![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 8, 2022, 7:18 AM IST
ಬೆಂಗಳೂರು: ಮಳೆ ಹಾನಿ ಪರಿಶೀಲ ನೆಗೆ ಕೇಂದ್ರದ ತಂಡ ಆಗಮಿಸಿದೆ. ವಿಶೇಷ ಪ್ರಕರಣ ಎಂದು ಪರಿಗಣಿಸಿ ಹೆಚ್ಚಿನ ಅನುದಾನ ಒದಗಿಸುವಂತೆ ರಾಜ್ಯ ಸರಕಾರ ಆಗ್ರಹಿಸಿದೆ.
ಕೇಂದ್ರದ ತಂಡದ ಜತೆ ಸಮಾಲೋಚಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಪರಿಸ್ಥಿತಿ, ಬೆಳೆ ಹಾನಿಯ ಅಂದಾಜು, ರಾಜ್ಯ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿ ಕೇಂದ್ರದಿಂದ ಹೆಚ್ಚಿನ ನೆರವಿನ ನಿರೀಕ್ಷೆಯಲ್ಲಿದ್ದೇವೆ ಎಂದರು.
ಜುಲೈ ಹಾಗೂ ಆಗಸ್ಟ್‌ನಲ್ಲಿ ನಿರಂತರ ಮಳೆಯಿಂದ ಉಂಟಾದ ನಷ್ಟದ ಬಗ್ಗೆ ತಂಡಕ್ಕೆ ಮನವರಿಕೆ ಮಾಡಿದ ಅವರು, ರಾಜ್ಯ ಸರಕಾರವು ಅತ್ಯಂತ ನಿಖರ, ಪಾರದರ್ಶಕ ವಾಗಿ ಹಾನಿಯ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ ಸರಕಾರ ಹೆಚ್ಚು ನೆರವು ಒದಗಿಸಬೇಕು ಎಂದು ಸಿಎಂ ಕೋರಿದರು.
ಮೀನುಗಾರಿಕಾ ದೋಣಿಗಳಿಗೆ, ಅಂಗಡಿ ಮುಂಗಟ್ಟುಗಳಿಗೆ, ರಾಮನಗರದ ರೇಷ್ಮೆ ರೀಲಿಂಗ್ ಘಟಕ ಹಾಗೂ ಟ್ವಿಸ್ಟಿಂಗ್ ಘಟಕಗಳಿಗೆ ಆದ ಹಾನಿ ವಿವರಿಸಲಾಯಿತು.
ಸಂಕಷ್ಟದಲ್ಲಿರುವ ಈ ಕುಟುಂಬಗಳಿಗೆ ಮಾನವೀಯ ದೃಷ್ಟಿಯಿಂದ ಹೆಚ್ಚು ನೆರವು ನೀಡಬೇಕು ಎಂದು ಸಿಎಂ ಹೇಳಿದರು.
ಕಡಲಕೊರೆತ ಹಾನಿ: ಹೆಚ್ಚಿನ ನೆರವು ಅಗತ್ಯ
ರಾಜ್ಯ 330 ಕಿ.ಮೀ. ಕರಾವಳಿ ಪ್ರದೇಶವನ್ನು ಹೊಂದಿದ್ದು, ಸಮುದ್ರ ಕೊರೆತ ತಡೆಗಟ್ಟಲು ಹಲವು ಸೂಕ್ಷ್ಮ ಪ್ರದೇಶಗಳಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಗಳನ್ನು ಕೈಗೊಳ್ಳಲಾಗಿದೆ. ಆದರೆ ಹೊಸ ಜಾಗಗಳಲ್ಲಿ ಕಡಲಕೊರೆತ ಉಂಟಾಗಿದ್ದು ಸಾಕಷ್ಟು ಹಾನಿ ಉಂಟಾಗಿದೆ. ರಾಜ್ಯದ ಸಂಪೂರ್ಣ ಕರಾವಳಿ ಪ್ರದೇಶದ ರಕ್ಷಣೆಗೆ ಕೇಂದ್ರದ ನೆರವಿನ ಅಗತ್ಯವಿದೆ ಎಂದು ಬೊಮ್ಮಾಯಿ ಪ್ರತಿಪಾದಿಸಿದರು.
ಮಳೆ ಹಾನಿ ಪರಿಶೀಲನೆ: ದ.ಕ. ಜಿಲ್ಲೆಗೆ ತಂಡ ಆಗಮನ
ಮಂಗಳೂರು: ಮಳೆ ಹಾನಿ ಪರಿಶೀಲಿ ಸಲು ಕೇಂದ್ರ ತಂಡ ಬುಧವಾರ ಜಿಲ್ಲೆಗೆ ಆಗಮಿಸಿದೆ. ಐಎಎಸ್ ಶ್ರೇಣಿಯ ಮೂವರು ಕೇಂದ್ರ ಸರಕಾರದ ಅಧಿಕಾರಿಗಳು ಹಾಗೂ ರಾಜ್ಯದಿಂದ ಓರ್ವ ಅಧಿಕಾರಿಯನ್ನು ಕೇಂದ್ರ ತಂಡ ಒಳಗೊಂಡಿದೆ.
ಕೇಂದ್ರ ತಂಡ ಕೊಡಗಿನಿಂದ ಬುಧವಾರ ಸಂಜೆಯ ವೇಳೆಗೆ ಜಿಲ್ಲೆಗೆ ಆಗಮಿಸಿತು. ಸುಳ್ಯತಾಲೂಕಿನ ಹರಿಹರ ಪಲ್ಲತಡ್ಕ, ಕೊಲ್ಲಮೊಗರು,ಕಲ್ಮಕಾರು ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಪ್ರದೇಶಗಳಲ್ಲಿ ಮಳೆಯಿಂದ ಆಗಿರುವ ಹಾನಿಯ ಮಾಹಿತಿಯನ್ನು ಜಿಲ್ಲಾಡಳಿತದಿಂದ ಪಡೆದುಕೊಂಡಿತು. ದ.ಕ.ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಚಿತ್ರಣದ ಮೂಲಕ ಸಂಭವಿಸಿರುವ ನಷ್ಟಗಳ ಬಗ್ಗೆ ತಂಡಕ್ಕೆ ವಿವರಿಸಿದರು. ಕೇಂದ್ರ ತಂಡ ಗುರುವಾರವೂ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಯ ಬಗ್ಗೆ ಮತ್ತಷ್ಟು ಪರಿಶೀಲನೆ ನಡೆಸಲಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.