ಬಗರ್‌ಹುಕುಂ ಮಂಜೂರಾತಿ ವಿರುದ್ಧ ದೂರು; ಪರಿಶೀಲನೆ
Team Udayavani, Sep 7, 2022, 7:34 PM IST
ಸಾಗರ: ಇತಿಹಾಸ ಪ್ರಸಿದ್ಧ ಸಿಗಂದೂರು ದೇವಾಲಯದ ಮುಖ ಮಂಟಪ ಹೊಂದಿರುವ ಕಳಸವಳ್ಳಿ ಗ್ರಾಮದ ದಟ್ಟ ಅರಣ್ಯ ಭೂಮಿಯನ್ನು ಉಳುಮೆ ಇಲ್ಲದೆ ಬಗರ್‌ಹುಕುಂ ಮಂಜೂರು ಮಾಡಿರುವ ಬಗ್ಗೆ ಗ್ರಾಮಸ್ಥರು ಜಿಲ್ಲಾಧಿಕಾರಿ ದೂರು ನೀಡಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಬುಧವಾರ ಸ್ಥಳ ಪರಿಶೀಲನೆ ನಡೆಸಿದರು.
ಉಪ ತಹಶೀಲ್ದಾರ್ ಮಾಲಿನಿ ನೇತೃತ್ವದ ಅಧಿಕಾರಿಗಳ ತಂಡ ಮಂಜೂರಾತಿ ಕಡತಗಳ ಜತೆ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸ್ಥಳದಲ್ಲಿ ಯಾವುದೇ ಬೆಳೆ ಇಲ್ಲದೆ ಇರುವ ಬಗ್ಗೆ ಮಾಹಿತಿ ಕಲೆಹಾಕಿತು. ಕಳಸವಳ್ಳಿ ಗ್ರಾಮದ ಸರ್ವೆ ನಂಬರ್ 71 ರಲ್ಲಿ ನಾಲ್ಕು ಎಕರೆ ಭೂಮಿಯನ್ನು ಇಬ್ಬರು ರೈತರಿಗೆ ಅರಣ್ಯ ವ್ಯಾಪ್ತಿಯಲ್ಲಿ 2018 ರಲ್ಲಿ ಸಾಗರ ಬಗರ್‌ಹುಕುಂ ಸಮಿತಿ ಮಂಜೂರು ಮಾಡಿದ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದರು.
ಸ್ಥಳ ಪರಿಶೀಲನೆ ವೇಳೆಯಲ್ಲಿ ಹಾಜರಿದ್ದ ಮಂಜೂರಾತಿ ಪಡೆದ ರೈತರಾದ ನಾಗರಾಜ ಅಡಿಗ ಮತ್ತು ರಾಘವೇಂದ್ರ ಅಡಿಗ ಹಾಜರಿದ್ದರು. ಕಂದಾಯ ಇನ್ಸ್‌ಪೆಕ್ಟರ್ ಮಂಜುನಾಥ್, ಗ್ರಾಮಲೆಕ್ಕಿಗ ಪ್ರಕಾಶ್, ಸಹಾಯಕ ಶ್ರೀಕಾಂತ್, ಸ್ಥಳೀಯರಾದ ರಾಮಪ್ಪ ಕಳಸವಳ್ಳಿ, ಚೇತನ ಜೈನ್, ಲಕ್ಷ್ಮೀಪತಿ ಜೈನ್ ಮತ್ತಿತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.