ಕ್ರೀಡಾಪಟುಗಳ ಪ್ರತಿಭೆಗೆ ಪ್ರೋತ್ಸಾಹ
Team Udayavani, Sep 7, 2022, 7:18 PM IST
ಔರಾದ: ಶಾಲಾ ಹಂತದಲ್ಲಿಯೇ ಕ್ರೀಡಾಪಟುಗಳ ಪ್ರತಿಭೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಗತ್ಯ ಸಹಾಯ ಸಹಕಾರ ನೀಡುವುದು ಸೂಕ್ತವಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರನ್ನು ಗುರುತಿಸುವ ಕೆಲಸ ನಡೆಯಬೇಕಿದೆ. ಆ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ದೊರೆತಲ್ಲಿ ಉನ್ನತ ಸಾಧನೆ ಮಾಡಬಹುದು. ತಾಲೂಕು ಕೇಂದ್ರ ಔರಾದ್ ಪಟ್ಟಣದಲ್ಲಿ ಶಾಲಾ ಮಕ್ಕಳು ಸೇರಿದಂತೆ ಎಲ್ಲ ರೀತಿಯ ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕ್ರೀಡಾಂಗಣ ಅಭಿವೃದ್ಧಿಗೊಳಿಸಲಾಗುತ್ತಿದೆ. ಗಡಿ ಭಾಗದಲ್ಲಿರುವ ಕ್ರೀಡಾ ಪ್ರತಿಭೆಗಳ ಸಾಧನೆಗೆ ಕ್ರೀಡಾಂಗಣ ವೇದಿಕೆಯಾಗಬೇಕೆಂಬುದು ನನ್ನ ಆಶಯವಾಗಿದ್ದು, ಕ್ರೀಡಾಂಗಣ ಅಭಿವೃದ್ಧಿ ಮತ್ತು ಕ್ರೀಡಾಪಟುಗಳ ಸಹಕಾರಕ್ಕೆ ಸದಾ ಬದ್ಧ ಎಂದರು.
ತಹಶೀಲ್ದಾರ್ ಅರುಣಕುಮಾರ್ ಕುಲಕರ್ಣಿ, ತಾಪಂ ಇಒ ಬೀರೇಂದ್ರಸಿಂಗ್ ಠಾಕೂರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್. ನಗನೂರ್, ದೈಹಿಕ ಶಿಕ್ಷಣಾಧಿಕಾರಿ ಶಿವಾಜಿ ಬೆಂಜರವಾಡೆ, ವಸಂತ ವಕೀಲ, ಧೋಂಡಿಬಾ ನರೋಟೆ, ಯಶವಂತರಾವ ಡೊಂಬಾಳೆ ಸೇರಿದಂತೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.