ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಶಿಕ್ಷೆಯ ಪ್ರಮಾಣ ಇಂದು ಪ್ರಕಟ
Team Udayavani, Sep 6, 2022, 7:55 AM IST
ಉಡುಪಿ: ಮೂರು ವರ್ಷಗಳ ಹಿಂದೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಸಗ್ರಿ ರೈಲ್ವೆ ಹಳಿಯ ಸಮೀಪದ ಹಾಡಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣದ ಆರೋಪಿಯನ್ನು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯವು ದೋಷಿ ಎಂದು ಸೋಮವಾರ ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಸೆ. 6ರಂದು ಪ್ರಕಟಿಸುವುದಾಗಿ ಆದೇಶ ನೀಡಿದೆ.
ಮೂಲತಃ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹಾಗೂ ಪ್ರಸ್ತುತ ಕಾಪು ಮಲ್ಲಾರು ನಿವಾಸಿ ಹನುಮಂತ ಬಸಪ್ಪಕಂಬಳಿ (39) ಆರೋಪಿ.
ಉಡುಪಿಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 17 ವರ್ಷ ಪ್ರಾಯದ ಬಾಲಕಿ 2019ರ ಮಾ. 9ರಂದು ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಹನುಮಂತ ಅಪಹರಿಸಿ, ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿದ್ದ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆಗಿನ ಮಣಿಪಾಲ ಪೊಲೀಸ್ ನಿರೀಕ್ಷಕ ಸುನಿಲ್ ಕುಮಾರ್ ತನಿಖೆ ನಡೆಸಿದ್ದರು. ಪೊಲೀಸರು ಆರೋಪಿಯನ್ನು ಹಿರಿಯಡ್ಕ ಜೈಲಿಗೆ ಕರೆದುಕೊಂಡು ಹೋಗುವಾಗ ಜೀಪಿನಿಂದ ಹಾರಿ ತಪ್ಪಿಸಿಕೊಂಡಿದ್ದ. ಬಳಿಕ ಆರೋಪಿಯನ್ನು ಬಂಧಿಸಿ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು ಆರೋಪಿಯನ್ನು ದೋಷಿ ಎಂದು ಆದೇಶಿಸಿದರು. ಶಿಕ್ಷೆಯ ಪ್ರಮಾಣವನ್ನು ಸೆ. 6ರಂದು ಪ್ರಕಟಿಸುವುದಾಗಿ ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಶನ್ ಪರ ಉಡುಪಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.