡಿದ್ದಾರೆ.
ಸೋಮವಾರ ನಡೆದಿದ್ದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಮುಖಂಡರಾದ ಆನಂದ ಶರ್ಮಾ, ಪೃಥ್ವಿರಾಜ್ ಚೌಹಾಣ್ ಕೂಡ ಗುಲಾಂ ನಬಿ ಆಜಾದ್ ಜತೆಗೆ ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಸ್ಲೀಪಿಂಗ್ ಕಂಟೈನರ್‌ನಲ್ಲಿ ರಾಹುಲ್ ವಿಶ್ರಾಂತಿ:
ಸೆ.7ರಿಂದ ಶುರುವಾಗುವ ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿಯವರು ಸ್ಲಿàಪಿಂಗ್ ಕಂಟೈನರ್ ಬಾಕ್ಸ್‌ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಪ್ರತಿ ದಿನ ಬೆಳಗ್ಗೆ 7 ಗಂಟೆಯಿಂದ 10 ಗಂಟೆಯ ವರೆಗೆ ಯಾತ್ರೆ ನಡೆಯಲಿದೆ. ನಂತರ ರಾಹುಲ್ ಗಾಂಧಿ ಸಾರ್ವಜನಿಕರ ಜತೆಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಪಕ್ಷದ ನಾಯಕ ಡಾ.ಶಮಾ ಮೊಹಮ್ಮದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.