ಭೀಕರ ಅಪಘಾತ: ನಿಂತಿದ್ದ ಬಸ್ಸಿಗೆ ಟ್ರಕ್ ಢಿಕ್ಕಿ ಹೊಡೆದು 4ಕಾರ್ಮಿಕರು ಸಾವು, 24 ಮಂದಿಗೆ ಗಾಯ
Team Udayavani, Sep 3, 2022, 10:02 AM IST
ಲಕ್ನೋ : ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸಿಗೆ ಟ್ರಕ್ ವೊಂದು ಹಿಂದಿನಿಂದ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, ಇಪ್ಪತ್ತನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಬಾರಾಬಂಕಿ ಪ್ರದೇಶದಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ.
ಅರವತ್ತು ಜನ ನೇಪಾಳದ ವಲಸೆ ಕಾರ್ಮಿಕರನ್ನು ಗೋವಾ ಕಡೆಗೆ ಬಸ್ಸಿನಲ್ಲಿ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಬಸ್ಸಿನ ಟಯರ್ ಪಂಚರ್ ಅದ ಪರಿಣಾಮ ಚಾಲಕ ಚಕ್ರ ಬದಲಿಸಲು ರಸ್ತೆ ಬದಿ ಬಸ್ಸನ್ನು ನಿಲ್ಲಿಸಿದ್ದ ಈ ವೇಳೆ ಅತಿವೇಗದಿಂದ ಬಂದ ಟ್ರಕ್ ವೊಂದು ಬಸ್ಸಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ ಪರಿಣಾಮ ಬಸ್ಸಿನಲ್ಲಿದ್ದ ೬೦ ಮಂದಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ, ಅಲ್ಲದೆ ಸುಮಾರು ಇಪ್ಪತ್ತನಾಲ್ಕು ಮಂದಿ ಗಾಯಗೊಂಡಿದ್ದು ಅವರನ್ನು ಬಾರಾಬಂಕಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಅಲ್ಲದೆ ಆರು ಮಂದಿಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಲಕ್ನೋ ದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ : ಏಳು ವಾರಗಳ ಬಳಿಕ ಲಂಕಾಗೆ ಮರಳಿದ ಮಾಜಿ ಅಧ್ಯಕ್ಷ ಗೋಟಬಯ ರಾಜಪಕ್ಸ
ಸಾವನ್ನಪ್ಪಿದ ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಕಾರ್ಮಿಕರನ್ನು ತಮ್ಮ ಊರಿಗೆ ಕಳುಹಿಸಿಕೊಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ
Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ
Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ
ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.