ರೈತರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಿ

ಬೆಳಗಾವಿ ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆ ; ಪರಿಹಾರ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡಿ: ಪಾಟೀಲ

Team Udayavani, Sep 4, 2022, 5:00 PM IST

20

ಬೆಳಗಾವಿ: ಇತ್ತೀಚಿನ ಅತಿವೃಷ್ಟಿಯಿಂದ ಬೆಳೆಹಾನಿ ಆಗಿರುವ ಕುರಿತು ಜಂಟಿ ಸಮೀಕ್ಷೆ ಪೂರ್ಣಗೊಂಡ ತಕ್ಷಣವೇ ಪರಿಹಾರ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡಿ ರೈತರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸುವರ್ಣ ವಿಧಾನಸೌಧದಲ್ಲಿ ಶನಿವಾರ ನಡೆದ ಕೃಷಿ ಇಲಾಖೆಯ ಬೆಳಗಾವಿ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಿಬ್ಬಂದಿ ಕೊರತೆ ಮೊದಲಾದ ಕಾರಣ ಹೇಳಿ ಬೆಳೆಹಾನಿ ಪರಿಹಾರ ನೀಡುವ ಪ್ರಕ್ರಿಯೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಈಗಾಗಲೇ ನಿರ್ದೇಶನ ನೀಡಿರುವಂತೆ ಎಲ್ಲ ಜಿಲ್ಲೆಗಳಲ್ಲಿ ಹೆಸರು, ಉದ್ದು ಖರೀದಿ ಕೇಂದ್ರಗಳನ್ನು ಆರಂಭಿಸಿ ರೈತರ ನೋಂದಣಿ ಜೊತೆ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದರು.

ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಿವಯೋಗಿ ಕಳಸದ ಮಾತನಾಡಿ, ಅನೇಕ ಜಿಲ್ಲೆಗಳಲ್ಲಿನ ಬೆಳೆಹಾನಿ ವಿವರವನ್ನು ಈಗಾಗಲೇ ಪೋರ್ಟಲ್‌ ನಲ್ಲಿ ಅಪ್‌ ಲೋಡ್‌ ಮಾಡಲಾಗಿದ್ದು ಪರಿಹಾರ ಅನುಮೋದನೆ ನೀಡುವ ಪ್ರಕ್ರಿಯೆಗೆ ಶೀಘ್ರದಲ್ಲೇ ಮುಖ್ಯಮಂತ್ರಿಗಳಿಂದ ಚಾಲನೆ ಕೊಡಿಸಲಾಗುವುದು ಎಂದು ಹೇಳಿದರು.

ಮುಖ್ಯವಾಗಿ ಬೆಳೆಹಾನಿ ಜಂಟಿ ಸಮೀಕ್ಷೆಗೆ ಆದ್ಯತೆ ನೀಡಬೇಕು. ನಾಲೈ Rದು ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸಿ ಆದಷ್ಟು ಬೇಗ ರೈತರಿಗೆ ಪರಿಹಾರ ತಲುಪಿಸಬೇಕು. ಎಸ್‌ ಡಿಆರ್‌ಎಫ್‌ ಪ್ರಕಾರ ಪರಿಹಾರ ದ್ವಿಗುಣಗೊಳಿಸಲಾಗಿದೆ. ಅದರ ಪ್ರಕಾರವೇ ಡಾಟಾ ಅಪ್‌ ಲೋಡ್‌ ಮಾಡಬೇಕು. ಕಂದಾಯ, ಕೃಷಿ, ತೋಟಗಾರಿಕೆ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಶಿವಯೋಗಿ ಕಳಸದ ಹೇಳಿದರು.

ಕೃಷಿ ಇಲಾಖೆಯ ನಿರ್ದೇಶಕರಾದ ನಂದಿನಿಕುಮಾರಿ ಮಾತನಾಡಿ, ರಾಜ್ಯಾದ್ಯಂತ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ನಿಗದಿತ ಕೃಷಿ ಕ್ಷೇತ್ರದಲ್ಲಿ ಶೇ.90ರಷ್ಟು ಬಿತ್ತನೆಯಾಗಿದೆ. ಆದರೆ ಇತ್ತೀಚಿನ ಅತಿವೃಷ್ಟಿಯಿಂದ ರಾಜ್ಯದಲ್ಲಿ ಒಟ್ಟಾರೆ 5 ಲಕ್ಷಕ್ಕೂ ಅಧಿಕ ಹೆಕ್ಟೇರ್‌ ಬೆಳೆಹಾನಿಯಾಗಿದ್ದು ಬೆಳಗಾವಿ ವಿಭಾಗದ ಜಿಲ್ಲೆಗಳಲ್ಲಿ ಜಂಟಿ ಸಮೀಕ್ಷೆ ಬಹುತೇಕ ಪೂರ್ಣಗೊಂಡಿದೆ ಎಂದು ವಿವರಿಸಿದರು.

ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಜಂಟಿ ಸಮೀಕ್ಷೆ ಪೂರ್ಣಗೊಂಡಿದ್ದು, ಪರಿಹಾರ ಪೋರ್ಟಲ್‌ ನಲ್ಲಿ ಈಗಾಗಲೇ ಮಾಹಿತಿಯನ್ನು ಅಪ್‌ ಲೋಡ್‌ ಮಾಡಲಾಗಿದೆ. ಗ್ರಾಮ ಲೆಕ್ಕಾಧಿಕಾರಿಗಳ ಜೊತೆಗೆ ಸಹಾಯಕ ಕೃಷಿ ಅಧಿಕಾರಿಗಳಿಗೂ ಲಾಗಿನ್‌ ಐಡಿ ಒದಗಿಸಿದರೆ ಪರಿಹಾರ ಪ್ರಕ್ರಿಯೆ ಚುರುಕುಗೊಳಿಸಬಹುದು ಎಂದು ಸಲಹೆ ನೀಡಿದರು.

ಬೆಳಗಾವಿ ಜಿಪಂ ಸಿಇಒ ದರ್ಶನ್‌. ಎಚ್‌.ವಿ ಅವರು ಮಾತನಾಡಿ ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಸಮೀಕ್ಷೆ ಮತ್ತು ಪರಿಹಾರ ಪ್ರಕ್ರಿಯೆ ವಿಳಂಬಗೊಳ್ಳುತ್ತಿದೆ. ಆದ್ದರಿಂದ ತಳಹಂತದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ನೇಮಕಾತಿ ಮಾಡಬೇಕು ಎಂದು ಮನವಿ ಮಾಡಿದರು.

ಬೆಳೆವಿಮೆ ಪರಿಹಾರ: ಇಲಾಖೆ ಅಭಿವೃದ್ಧಿ ಪಡಿಸಿರುವ ಆ್ಯಪ್‌ ಮೂಲಕ ರೈತರೇ ಸ್ವತಃ ಬೆಳೆ ಸಮೀಕ್ಷೆ ಮಾಡಲು ಪ್ರೋತ್ಸಾಹ ನೀಡಬೇಕು. ಇದಕ್ಕಾಗಿ ಸೂಕ್ತ ಪ್ರಚಾರ ಕಾರ್ಯ ಕೈಗೊಳ್ಳಬೇಕು ಎಂದು ಹೇಳಿದ ಸಚಿವರು ಬೆಳೆವಿಮೆ ಪರಿಹಾರ ಕ್ಲೇಮು ಪ್ರಕರಣಗಳನ್ನು ಕೂಡಲೇ ಇತ್ಯರ್ಥಪಡಿಸಬೇಕು. ಇದಕ್ಕಾಗಿ ವಿಮೆ ಕಂಪನಿಯ ಜೊತೆ ನಿರಂತರ ಸಂಪರ್ಕ ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಿದರು.

ಪಿಎಂ-ಕಿಸಾನ್‌ ಯೋಜನೆಯಡಿ ರೈತರ ಇ-ಕೆವೈಸಿ ಜೋಡಣೆಗೆ ಎಲ್ಲ ಅಧಿಕಾರಿಗಳು ಪ್ರಯತ್ನಿಸಬೇಕು. ಇದಕ್ಕೆ ಇದೇ ತಿಂಗಳ 7 ಕೊನೆಯ ದಿನವಾಗಿರುವುದರಿಂದ ಬಾಕಿ ಉಳಿದ ರೈತರ ಇ-ಕೆವೈಸಿ ಮಾಡಬೇಕು. ಇ-ಕೆವೈಸಿ ಜೋಡಣೆಯಲ್ಲಿ ಬೆಳಗಾವಿ ಜಿಲ್ಲೆ ಅತ್ಯುತ್ತಮ ಸಾಧನೆ ಮಾಡಿದೆ. ಇದನ್ನೇ ಮಾದರಿಯಾಗಿಟ್ಟುಕೊಂಡು ಉಳಿದ ಜಿಲ್ಲೆಯವರು ರೈತರ ಕೆವೈಸಿ ಮಾಡಿಸಬೇಕು. ಆದಾಗ್ಯೂ ನಿರೀಕ್ಷಿತ ಪ್ರಗತಿ ಸಾಧಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಿ.ಸಿ.ಪಾಟೀಲ ಎಚ್ಚರಿಕೆ ನೀಡಿದರು.

ರಸಗೊಬ್ಬರ ದಾಸ್ತಾನು ಇರುವುದರಿಂದ ನಿಗದಿತ ಅವಧಿಯಲ್ಲಿ ಪಿಒಎಸ್‌ ಮೂಲಕ ರೈತರಿಗೆ ವಿತರಣೆ ಮಾಡಬೇಕು. ರಸಗೊಬ್ಬರ ಗುಣ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆಯಾ ಜಿಲ್ಲೆಗಳಿಗೆ ನೀಡಲಾಗಿರುವ ವಾರ್ಷಿಕ ಗುರಿಯ ಪ್ರಕಾರ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳಿಸಬೇಕು. ಒಂದು ವೇಳೆ ಕಳಪೆ ಮಾದರಿ ಕಂಡುಬಂದಲ್ಲಿ ನಿಯಮಾವಳಿ ಪ್ರಕಾರ ಪ್ರಕರಣ ದಾಖಲಿಸಬೇಕು ಎಂದ ಸಚಿವರು ರಸಗೊಬ್ಬರ ಗುಣ ನಿಯಂತ್ರಣ, ಬೆಳೆಹಾನಿ ಸಮೀಕ್ಷೆ, ಪರಿಹಾರ ವಿತರಣೆ ಸೇರಿದಂತೆ ಬಹುತೇಕ ಕೆಲಸಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದ ಜಿಲ್ಲೆಯ ಅಧಿಕಾರಿಗಳಿಗೆ ನೋಟಿಸ್‌ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರೈತ ವಿದ್ಯಾನಿಧಿ ಯೋಜನೆ: ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯ ಕುರಿತು ಅನೇಕ ಮಕ್ಕಳಿಗೆ ಮಾಹಿತಿ ಇರುವುದಿಲ್ಲ. ಹೀಗಾಗಿ ಶಿಕ್ಷಣ ಇಲಾಖೆ ಉಪನಿರ್ದೇಶಕರ ಮೂಲಕ ಎಸ್‌.ಎಸ್‌. ಪೋಟಲ್‌ ನಲ್ಲಿ ಮಕ್ಕಳು ನೋಂದಣಿ ಮಾಡಿಕೊಳ್ಳಲು ಸೂಚನೆ ನೀಡುವಂತೆ ಅಧಿಕಾರಿಗಳು ಕೆಲಸ ಮಾಡಬೇಕಿದೆ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತರಾದ ಎಂ.ವಿ ವೆಂಕಟೇಶ, ನಿರ್ದೇಶಕರಾದ ಬಿ.ವೈ. ಶ್ರೀನಿವಾಸ, ಕೃಷಿ ಇಲಾಖೆಯ ಅಪರ ನಿರ್ದೇಶಕರಾದ ಎಂ.ಎನ್‌. ದಿವಾಕರ, ಡಾ| ವಿ.ಜಿ. ಪಾಟೀಲ, ಟಿ. ಜಿ ಬಾಲರೆಡ್ಡಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.