ಮಂಗಳೂರಿಗೆ ಪ್ರಧಾನಿ ಭೇಟಿ: ಬಸ್ ಗಳ ಕೊರತೆಯಿಂದ ಪರದಾಡಿದ ಪ್ರಯಾಣಿಕರು


Team Udayavani, Sep 2, 2022, 11:28 AM IST

ಮಂಗಳೂರಿಗೆ ಪ್ರಧಾನಿ ಆಗಮನ: ಬಸ್ ಗಳ ಕೊರತೆಯಿಂದ ಪರದಾಡಿದ ಪ್ರಯಾಣಿಕರು

ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಹಲವು ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಆಗಮಿಸುತ್ತಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಶುಕ್ರವಾರ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಲಾಗಿದೆ. ಬೈಕಂಪಾಡಿಯಲ್ಲಿ ವಾಹನಗಳಿಗೆ ಪೊಲೀಸರಿಂದ ತಡೆ ಹಾಕಿದ್ದಾರೆ. ಹೆದ್ದಾರಿಯಲ್ಲಿ ಪೊಲೀಸರೊಂದಿಗೆ ವಾಹನ ಚಾಲಕರು ವಾಗ್ವಾದ ನಡೆಸಿದ ದೃಶ್ಯವೂ ಕಂಡು ಬಂತು. ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗಿದೆ.

ಪ್ರಯಾಣಿಕರ ಪರದಾಟ: ಕಾರ್ಯಕ್ರಮಕ್ಕೆ ಫಲಾನುಭವಿಗಳು ಮತ್ತು ಸಾರ್ವಜನಿಕರನ್ನು ಕರೆತರಲು ಸಾವಿರಾರು ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಹಲವು ರೂಟ್ ಗಳ ಖಾಸಗಿ ಮತ್ತು ಸರ್ಕಾರಿ ಬಸ್ ಗಳನ್ನು ಕಾರ್ಯಕ್ರಮಕ್ಕೆ ತೆರಳಿರುವ ಕಾರಣ ಬೆಳಗಿನ ಜಾವ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಪರದಾಡಿದರು. ಹಲವು ಕಡೆ ಬಸ್ ಗಳಿಗಾಗಿ ಗಂಟೆಗಟ್ಟಲೆ ಕಾದು ಕುಳಿತ ದೃಶ್ಯ ಕಂಡು ಬಂತು.

ಇದನ್ನೂ ಓದಿ:ಐಎನ್‌ಎಸ್ ವಿಕ್ರಾಂತ್‌ ದೇಶಕ್ಕೆ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ

ವಾಹನ ಸಂಚಾರ ಮಾರ್ಪಾಡು ಮಾಡಿರುವುದು ಹಾಗೂ ಸಾರ್ವಜನಿಕರ ಓಡಾಟ ಕಡಿಮೆ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಕೆಲವೊಂದು ಸಿಟಿ ಬಸ್‌ ಕಾರ್ಯಾಚರಣೆ ಕಡಿತಗೊಳಿಸಲು ನಿರ್ಧರಿಸಿದೆ. ಈ ಕಾರಣದಿಂದಾಗಿ ನಗರದಲ್ಲಿ ಶೇ.30ರಷ್ಟು ಬಸ್‌ಗಳು ಮಾತ್ರ ಸಂಚರಿಸುವ ಸಾಧ್ಯತೆ ಇದೆ.

ಕೆಂಜಾರು-ಕೆಪಿಟಿ, ಹೆದ್ದಾರಿ ಸಂಚಾರ ನಿಷೇಧ: ಬಜಪೆ-ಕೆಂಜಾರು-ಮರವೂರು-ಮರಕಡ-ಕಾವೂರು-ಬೋಂದೆಲ್‌- ಪದವಿನಂಗಡಿ-ಯೆಯ್ನಾಡಿ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಜಂಕ್ಷನ್‌ ನಿಂದ ಕೊಟ್ಟಾರ ಚೌಕಿ-ಕೂಳೂರು-ಎನ್‌ಎಂಪಿಎವರೆಗೆ ಹಾದು ಹೋಗುವ ರಸ್ತೆಯ ಎರಡೂ ಬದಿಗಳಲ್ಲಿ ಯಾವುದೇ ರೀತಿಯ ವಾಹನಗಳನ್ನು ನಿಲ್ಲಿಸುವಂತಿಲ್ಲ. ಇದೇ ರಸ್ತೆಗಳಲ್ಲಿ ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಎಲ್ಲ ಸರಕು ವಾಹನ, ಘನ ವಾಹನ, ಪ್ರವಾಸಿ ವಾಹನ ಹಾಗೂ ಇತರ ಸಾರ್ವಜನಿಕ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಆದರೆ ಗೋಲ್ಡ್‌ ಫಿಂಚ್‌ ಸಿಟಿ ಮೈದಾನದ ಸಮಾವೇಶಕ್ಕೆ ಹೋಗುವ ಅತೀ ಗಣ್ಯ ವ್ಯಕ್ತಿಗಳು, ಗಣ್ಯ ವ್ಯಕ್ತಿಗಳು ಹಾಗೂ ಸಾರ್ವಜನಿಕರ ವಾಹನಗಳು ನಿಗದಿತ ನಿಲುಗಡೆ ಸ್ಥಳಗಳಿಗೆ ಹೋಗಲು, ಮತ್ತು ತುರ್ತು ಸೇವೆಯ ವಾಹನಗಳಿಗೆ ನಿಷೇಧಿತ ರಸ್ತೆಗಳಲ್ಲಿ ಸಂಚರಿಸಬಹುದು. ಗೋಲ್ಡ್‌ ಫಿಂಚ್‌ ಮೈದಾನ ಮತ್ತು ಸುತ್ತಲಿನ 500 ಮೀ. ವ್ಯಾಪ್ತಿಯ ರಸ್ತೆಗಳಲ್ಲೂ ಎಲ್ಲ ವಾಹನಗಳ ನಿಲುಗಡೆಗೆ ನಿಷೇಧ.

ಸೆ. 2ರಂದು ಬೆಳಗ್ಗೆ 10ರಿಂದ ಪ್ರಧಾನಿಯವರು ವಿಮಾನ ನಿಲ್ದಾಣದಿಂದ ನಿರ್ಗಮಿಸುವವರೆಗೆ ನಂತೂರು, ಬಿಕರ್ನಕಟ್ಟೆ- ಕೈಕಂಬ, ಮಂಗಳ ಜ್ಯೋತಿ, ವಾಮಂಜೂರು, ಪೊರ್ಕೊಡಿ, ಮೂಲ್ಕಿ, ಹಳೆಯಂಗಡಿ, ಜೋಕಟ್ಟೆ ಕ್ರಾಸ್‌, ಲೇಡಿಹಿಲ್‌ ಸೇರಿದಂತೆ 9 ಜಂಕ್ಷನ್‌ಗಳಲ್ಲಿ ಸಂಚಾರ ಬದಲಾಯಿಸಿ, ಪರ್ಯಾಯ ರಸ್ತೆ ಗುರುತಿಸಲಾಗಿದೆ.

ಟಾಪ್ ನ್ಯೂಸ್

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Mangaluru: ಚಿನ್ನದ ಬಿಸ್ಕೆಟ್‌ ಇದೆ ಎಂದು ನಂಬಿಸಿ 4 ಲಕ್ಷ ರೂ. ವಂಚನೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

3

Mangaluru: ಶಾಲಾ ವಾಹನ ಸುರಕ್ಷತೆ; ಪಾಲಕರಿಗೆ ಚಿಂತೆ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು

Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Suilla

Bantwala: ಬೋಳಂಗಡಿ; ಅಡಿಕೆ ಕೀಳುತ್ತಿದ್ದ ಕಾರ್ಮಿಕ ಮರದಿಂದ ಬಿದ್ದು ಸಾವು

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

ud

Puttur: ಮನೆ ಅಂಗಲದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.