ಅಕ್ರಮ ದನ ಸಾಗಾಟ; ವಿಟ್ಲ ಪೊಲೀಸರಿಂದ ಇಬ್ಬರ ಬಂಧನ
Team Udayavani, Sep 3, 2022, 12:50 AM IST
ವಿಟ್ಲ: ಪುಣಚ ಗ್ರಾಮದ ಕೊಲ್ಲಪದವು ಸಾರ್ವಜನಿಕ ಬಸ್ಸು ನಿಲ್ದಾಣದ ಬಳಿ ವಿಟ್ಲ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದಾಗ ಅಕ್ರಮ ದನ ಸಾಗಾಟ ಪತ್ತೆಯಾಗಿದೆ.
ಆಮ್ನಿ ಕಾರಿನಲ್ಲಿ ಹಿಂಸಾತ್ಮಕವಾಗಿ ಗಂಡು ಕರುವನ್ನು ಸಾಗಿಸುತ್ತಿದ್ದ ಆರೋಪಿಗಳಾದ ನಾರಾಯಣ ನಾಯ್ಕ ಮತ್ತು ಸಂತೋಷ ಕುಮಾರ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ಹಿಂಸಾತ್ಮಕ ಸಾಗಾಟ
ಬೆಳಗ್ಗೆ ಗಂಟೆ 5.15ಕ್ಕೆ ಶರವು ಕಡೆಯಿಂದ ಸಾರಡ್ಕ ಕಡೆಗೆ ಜಾನು ವಾರುಗಳನ್ನು ಕಾರಿನಲ್ಲಿ ತುಂಬಿಸಿ ಅದರ ಕುತ್ತಿಗೆಗೆ ಮತ್ತು ಕಾಲುಗಳಿಗೆ ಹಗ್ಗದಿಂದ ಹಿಂಸಾತ್ಮಕ ರೀತಿಯಲ್ಲಿ ಬಿಗಿದು ಕಟ್ಟಿ ಮಾಂಸ ಮಾಡುವ ಉದ್ದೇಶಕ್ಕಾಗಿ ಕೇರಳ ಕಡೆಗೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಪೊಲೀಸರಾದ ಪ್ರಸನ್ನ ಕುಮಾರ್ ಮತ್ತು ಇಲಾಖಾ ಜೀಪು ಚಾಲಕ ಸಂತೋಷ ಕುಮಾರ್ ಅವರೊಂದಿಗೆ ವಿಟ್ಲ ಪೇಟೆ, ಚಂದಳಿಕೆ, ಮಂಗಳಪದವು ಸಾಲೆತ್ತೂರು, ಉಕ್ಕುಡ, ಕುದ್ದುಪದವು ಕಡೆಗಳಲ್ಲಿ ರಾತ್ರಿ ರೌಂಡ್ಸ್ ನಲ್ಲಿದ್ದಾಗ ಈ ಪ್ರಕರಣ ಬಯಲಾಗಿದೆ. ವಶಪಡಿಸಿಕೊಂಡಿರುವ ಸೊತ್ತುಗಳ ಅಂದಾಜು ಮೌಲ್ಯ 1,52,000 ರೂ. ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Champions Trophy: ಕೊನೆಗೂ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.