1.30 ಕೋಟಿ ವೆಚ್ಚದ ರಸ್ತೆ ನಿರ್ಮಾಣಕ್ಕೆ ಚಾಲನೆ
Team Udayavani, Sep 2, 2022, 3:11 PM IST
ಆಳಂದ: ತಾಲೂಕಿನ ಗಡಿಯಲ್ಲಿರುವ ಖಜೂರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ದ್ವಿಪಥ ರಸ್ತೆ ಕಾಮಗಾರಿಗೆ ಶಾಸಕ ಸುಭಾಷ ಗುತ್ತೇದಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು. ಈ ದ್ವಿಪಥ ರಸ್ತೆ ಕಾಮಗಾರಿಗೆ 2021-22ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಮಂಜೂರಾದ 1.30ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಈ ಅನುದಾನದಲ್ಲಿ ಖಜೂರಿ ಗ್ರಾಮದಿಂದ ಕ್ರಾಸ್ ವರೆಗಿನ ಮುಖ್ಯ ರಸ್ತೆ ನಿರ್ಮಾಣ ಹಾಗೂ ಬೀದಿ ದೀಪಗಳ ಅಳವಡಿಕೆ ಮಾಡಲಾಗುವುದು ಎಂದು ತಿಳಿಸಿದರು.
ಖಜೂರಿ ಗ್ರಾಮಕ್ಕೆ ಈ ಅವ ಧಿಯಲ್ಲಿ ಸುಮಾರು 10 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಗ್ರಾಮದಲ್ಲಿ ಶಾಲಾ ಕೋಣೆಗಳ ನಿರ್ಮಾಣ, ಜಲಜೀವನ ಮಿಷನ್ ಕಾಮಗಾರಿ, ಆಸ್ಪತ್ರೆ ಕಾಂಪೌಂಡ್ ನಿರ್ಮಾಣ, ಸಂಪರ್ಕ ರಸ್ತೆಗಳು, ಸಿಸಿ ರಸ್ತೆಗಳು, ಗ್ರಂಥಾಲಯ ಕಟ್ಟಡ, ಪೈಪಲೈನ್ ಕಾಮಗಾರಿ, ಘನ ತ್ಯಾಜ್ಯ ವಿಲೇವಾರಿ ಘಟಕ, ಆಸ್ಪತ್ರೆಯಲ್ಲಿ ಶೌಚಾಲಯ ಕುಡಿಯುವ ನೀರಿನ ವ್ಯವಸ್ಥೆ, ಶವ ಪರೀಕ್ಷಾ ಕೊಠಡಿ ಕಾಮಗಾರಿ, ತಡೋಳಾ ರಸ್ತೆ, ಸಿದ್ಧೇಶ್ವರ ದೇವಸ್ಥಾನದ ಅಭಿವೃದ್ಧಿ ಸೇರಿದಂತೆ ಅನೇಕ ಕೆಲಸಗಳನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಖಜೂರಿ ಗ್ರಾಮಕ್ಕೆ ನನ್ನ ಶಾಸಕತ್ವದ ಅವ ಧಿಯಲ್ಲಿ ಅತೀ ಹೆಚ್ಚು ಅನುದಾನ ನೀಡಿದ್ದೇನೆ. ಈ ಹಿಂದೆ ಗ್ರಾಮವನ್ನು ಸುವರ್ಣ ಗ್ರಾಮವನ್ನಾಗಿ ಆಯ್ಕೆ ಮಾಡಿ ಗ್ರಾಮದ ಪ್ರತಿ ಮೂಲೆಯಲ್ಲೂ ಕಾಮಗಾರಿ ಮಾಡಿಸಿದ್ದೇನೆ ಎಂದು ಹೇಳಿದರು.
ಗ್ರಾ.ಪಂ ಅಧ್ಯಕ್ಷ ಮಂಜುನಾಥ ಬಂಗರಗೆ, ತಾ.ಪಂ ಮಾಜಿ ಉಪಾಧ್ಯಕ್ಷ ಗುರುನಾಥ ಪಾಟೀಲ, ಬಿಜೆಪಿ ಜಿಲ್ಲಾ ಗ್ರಾಮಾಂತ ಉಪಾಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ, ಶಿವಲಿಂಗಪ್ಪ ಬಂಗರಗೆ, ತಡಕಲ್ ಗ್ರಾಪಂ ಮಾಜಿ ಅಧ್ಯಕ್ಷ ಶಿವಪುತ್ರ ಬೆಳ್ಳೆ, ಶ್ರೀಮಂತ ನಾಮಣೆ, ಸಿದ್ದರಾಮ ಬನಶೆಟ್ಟಿ, ಮಹಿಬೂಬ್ ಶೇಖ್, ಅಶೋಕ ಹೊಸಮನೆ, ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಉದಯಕುಮಾರ ಕಂದಗೂಳೆ, ಸಂಗಯ್ಯ ಮಠಪತಿ, ಗಾಂಧಿ ಘಂಟೆ, ರಾಜಶೇಖರ ಗುರುಬಸಗೊಳ, ಬಿಜೆಪಿ ಯುವ ಮೊರ್ಚಾ ಅಧ್ಯಕ್ಷ ಕುಮಾರ ಬಂಡೆ, ಪ್ರತಾಪ ವಾಡೆ, ತಿಪ್ಪಣ್ಣ ಬಂಡೆ, ಶರಣಪ್ಪ ಹೊಸಮನೆ, ಆಳಂದ ಗ್ರಾಪಂ ಮಾಜಿ ಅಧ್ಯಕ್ಷ ಪ್ರಫುಲ್ ಬಾಬಳಸುರೆ, ಶಿವಪ್ಪ ಘಂಟೆ, ಶಿವಪ್ರಕಾಶ ಹೀರಾ, ಜಿಪಂ ಕಿರಿಯ ಅಭಿಯಂತರ ಸಂದೀಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.