ಜಂಗಲ್ ರೆಸಾರ್ಟ್ ಉದ್ಘಾಟನೆಗೆ ಬರ್ತೀನಿ ಅಂದಿದ್ರು!
Team Udayavani, Sep 8, 2022, 3:08 PM IST
ಚಿಂಚೋಳಿ: ರಾಜ್ಯದ ಅರಣ್ಯ ಮತ್ತು ಆಹಾರ ಸಚಿವ ಉಮೇಶ ಕತ್ತಿ ಅವರು ತಾಲೂಕಿಗೆ ಕಳೆದ ಜೂನ್ 27ರಂದು ಭೇಟಿ ನೀಡಿ, ಪೋಲಕಪಳ್ಳಿ ಗ್ರಾಮದ ಹತ್ತಿರ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಮ ಉದ್ಘಾಟಿಸಿದ್ದ ಕ್ಷಣಗಳು ಸ್ಮರಣೀಯವಾಗೇ ಉಳಿದವು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಬಳಿಕ ತಾಲೂಕಿಗೆ ಪ್ರಥಮ ಬಾರಿ ಭೇಟಿ ನೀಡಿದ್ದ ಸಚಿವ ಉಮೇಶ ಕತ್ತಿ ಅವರು “ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಮ’ ಉದ್ಘಾಟಿಸಿದ ಸಂದರ್ಭದಲ್ಲಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಅರಣ್ಯಪ್ರದೇಶ ಹೊಂದಿರುವ ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶದಲ್ಲಿ ಅರಣ್ಯ ಕಾಲೇಜು ಮಂಜೂರಿಗೊಳಿಸುತ್ತೇನೆ. ಜಂಗಲ್ ರೆಸಾರ್ಟ ಮಂಜೂರಿಗೊಳಿಸುತ್ತೇನೆ. ನಾನೇ ಬಂದು ಉದ್ಘಾಟಿಸುತ್ತೇನೆ ಎಂದು ಸಾರ್ವಜನಿಕರಿಗೆ ಬಹಿರಂಗವಾಗಿ ಹೇಳಿದ್ದರು.
ಆದರೆ ಮರಳಿಬಾರದ ಊರಿಗೆ ಹೋಗಿ ಅಭಿಮಾನಿಗಳಿಗೆ ನಿರಾಸೆಯುಂಟು ಮಾಡಿದರು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆ ಈ ಭಾಗದ ಜನರ ಅನೇಕ ವರ್ಷಗಳ ಆಶಯವಾಗಿದೆ. ಮುಂದಿನ ದಿನಗಳಲ್ಲಿ ದೇಶದಲ್ಲಿ 50 ರಾಜ್ಯಗಳು ಉದಯವಾಗಲಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಉದಯವಾದರೆ ನಾನಂತೂ ಮುಖ್ಯಮಂತ್ರಿ ಆಗುವುದಿಲ್ಲ. ನನ್ನ ಮಗ ಮುಖ್ಯಮಂತ್ರಿ ಆಗಬಹುದು ಎಂದು ಉದ್ಘಾಟನಾ ಸಮಾರಂಭದಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದರು.
ಅವರ ಬಯಕೆ ಈಡೇರಲಿಲ್ಲ. ಅವರ ನೆನಪು ಮಾತ್ರ ಸದಾ ಸ್ಮರಣೀಯವಾಯ್ತು. ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆಯಲ್ಲಿ ಸಿದ್ಧಸಿರಿ ಇಥೆನಾಲ್ ಹಾಗೂ ಪವರ್ ವಿಭಾಗದಿಂದ ನಡೆದ ಸಿದ್ಧಸಿರಿ ಗೋಶಾಲೆ, ಪಬ್ಲಿಕ್ ಶಾಲೆ, 108 ಹಾಸಿಗೆಯುಳ್ಳ ಆಸ್ಪತ್ರೆ, ಎಸ್.ಮಾರ್ಟ್, ಕೃಷಿ ಸೇವಾ ಕೇಂದ್ರ ಮತ್ತು ಇಂಧನ ಕೇಂದ್ರ, ವಿವಿಧ ಸಂಕಿರ್ಣಗಳ ಭೂಮಿ ಪೂಜೆ ಸಮಾರಂಭದಲ್ಲಿ ಭಾಗವಹಿಸಿದ್ದ ಸಚಿವ ಉಮೇಶ ಕತ್ತಿ ಅವರು ಬಸನಗೌಡ ಪಾಟೀಲ ಯತ್ನಾಳ ಅವರಿಗೆ “ಚಿಂಚೋಳಿ ಪಟ್ಟಣದಲ್ಲಿ ಸಕ್ಕರೆ ಕಾರ್ಖಾನೆ ಮತ್ತು ಇಥೆನಾಲ್ ಕಾರ್ಖಾನೆ ಪ್ರಾರಂಭಿಸಿದ್ದಿರಿ. ಇನ್ನು ಹಿಂದುಳಿದ ಪ್ರದೇಶ ಅಭಿವೃದ್ಧಿಗೊಳ್ಳಲಿದೆ. ನಿಮ್ಮ ಮಗನಿಗೆ ಚಿಂಚೋಳಿಯಲ್ಲಿಯೇ ಕನ್ಯೆ ನೋಡಿ ಮದುವೆ ಮಾಡಿ’ ಎಂದು ಹೇಳಿ ನೆರೆದವರನ್ನು ನಗೆಗಡಲಲ್ಲಿ ತೇಲಿಸಿದ್ದರು.
ಸಂತಾಪ: ಕೇಂದ್ರ ಸಚಿವ ಭಗವಂತ ಖೂಬಾ, ಕಲಬುರಗಿ ಸಂಸದ ಡಾ|ಉಮೇಶ ಜಾಧವ, ಶಾಸಕ ಡಾ|ಅವಿನಾಶ ಜಾಧವ, ಗೌತಮ ಪಾಟೀಲ, ಬಾಬುರಾವ್ ಪಾಟೀಲ, ರಮೇಶ ಯಾಕಾಪುರ, ಸುಭಾಷ ರಾಠೊಡ, ಸಂತೋಷ ಗಡಂತಿ, ಅಜೀತ್ ಪಾಟೀಲ, ಶರಣು ಮೋತಕಪಳ್ಳಿ, ಕೆ.ಎಂ.ಬಾರಿ ಹಾಗೂ ಮತ್ತಿತರರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.