ಬಿಜೆಪಿ ಅಧಿಕಾರದಲ್ಲಿ ದೇಶದಲ್ಲಿ ದ್ವೇಷ ಹೆಚ್ಚಾಗಿದೆ: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ


Team Udayavani, Sep 4, 2022, 3:01 PM IST

Hate is on rise in India, says Rahul Gandhi

ಹೊಸದಿಲ್ಲಿ: ದರ ಏರಿಕೆಯನ್ನು ವಿರೋಧಿಸಿ ರಾಮಲೀಲಾ ಮೈದಾನದಲ್ಲಿ ನಡೆದ ‘ಮೆಹಂಗಾಯಿ ಪರ್ ಹಲ್ಲಾ ಬೋಲ್’ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ದ್ವೇಷ ಹೆಚ್ಚಾಗಿದೆ ಎಂದರು.

ಮೋದಿ ಸರ್ಕಾರದ ನೀತಿಗಳು ಕೇವಲ ಇಬ್ಬರು ದೊಡ್ಡ ಕೈಗಾರಿಕೋದ್ಯಮಿಗಳಿಗೆ ಮಾತ್ರ ಲಾಭ ನೀಡುತ್ತಿವೆ. ಅವರಿಬ್ಬರ ಬೆಂಬಲವಿಲ್ಲದೆ ಮೋದಿ ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ರಾಹುಲ್ ಟೀಕಿಸಿದರು.

“ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶವನ್ನು ವಿಭಜಿಸುತ್ತಿವೆ. ಅವರು ಭಯವನ್ನು ಬೆಳೆಸುತ್ತಾರೆ ಮತ್ತು ಜನರನ್ನು ವಿಭಜಿಸುತ್ತಾರೆ. ಈ ಭಯದ ಲಾಭ ಯಾರಿಗೆ ಸಿಗುತ್ತದೆ? ನರೇಂದ್ರ ಮೋದಿ ಸರ್ಕಾರದಿಂದ ಬಡವರು, ರೈತರು, ಸಣ್ಣ ವ್ಯಾಪಾರಿಗಳು ಏನಾದರೂ ಪ್ರಯೋಜನ ಪಡೆಯುತ್ತಿದ್ದಾರೆಯೇ? ಕೇವಲ ಇಬ್ಬರು ಕಾರ್ಪೊರೇಟ್ ಜನರಿಗೆ ಮಾತ್ರ ಈ ದ್ವೇಷ ಮತ್ತು ಭಯದ ಲಾಭ ಸಿಗುತ್ತಿದೆ” ಎಂದು ರಾಹುಲ್ ಹರಿಹಾಯ್ದರು.

ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್, ”ಬಿಜೆಪಿ ಎಲ್ಲಾ ಸವಲತ್ತುಗಳನ್ನು ಇಬ್ಬರಿಗೆ ನೀಡುತ್ತಿದೆ. ನರೇಂದ್ರ ಮೋದಿಯವರು ನೋಟು ಅಮಾನ್ಯೀಕರಣ ಮಾಡಿದ್ದರು, ಇದರಿಂದ ಏನಾದರೂ ಬಡವರಿಗೆ ಸಹಾಯವಾಯ್ತಾ? ಮೂರು ಕಾನೂನುಗಳು ತಂದಿದ್ದು ರೈತರಿಗಾಗಿ ಅಲ್ಲ, ಆದರೆ ಅವು ಆ ಎರಡು ಕಾರ್ಪೊರೇಟ್ ಸಂಸ್ಥೆಗಳಿಗೆ. ಆದರೆ ರೈತರು ರಸ್ತೆಗೆ ಬಂದು ನರೇಂದ್ರ ಮೋದಿಯವರಿಗೆ ತಮ್ಮ ಶಕ್ತಿ ತೋರಿಸಿದರು. ಇದನ್ನು ಕಂಡ ನರೇಂದ್ರ ಮೋದಿ ಅವರು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕಾಯಿತು” ಎಂದು ಹೇಳಿದರು.

ಇದನ್ನೂ ಓದಿ: ಸುಪ್ರೀಂ ನಿವೃತ್ತ ನ್ಯಾಯಾಧೀಶ ಶ್ರೀಕೃಷ್ಣ ವಿರುದ್ಧ ಕಾನೂನು ಸಚಿವ ರಿಜಿಜು ಕಿಡಿ

ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ರಾಹುಲ್, “ಒಂದು ಕಡೆ ನಿರುದ್ಯೋಗ, ಮತ್ತೊಂದೆಡೆ ಬೆಲೆ ಏರಿಕೆ. ಕಾಂಗ್ರೆಸ್ ಎಪ್ಪತ್ತು ವರ್ಷಗಳಲ್ಲಿ ಏನು ಮಾಡಿದೆ ಎಂದು ನರೇಂದ್ರ ಮೋದಿಜಿ ಕೇಳುತ್ತಾರೆ. ನಾನು ಹೇಳುತ್ತೇನೆ: ಎಪ್ಪತ್ತು ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವು ದೇಶಕ್ಕೆ ಈ ರೀತಿಯ ಬೆಲೆ ಏರಿಕೆ ತೋರಿಸಿಲ್ಲ. ಪ್ರತಿಪಕ್ಷಗಳು ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ಬಯಸಿದಾಗ, ನರೇಂದ್ರ ಮೋದಿಯವರ ಸರ್ಕಾರ ಅದಕ್ಕೆ ಅವಕಾಶ ನೀಡುವುದಿಲ್ಲ, ಅದು ರೈತರ ಸಮಸ್ಯೆಯಾಗಿರಲಿ ಅಥವಾ ಚೀನಾ ದಾಳಿಯಾಗಿರಲಿ…,” ಎಂದು ಹೇಳಿದರು.

ಕಾಂಗ್ರೆಸ್‌ನ ಸಿದ್ಧಾಂತವು ದೇಶವನ್ನು ಪ್ರಗತಿಯ ಪಥದತ್ತ ಕೊಂಡೊಯ್ಯುತ್ತದೆ ಎಂದು ರಾಹುಲ್ ಹೇಳಿದರು.

“ಬೆಲೆ ಏರಿಕೆ ಅಥವಾ ದ್ವೇಷ ದೇಶವನ್ನು ಬಲಪಡಿಸುತ್ತದೆಯೇ ಎಂದು ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ. ನರೇಂದ್ರ ಮೋದಿ ಮತ್ತು ಬಿಜೆಪಿ ದೇಶವನ್ನು ದುರ್ಬಲಗೊಳಿಸುತ್ತಿದೆ. ಕಾಂಗ್ರೆಸ್ ಪಕ್ಷವು ದೇಶವನ್ನು ಒಂದುಗೂಡಿಸುತ್ತದೆ, ನಾವು ದ್ವೇಷವನ್ನು ಅಳಿಸುತ್ತೇವೆ ಮತ್ತು ದ್ವೇಷ ಅಳಿದಾಗ ಮಾತ್ರ ದೇಶವು ವೇಗವಾಗಿ ಚಲಿಸುತ್ತದೆ. ನೀವು ದೇಶವನ್ನು ಉಳಿಸಬಹುದು, ಕಾಂಗ್ರೆಸ್‌ ನ ಸಿದ್ಧಾಂತವು ದೇಶವನ್ನು ಪ್ರಗತಿಯ ಪಥದಲ್ಲಿ ತರುತ್ತದೆ ಎಂದು ನಾನು ಕಾಂಗ್ರೆಸ್ ಕಾರ್ಯಕರ್ತರಿಗೆ ಹೇಳಲು ಬಯಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.