ಮಡಿಕೇರಿಯಲ್ಲಿ ಭಾರಿ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು: ರಸ್ತೆಗಳು ಜಲಾವೃತ; ಆರೆಂಜ್ ಅಲರ್ಟ್

Team Udayavani, Sep 1, 2022, 8:37 PM IST

21-rain

ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗಿದ್ದು, ಮಡಿಕೇರಿಯಲ್ಲಿ ಮಳೆ ನೀರು ಉಕ್ಕಿ ಹರಿದು ಮನೆಗಳು ಮತ್ತು ಅಂಗಡಿಗಳಿಗೆ ನುಗ್ಗಿದೆ. ಹಲವು ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ಅಡಚಣೆ ಉಂಟಾಯಿತು.

ದಿಢೀರ್ ಆಗಿ ಸುರಿದ ಭಾರೀ ಮಳೆ ಆತಂಕವನ್ನು ಸೃಷ್ಟಿಸಿತ್ತಲ್ಲದೆ, ಹಾನಿ ಉಂಟು ಮಾಡಿತು. ಕೈಗಾರಿಕಾ ಬಡಾವಣೆ, ಕಾವೇರಿ ಲೇಔಟ್, ಓಂಕಾರೇಶ್ವರ ರಸ್ತೆ, ಗೌಳಿಬೀದಿ, ಇಂದಿರಾನಗರ, ಪತ್ರಿಕಾಭವನ ವ್ಯಾಪ್ತಿಯಲ್ಲಿ ಪ್ರವಾಹದ ರೀತಿಯಲ್ಲಿ ಚರಂಡಿಗಳು ತುಂಬಿ ರಸ್ತೆಯಲ್ಲಿ ನೀರು ಹರಿದಿದೆ. ಕಾವೇರಿ ಲೇಔಟ್ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮಳೆ ಅವಾಂತರವನ್ನು ಸೃಷ್ಟಿಸಿದ್ದು, ಮನೆಗಳಿಗೆ, ವಿವಿಧ ವಾಣಿಜ್ಯ ಮಳಿಗೆಗಳಿಗೆ, ಸಭಾಂಗಣಕ್ಕೆ ನೀರು ನುಗ್ಗಿದೆ.

ನಗರಸಭೆ ಜೆಸಿಬಿ ಯಂತ್ರವನ್ನು ಬಳಸಿ ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಕಲ್ಪಿಸಿತ್ತದರೂ ಬಿಡುವು ನೀಡದೆ ಮಳೆ ಸುರಿದ ಪರಿಣಾಮ ಪರಿಸ್ಥಿತಿ ಹತೋಟಿಗೆ ಬರಲಿಲ್ಲ. ಶಾಲಾ ವಿದ್ಯಾರ್ಥಿಗಳು ಮನೆಗಳಿಗೆ ತೆರಳಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು.

ನಾಪೋಕ್ಲು, ಕುಶಾಲನಗರ, ಹಾರಂಗಿ ಮತ್ತು ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಕೂಡ ಧಾರಾಕಾರ ಮಳೆಯಾಗಿದೆ. ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆ ಭಾಗದಲ್ಲೂ ಸಾಧಾರಣ ಮಳೆಯಾಗಿದೆ.

ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ:200 ಕೋಟಿಯೊಂದಿಗೆ ಸಿಕ್ಕಿಬಿದ್ದಿದ್ದ ಯುಪಿ ಉದ್ಯಮಿಗೆ ಜಾಮೀನು

32 ಇಂಚು ಅಧಿಕ ಮಳೆ

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಪ್ರಸ್ತುತ ವರ್ಷ ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಗೆ 32 ಇಂಚು ಅಧಿಕ ಮಳೆಯಾಗಿದೆ. ಇಲ್ಲಿಯವರೆಗಿನ ಮಳೆ 2863.75 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2087.52 ಮಿ.ಮೀ ಮಳೆಯಾಗಿತ್ತು.

ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 6.35 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.42 ಮಿ.ಮೀ. ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 18.90 ಮಿ.ಮೀ. ಕಳೆದ ವರ್ಷ ಇದೇ ದಿನ 2.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 4161.76 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2932.71 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 7.27 ಮಿ.ಮೀ.  ಜನವರಿಯಿಂದ ಇಲ್ಲಿಯವರೆಗಿನ ಮಳೆ 2169.25 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1680.49 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.17 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2260.26 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1649.38 ಮಿ.ಮೀ. ಮಳೆಯಾಗಿತ್ತು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.