ಸಂಪೂರ್ಣ ಸಾಕ್ಷರತಾ ಜಿಲ್ಲೆಗಾಗಿ ಸಂಕಲ್ಪ
ಹದಿನೈದು ದಿನಗಳೊಳಗೆ ಅನಕ್ಷರಸ್ಥರ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಲು ಜಿಪಂ ಸಿಇಒ ಸೂಚನೆ
Team Udayavani, Sep 5, 2022, 4:53 PM IST
ಧಾರವಾಡ: ಸಂಪೂರ್ಣ ಸಾಕ್ಷರತಾ ಜಿಲ್ಲೆಗಾಗಿ ಸಂಕಲ್ಪ ಮಾಡೋಣ. ಇದಕ್ಕೆ ಅಗತ್ಯವಿರುವ ಎಲ್ಲ ಪೂರ್ವಸಿದ್ಧತೆಗಳನ್ನು ಕೈಗೊಂಡು, 15 ದಿನಗಳೊಳಗಾಗಿ ಅನಕ್ಷರಸ್ಥರ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಜಿಪಂ ಸಿಇಒ ಡಾ|ಸುರೇಶ ಇಟ್ನಾಳ ಹೇಳಿದರು.
ನಗರದ ಜಿಪಂ ಸಭಾಭವನದಲ್ಲಿ ಲೋಕಶಿಕ್ಷಣ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಹಯೋಗದಲ್ಲಿ 2022-23ನೇ ಸಾಲಿನ ವಿನೂತನ ಸಾಕ್ಷರತಾ ಕಾರ್ಯಕ್ರಮ ಅನುಷ್ಠಾನ ಪೂರ್ವ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಪಿಡಿಒಗಳ ಸಭೆಯಲ್ಲಿ ಅವರು ಮಾತನಾಡಿದರು.
ಅ. 2ರಂದು ಗಾಂಧಿ ಜಯಂತಿ ದಿನದಂದೇ ಮಹಾತ್ಮಾ ಗಾಂಧೀಜಿಯವರ ಸಂಪೂರ್ಣ ಸಾಕ್ಷರತೆಯ ದೂರದೃಷ್ಟಿಯ ಅಪೇಕ್ಷೆಯಂತೆ ಪ್ರತಿ ಗ್ರಾಮಗಳಲ್ಲಿ ಕಲಿಕಾ ಕೇಂದ್ರಗಳನ್ನು ಪ್ರಾರಂಭಿಸಬೇಕು ಎಂದು ಪಿಡಿಒಗಳಿಗೆ ಸೂಚಿಸಿದರು.
2022-23ನೇ ಸಾಲಿಗೆ ಪಂಚಾಯತಿ ಅನುದಾನದಲ್ಲಿ ಒಟ್ಟು 10,360 ಅನಕ್ಷರಸ್ಥರನ್ನು ಸಾಕ್ಷರಸ್ಥರನ್ನಾಗಿ ಮಾಡಲು 10 ಪಂಚಾಯತಿಗಳನ್ನು ಗುರುತಿಸಲಾಗಿದೆ. ಧಾರವಾಡ ಜಿಲ್ಲೆಗೆ ಎರಡು ವರ್ಷದ ಅವಧಿಯಲ್ಲಿ 38 ಗ್ರಾಪಂಗಳ ವ್ಯಾಪ್ತಿಯ 28,900 ಅನಕ್ಷರಸ್ಥರನ್ನು ಸಾಕ್ಷರರನ್ನಾಗಿ ಮಾಡುವ ಗುರಿ ನೀಡಿದ್ದಾರೆ.
ಜಿಲ್ಲೆಗೆ ಈ ವರ್ಷ 20,070 ಅನಕ್ಷರಸ್ಥರನ್ನು ಸಾಕ್ಷರರನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ಪಪಂ, ಪುರಸಭೆ ಹಾಗೂ ಮಹಾನಗರ ಪಾಲಿಕೆಗಳ ಎಲ್ಲಾ ಅನಕ್ಷರಸ್ಥ ಪೌರಕಾರ್ಮಿಕರು, ಮಾಜಿ ದೇವದಾಸಿಯರು, ತೃತೀಯ ಲಿಂಗಿಗಳು, ಕಟ್ಟಡ ಕೂಲಿ ಕಾರ್ಮಿಕರು ಹಾಗೂ ಕೊಳಚೆ ಪ್ರದೇಶದ ಅನಕ್ಷರಸ್ಥರಿಗೆ, ವಿಶೇಷವಾಗಿ ಪರಿಶಿಷ್ಟ ಜಾತಿ-ಪಂಗಡ, ಅಲ್ಪಸಂಖ್ಯಾತರನ್ನು ಸಾಕ್ಷರನ್ನಾಗಿಸಲು ಆದ್ಯತೆ ನೀಡಬೇಕು ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಿಡಿಒಗಳು, ಗ್ರಾಮದ ಶಾಲೆಗಳ ಮುಖ್ಯಾಧ್ಯಾಪಕರು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರನ್ನು ಒಳಗೊಂಡ ತಂಡಗಳನ್ನು ರಚಿಸಿ ಅನಕ್ಷರಸ್ಥರ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಬೇಕು. ತಾಪಂ ಇಒಗಳು, ಕ್ಷೇತ್ರ ಶಿಕ್ಷಣಾ ಧಿಕಾರಿಗಳು ಜಂಟಿಯಾಗಿ ತಾಲೂಕಿನಲ್ಲಿ ಸಭೆ ಮಾಡಿ ಸಮೀಕ್ಷೆ ಕಾರ್ಯ ಪ್ರಾರಂಭಿಸಲು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಮಾತನಾಡಿ, ಗ್ರಾಪಂಗಳ ಮಾದರಿಯಲ್ಲಿ ನಗರ, ಪಪಂ ಹಾಗೂ ಮಹಾನಗರ ಪಾಲಿಕೆಯಲ್ಲಿ ನವ ಭಾರತ ಸಾಕ್ಷರತಾ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಮುಖ್ಯ ಯೋಜನಾಧಿಕಾರಿಗಳಾದ ದೀಪಕ ಮಡಿವಾಳರ, ಡಯಟ್ ಪ್ರಾಚಾರ್ಯರಾದ ಎನ್. ಕೆ. ಸಾಹುಕಾರ, ಉಪಯೋಜನಾಧಿಕಾರಿ ಜಿ.ಎನ್. ಮಠಪತಿ, ಜಿಲ್ಲಾ ಸಾಕ್ಷರತಾ ನೋಡಲ್ ಅಧಿಕಾರಿ ಪಿ.ಕೆ.ಚಿಕ್ಕಮಠ ಇನ್ನಿತರರಿದ್ದರು.
ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎ.ಎ.ಖಾಜಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಡಾ|ರಾಮು ಮೂಲಗಿ ಸಾಕ್ಷರ ಗೀತೆ ಹಾಡಿದರು. ಕಾರ್ಯಕ್ರಮ ಸಹಾಯಕ ಎಸ್. ಆರ್.ರಾಚಣ್ಣವರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.