ಎಫ್ಐಎಚ್ ವರ್ಷದ ಶ್ರೇಷ್ಠ ಆಟಗಾರ ಪ್ರಶಸ್ತಿ: ಹರ್ಮನ್‌ಪ್ರೀತ್ ಹೆಸರು ಶಿಫಾರಸು
Team Udayavani, Sep 6, 2022, 11:16 PM IST
ಲಾಸನ್ನೆ: ಭಾರತದ ಸ್ಟಾರ್ ಡ್ರ್ಯಾಗ್ ಫ್ಲಿಕರ್ ಹರ್ಮನ್‌ಪ್ರೀತ್ ಸಿಂಗ್ ಸಹಿತ ಐವರ ಹೆಸರನ್ನು ಎಫ್ಐಎಚ್ ವರ್ಷದ ಶ್ರೇಷ್ಠ ಆಟಗಾರ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.
ಇದೇ ವೇಳೆ ಎಫ್ಐಎಚ್ ಹಾಕಿ ತಾರೆ ಪ್ರಶಸ್ತಿಗಳಲ್ಲಿ ಶ್ರೇಷ್ಠ ಪುರುಷ ಮತ್ತು ಮಹಿಳಾ ಗೋಲ್‌ಕೀಪರ್ ಪ್ರಶಸ್ತಿಗೆ ಭಾರತದ ಪಿ.ಆರ್. ಶ್ರೀಜೇಶ್ ಮತ್ತು ಸವಿತಾ ಪೂನಿಯಾ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.
ಹರ್ಮನ್‌ಪ್ರೀತ್ ಅವರಲ್ಲದೇ ಬೆಲ್ಜಿಯಂನ ಆರ್ಥರ್ ಡತಿ , ಟಾಮ್ ಬೂನ್, ಜರ್ಮನಿಯ ನಿಕ್ಲಾಸ್ ವೆಲ್ಲೆನ್ ಮತ್ತು ನೆದೆರ್ಲೆಂಡ್‌ನ ಥಿಯೆರಿ ಬ್ರಿಂಕ್ಮನ್ ಅವರ ಹೆಸರನ್ನು ಶ್ರೇಷ್ಠ ಪುರುಷ ಆಟಗಾರ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. ಆದರೆ ಶ್ರೇಷ್ಠ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ಭಾರತದ ಯಾವುದೇ ಆಟಗಾರ್ತಿಯ ಹೆಸರನ್ನು ಶಿಫಾರಸು ಮಾಡಲಾಗಿಲ್ಲ.
ಹರ್ಮನ್‌ಪ್ರೀತ್ ಕಳೆದ ವರ್ಷ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದಿದ್ದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ನೀಡಿದ ಮಹೋನ್ನತ ಸಾಧನೆ ಹಿನ್ನೆಲೆಯಲ್ಲಿ ಭಾರತೀಯ ಆಟಗಾರರು ಮತ್ತು ಕೋಚ್ ಪ್ರಶಸ್ತಿ ಜಯಿಸಿದ್ದರು. ಪುರುಷರ ತಂಡದ ಕೋಚ್ ಗ್ರಹಾಂ ರೀಡ್, ಶ್ರೀಜೇಶ್ ಮತ್ತು ಸವಿತಾ ಪ್ರಶಸ್ತಿ ಗೆದ್ದವರಲ್ಲಿ ಸೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syed Mushtaq Ali Trophy ಸಿಕ್ಕಿಂ ವಿರುದ್ಧ ಕರ್ನಾಟಕಕ್ಕೆ ಸುಲಭ ಜಯ
Syed Modi International: ಫೇವರಿಟ್ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ
Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ
ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.