ಮಂಗಳೂರಿಗೆ ಮೋದಿ ಭೇಟಿ: ಮತ್ತೆ ಅಚ್ಛೇ ದಿನದ ಪ್ರಶ್ನೆ ಮುಂದಿಟ್ಟ ಕಾಂಗ್ರೆಸ್
Team Udayavani, Sep 2, 2022, 9:47 AM IST
ಬೆಂಗಳೂರು: ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸಕ್ಕಾಗಿ ಮಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್ ಮತ್ತೆ “ಅಚ್ಛೆ ದಿನ ಯಾವಾಗ” ಎಂಬ ಪ್ರಶ್ನೆ ಮುಂದಿಟ್ಟಿದೆ.
ಕಳೆದ ಬಾರಿ ಬೆಂಗಳೂರು ಹಾಗೂ ಮೈಸೂರಿಗೆ ಭೇಟಿ ನೀಡಿದ್ದ ಪ್ರಧಾನಿಗೆ ಕಾಂಗ್ರೆಸ್ ಇದೇ ಪ್ರಶ್ನೆ ಮುಂದಿಟ್ಟಿತ್ತು. ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಡಿತ್ತು. ಈ ಬಾರಿಯೂ ಅದೇ ತಂತ್ರ ಬಳಸುವ ಮೂಲಕ ಬಿಜೆಪಿಗೆ ಇರಿಸುಮುರಿಸುಂಟು ಮಾಡಿದೆ.
ರಾಷ್ಟ್ರ ರಾಜಕಾರಣದಲ್ಲಿ ಹೊಸ ಧ್ರುವೀಕರಣ ಸೃಷ್ಟಿಯಾಗಿದೆ. ಲಂಚದ ಆರೋಪಿಗಳನ್ನು ರಕ್ಷಿಸಲು ಕೆಲವು ರಾಜಕೀಯ ಗುಂಪುಗಳು ಬಹಿರಂಗವಾಗಿಯೇ ಪ್ರಯತ್ನ ನಡೆಸುತ್ತಿವೆ ಎಂದು ಪ್ರಧಾನಿ ನೀಡಿರುವ ಹೇಳಿಕೆಯನ್ನೇ ಅಸ್ತ್ರವಾಗಿ ಬಳಸಿರುವ ಕಾಂಗ್ರೆಸ್ 40 % ಕಮಿಷನ್ ಆರೋಪದ ಬಗ್ಗೆ ಮೌನವೇಕೆ? ಎಂದು ಪ್ರಶ್ನೆ ಮಾಡಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರೈತರಿಗೆ ಎಂಎಸ್ ಪಿ ಲೆಕ್ಕದಲ್ಲೇ ಮೋಸವಾಗುತ್ತಿದೆ. ಎಂಎಸ್ ಪಿ ದರದಲ್ಲಿ ಬೆಲೆ ಖರೀದಿಸುವವರೇ ಇಲ್ಲ. ರೈತರಿಗೆ ಅಚ್ಛೇ ದಿನ್ ಯಾವಾಗ ಮೋದಿಯವರೇ? ಎಂದು ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ:ಲೈಂಗಿಕ ಕಿರುಕುಳ ಕೇಸ್: ಮುರುಘಾ ಶರಣರಿಗೆ 14 ದಿನ ನ್ಯಾಯಾಂಗ ಬಂಧನ
2022ಕ್ಕೆ ಎಲ್ಲರಿಗೂ ವಿದ್ಯುತ್ ಎನ್ನುತ್ತೀರಿ. ಆದರೆ ದಿನಕ್ಕೆ ಹತ್ತು ಗಂಟೆ ಕನಿಷ್ಠ ವಿದ್ಯುತ್ ಕೂಡಾ ಇಲ್ಲ. ಮಹಿಳೆಯರು ಮಸಾಲೆ ಅರೆಯಲು ವಿದ್ಯುತ್ ಕಚೇರಿಗೆ ಹೋಗಿದ್ದರಂತೆ. ಇದಕ್ಕಾಗಿಯೇ ಜನರಿಗೆ ಕ್ಯಾಂಡಲ್ ಹಚ್ಚುವಂತೆ ಕರೆ ನೀಡಿದರೇ ಮೋದಿಯವರೇ? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಸನ್ಮಾನ್ಯ ಪ್ರಧಾನ ಮಂತ್ರಿ @narendramodi ಯವರಿಗೆ ಮಂಗಳೂರಿಗೆ ಸ್ವಾಗತ.
ನಿಮ್ಮ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ?
ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ. 1/12
#AnswerMadiModi— Siddaramaiah (@siddaramaiah) September 2, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.