ಬೋಟಿನಿಂದ ಮೀನು ಇಳಿಸುತ್ತಿದ್ದಾಗ ನೀರಿಗೆ ಬಿದ್ದು ಮೀನುಗಾರ ಸಾವು
Team Udayavani, Sep 5, 2022, 11:51 PM IST
ಮಲ್ಪೆ: ಮಲ್ಪೆ ಬಂದರಿನಲ್ಲಿ ನಿಲ್ಲಿಸಿದ್ದ ಬೋಟಿನಿಂದ ಮೀನು ಖಾಲಿ ಮಾಡುತ್ತಿರುವಾಗ ಮೀನುಗಾರರೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸೆ. 4ರ ರಾತ್ರಿ 10.45ರ ವೇಳೆ ಸಂಭವಿಸಿದೆ.
ಮಲ್ಪೆ ತೊಟ್ಟಂನ ಪುರಂದರ ಮೆಂಡನ್ (42) ಮೃತಪಟ್ಟವರು. ಹನುಮನಿಧಿ ಕನ್ನಿ ಪಾರ್ಟಿಯಲ್ಲಿ ದುಡಿಯುತ್ತಿದ್ದ ಅವರು ಬೋಟಿನಿಂದ ಮೀನು ಖಾಲಿ ಮಾಡುವಾಗ ಜಾರಿ ಬಿದ್ದರೆನ್ನಲಾಗಿದೆ. ಮಾಹಿತಿ ತಿಳಿದು ತತ್ಕ್ಷಣ ಸ್ಥಳಕ್ಕೆ ಆಗಮಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ಅವರು ನೀರಿಗೆ ಹಾರಿ ಪುರಂದರ ಅವರನ್ನು ಮೇಲಕ್ಕೆತ್ತಿದ್ದಾರೆ. ತೀವ್ರ ಅಸ್ವಸ್ಥಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿದ್ದಾರೆ. ಅವರು ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.
ಮಲ್ಪೆ ಬಂದರಿನಲ್ಲಿ ಹಲವಾರು ವರ್ಷಗಳಿಂದ ಮೀನುಗಾರಿಕೆ ವೃತ್ತಿ ಯನ್ನು ಮಾಡಿಕೊಂಡಿದ್ದ ಅವರು ಮಲ್ಪೆ ಕನ್ನಿ ಮೀನುಗಾರರ ಸಂಘದ ಸದಸ್ಯರಾಗಿದ್ದರು. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ
Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್ಬ್ರೆಷ್ ಹೊರತೆಗೆದ ವೈದ್ಯರು!
Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್ ಕಾಳಿಂಗ’:ಅಧಿಕೃತವಾಗಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.