ದೆಹಲಿಗೆ ಆಗಮಿಸಿದ ಬಾಂಗ್ಲಾದೇಶ್ ಪ್ರಧಾನಿ ಶೇಕ್ ಹಸೀನಾ; 4 ದಿನ ಪ್ರವಾಸ, 7 ಒಪ್ಪಂದಕ್ಕೆ ಸಹಿ
Team Udayavani, Sep 5, 2022, 3:16 PM IST
ನವದೆಹಲಿ:ಬಾಂಗ್ಲಾದೇಶ್ ಪ್ರಧಾನಮಂತ್ರಿ ಶೇಕ್ ಹಸೀನಾ ಸೋಮವಾರ (ಸೆ.05)ದಿಂದ ನಾಲ್ಕು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಇಂದು ನವದೆಹಲಿಗೆ ಬಂದಿಳಿದಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ಹಿರಿಯ ನಾಯಕ ಬ್ರಿಜೇಶ್ ಕಾಳಪ್ಪ ಆಮ್ ಆದ್ಮಿ ಪಾರ್ಟಿ ಸೇರ್ಪಡೆ
ಶೇಕ್ ಹಸೀನಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಸೇರಿದಂತೆ ದೇಶದ ಪ್ರಮುಖ ನಾಯಕರನ್ನು ಭೇಟಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಉಭಯ ದೇಶಗಳು ರೈಲ್ವೆ, ವಿಜ್ಞಾನ, ತಂತ್ರಜ್ಞಾನ ಸೇರಿದಂತೆ ಏಳು ಒಪ್ಪಂದಗಳಿಗೆ ಸಹಿ ಹಾಕಲಿವೆ ಎಂದು ವರದಿ ತಿಳಿಸಿದೆ.
2019ರ ಅಕ್ಟೋಬರ್ ನಲ್ಲಿ ಬಾಂಗ್ಲಾದೇಶ ಪ್ರಧಾನಿ ಹಸೀನಾ ಭಾರತಕ್ಕೆ ಭೇಟಿ ನೀಡಿದ್ದರು. ಗುರುವಾರ ಹಸೀನಾ ಅವರು ರಾಜಸ್ಥಾನದ ಅಜ್ಮೀರ್ ನಲ್ಲಿರುವ ಸೂಫಿ ಸಂತ ಮೊಯಿನುದ್ದೀನ್ ಚಿಸ್ತಿ ದರ್ಗಾಕ್ಕೆ ಭೇಟಿ ನೀಡಲಿದ್ದಾರೆ.
ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ ಅವರನ್ನು ರೈಲ್ವೆ ಮತ್ತು ಜವಳಿ ಖಾತೆಯ ರಾಜ್ಯ ಸಚಿವೆ ದರ್ಶನಾ ಜಾರ್ದೋಶ್ ಅವರನ್ನು ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಿ ಸ್ವಾಗತಿಸಿದ್ದರು. ಈ ಭೇಟಿಯಿಂದಾಗ ಉಭಯ ದೇಶಗಳ ನಡುವಿನ ಸಂಬಂಧ ಇನ್ನಷ್ಟು ಗಟ್ಟಿಗೊಳ್ಳಲಿದೆ ಎಂದು ಹಸೀನಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.