ಟ್ಯಾಂಕರ್ ಢಿಕ್ಕಿ: ನರ್ಸ್ ಸ್ಥಳದಲ್ಲೇ ಸಾವು
Team Udayavani, Sep 7, 2022, 2:31 PM IST
ಬೆಂಗಳೂರು: ವಾಟರ್ ಟ್ಯಾಂಕರ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಕಿಮ್ಸ್ ಆಸ್ಪತ್ರೆಯ ನರ್ಸ್ ಮೃತಪಟ್ಟಿರುವ ಘಟನೆ ರಾಜಾಜಿನಗರ ಸಂಚಾರ ಠಾಣೆ ವ್ಯಾಪ್ತಿಯ ಲಗ್ಗೆರೆಯಲ್ಲಿ ನಡೆದಿದೆ.
ಕಿಮ್ಸ್ ಆಸ್ಪತ್ರೆಯಲ್ಲಿ ನರ್ಸ್ ಆಗಿರುವ, ಲಗ್ಗೆರೆ ನಿವಾಸಿ ಆಶಾ(35) ಮಂಗಳವಾರ ಬೆಳಗ್ಗೆ 10.40 ರ ಸುಮಾರಿಗೆ ಲಗ್ಗೆರೆ ಬಸ್ ನಿಲ್ದಾಣದ ಕಡೆಯಿಂದ ತಮ್ಮ ಮನೆಯ ಕಡೆ ಹೋಗುವಾಗ ವೇಗವಾಗಿ ಬಂದ ವಾಟರ್ ಟ್ಯಾಂಕರ್ ವಾಹನ ಹಿಂಬದಿಯಿಂದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಕೆಳಗೆ ಬಿದ್ದ ಆಶಾರ ಮೇಲೆ ಟ್ಯಾಂಕರ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆರೋಪಿ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ವಾಹನ ಮಾಲೀಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.