ಮುರುಘಾ ಸ್ವಾಮೀಜಿ ಕೇಸ್: ಹೈಕೋರ್ಟ್ ನಿಗಾದಲ್ಲಿ ತನಿಖೆ ನಡೆಯಲಿ
Team Udayavani, Sep 1, 2022, 9:30 PM IST
ಬೆಂಗಳೂರು: ಚಿತ್ರದುರ್ಗದ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಪೊಲೀಸ್ ತನಿಖೆ ಹೈಕೋರ್ಟ್ ನಿಗಾದಲ್ಲಿ ನಡೆಯಬೇಕು ಎಂಬ ಕೂಗು ಎದ್ದಿದೆ.
ಈ ಕುರಿತು ಬೆಂಗಳೂರಿನ ಕೆಲ ವಕೀಲರು ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ ಅವರಿಗೆ ಲಿಖೀತ ಮನವಿ ಸಲ್ಲಿಸಿದ್ದು, ಪ್ರಕರಣದ ತನಿಖೆ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ. ವಕೀಲರಾದ ಸಿದ್ಧಾರ್ಥ್ ಭೂಪತಿ, ಶ್ರೀರಾಮ್ ಟಿ. ನಾಯಕ್, ಬಿ.ಎಸ್. ಗಣೇಶ್ ಪ್ರಸಾದ್, ವಿ. ನಾಗೇಶ್ ಹಾಗೂ ಕೆ.ಎ ಪೊನ್ನಣ್ಣ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಗುರುವಾರ ಲಿಖಿತ ಮನವಿ ಸಲ್ಲಿಸಿದ್ದಾರೆ.
ಮುರುಘಾ ಶರಣರು ನಾಡಿನ ಪ್ರಭಾವಿ ಮಠಾಧೀಶರಾಗಿದ್ದಾರೆ. ಹೀಗಾಗಿ, ಈ ಪ್ರಕರಣದಲ್ಲಿ ತನಿಖೆ ನಡೆಸಬೇಕಾದ ಪೊಲಿಸರು ಇನ್ನೂ ಅವರನ್ನು ವಿಚಾರಣೆಗೆ ಕರೆದಿಲ್ಲ, ವಶಕ್ಕೆ ಪಡೆದಿಲ್ಲ. ಈ ಮಧ್ಯೆ, ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಮಠಕ್ಕೆ ಹೋಗಿ ಸ್ವಾಮೀಜಿಯನ್ನು ಭೇಟಿ ಮಾಡಿ ಅವರನ್ನು ಬೆಂಬಲಿಸುವ ಮಾತುಗಳನ್ನಾಡಿ ಅವರ ರಕ್ಷಣೆ ನಿಂತಿದ್ದಾರೆ. ಜೊತೆಗೆ, ರಾಜ್ಯದ ಗೃಹ ಸಚಿವರು “ಈ ಪ್ರಕರಣದಲ್ಲಿ ಮಠದ ನೌಕರನ ಪಿತೂರಿ ಇದೆ ಎಂಬ ಶಂಕೆ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದಾರೆ. ಈ ಎಲ್ಲಾ ಅಂಶಗಳನ್ನು ಗಮನಿಸಿದರೆ ಸರ್ಕಾರ ಆರೋಪಿ ಸ್ಥಾನದಲ್ಲಿರುವ ಸ್ವಾಮೀಜಿ ರಕ್ಷಣೆಗೆ ನಿಂತಿರುವುದು ಕಂಡು ಬರುತ್ತಿದೆ ಎಂದು ವಕೀಲರು ದೂರಿದ್ದಾರೆ.
ಆದ್ದರಿಂದ, ಈ ಪ್ರಕರಣದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆ ನಡೆಯುವ ಸಾಧ್ಯತೆ ಇಲ್ಲದಿರುವ ಕಾರಣ ಕೂಡಲೇ ಹೈಕೋರ್ಟ್ ಮಧ್ಯಪ್ರವೇಶ ಮಾಡಬೇಕು ಹಾಗೂ ಮೇಲ್ವಿಚಾರಣೆಯಲ್ಲಿ ಇದರ ತನಿಖೆ ನಡೆಯುವಂತೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.
ಮುರುಘಾ ಶರಣರು ಮುರುಘಾ ಮಠದ ಹೈಸ್ಕೂಲ್ನಲ್ಲಿರುವ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. 16 ವರ್ಷದ ಬಾಲಕಿಯ ಮೇಲೆ ಕಳೆದ ಮೂರೂವರೆ ವರ್ಷಗಳಿಂದ ಹಾಗೂ 15ರ ಬಾಲಕಿಯ ಮೇಲೆ ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಲೈಂಗಿಕ ಕಿರುಕಳ ನೀಡಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಾಗಿದ್ದರೂ ಪೊಲೀಸರ ತನಿಖೆ ಸಂಪೂರ್ಣ ಲೋಪಗಳಿಂದ ಕೂಡಿದೆ ಎಂದು ವಕೀಲರು ಮನವಿಯಲ್ಲಿ ಅಕ್ಷೇಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.