ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಅರಶಿನ-ಕಾಳುಮೆಣಸಿನ ಕಷಾಯ
ಬಾಯಿಯ ದುರ್ಗಂಧವನ್ನು ನಿವಾರಿಸುವಲ್ಲಿ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.
Team Udayavani, Sep 3, 2022, 12:15 PM IST
ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಲ್ಲಿ ಪ್ರಾಕೃತಿಕವಾಗಿ ದೊರಕುವ ಗಿಡಮೂಲಿಕೆಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಇಂತಹ ಗಿಡಮೂಲಿಕೆಗಳಲ್ಲಿ ಅರಶಿನವು ಪ್ರಮುಖವಾದದ್ದು. ಅರಶಿನದ ಸೇವನೆಯಿಂದ ದೇಹದಲ್ಲಿನ ನಂಜಿನ ಅಂಶ ದೂರವಾಗಿ ಆರೋಗ್ಯವಂತ ಶರೀರವನ್ನು ಹೊಂದಬಹುದಾಗಿದೆ.
ಅರಶಿನವನ್ನು ಬಳಸಿಕೊಂಡು ಹಲವಾರು ಔಷಧಿಗಳನ್ನು ತಯಾರಿಸಲಾಗುತ್ತದೆ. ನಮ್ಮ ದಿನನಿತ್ಯದ ಆಹಾರ ಕ್ರಮಗಳಲ್ಲೂ ಇದನ್ನು ಬಳಸಬಹುದಾಗಿದೆ. ಇದನ್ನು ಬಳಸಿಕೊಂಡು ಅತ್ಯಂತ ಸುಲಭವಾಗಿ ತಯಾರಿಸಬಲ್ಲ ಅರಶಿನ- ಕಾಳುಮೆಣಸಿನ ಕಷಾಯದ ಸೇವನೆ ಶೀತ, ಗಂಟಲುನೋವು, ಹೃದಯ ಸಂಬಂಧಿ ಸಮಸ್ಯೆ,ಶ್ವಾಸಕೋಶದ ಸಮಸ್ಯೆಗಳನ್ನು ಒಳಗೊಂಡಂತೆ ಬಾಯಿಯ ದುರ್ಗಂಧವನ್ನು ನಿವಾರಿಸುವಲ್ಲಿ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.
ಅರಶಿನ- ಕಾಳು ಮೆಣಸಿನ ಕಷಾಯ ಮಾಡಲು ಬೇಕಾಗುವ ಸಾಮಾಗ್ರಿಗಳು
ಅರಶಿನ, ಕಾಳುಮೆಣಸು, ಲಿಂಬೆಹಣ್ಣು ಮತ್ತು ಬೆಲ್ಲ.
ಮಾಡುವ ವಿಧಾನ
ಮೊದಲು 2 ಲೋಟ ನೀರಿಗೆ ಪುಡಿ ಮಾಡಿಕೊಂಡಿರುವ ಒಂದು ಚಮಚ ಅರಶಿನವನ್ನು ಹಾಕಿ. ನಂತರ ಇದಕ್ಕೆ ಕಾಳುಮೆಣಸನ್ನು ಪುಡಿಮಾಡಿ ಅರ್ಧ ಚಮಚದಷ್ಟು ಸೇರಿಸಿ. ಒಂದು ಲೋಟ ಕಷಾಯವಾಗುವಷ್ಟು ಚೆನ್ನಾಗಿ ಕುದಿಸಿ. ಆ ಬಳಿಕ ಅಗತ್ಯಕ್ಕೆ ತಕ್ಕಷ್ಟು ಬೆಲ್ಲ ಸೇರಿಸಿ. (ಮಧುಮೇಹಿಗಳು ಆದಷ್ಟು ಕಡಿಮೆ ಬೆಲ್ಲ ಸೇರಿಸುವುದು ಒಳ್ಳೆಯದು) ಹೀಗೆ ತಯಾರಿಸಲಾದ ಕಷಾಯಕ್ಕೆ ಕೊನೆಯಲ್ಲಿ ಸ್ವಲ್ಪ ಲಿಂಬೆಹಣ್ಣಿನ ರಸ ಸೇರಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.