ವಿಮಾ ಕಂಪೆನಿಗೆ ಬೆಳೆ ವಿಮೆ ಪ್ರೀಮಿಯಂ ಹಣ ವರ್ಗಾಯಿಸದ ಬ್ಯಾಂಕಿಗೆ 50 ಸಾವಿರ ರೂ. ದಂಡ
Team Udayavani, Sep 8, 2022, 5:06 PM IST
ಧಾರವಾಡ: ರೈತರೊಬ್ಬರು ತಮ್ಮ ಮಾವಿನ ಬೆಳೆಗೆ ವಿಮಾ ಸೌಲಭ್ಯ ಪಡೆಯಲು ಪಾವತಿಸಿದ್ದ ಪ್ರಿಮಿಯಂ ಹಣವನ್ನು ಅಗತ್ಯ ವಿವರಗಳೊಂದಿಗೆ ವಿಮಾ ಕಂಪೆನಿಗೆ ವರ್ಗಾಯಿಸದೇ ನಿರ್ಲಕ್ಷ್ಯ ತೋರಿದ ಕಲಘಟಗಿಯ ಬ್ಯಾಂಕ್ ಆಫ್ ಬರೋಡಾ ಶಾಖೆಗೆ ಇಲ್ಲಿನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 50 ಸಾವಿರ ರೂ. ದಂಡ ವಿಧಿಸಿದೆ.
ಕಲಘಟಗಿ ತಾಲೂಕು ಯಲವಾಳ ಗ್ರಾಮದ ಕೃಷಿಕ ಬಸಪ್ಪ ಚೆನ್ನಪ್ಪ ಕಾಮಧೇನು ಎಂಬುವರು 2018-19ನೇ ಸಾಲಿನಲ್ಲಿ ತಮ್ಮ ಮಾವಿನ ಬೆಳೆಗೆ ವಿಮಾ ಸೌಲಭ್ಯ ಬಯಸಿ 3,399 ರೂ. ಪ್ರೀಮಿಯಂನ್ನು ಕಲಘಟಗಿಯ ಬ್ಯಾಂಕ್ ಆಫ್ ಬರೋಡಾದಲ್ಲಿ ಪಾವತಿಸಿದ್ದರು. ಬ್ಯಾಂಕು ವಿಮಾ ಕಂಪನಿಗೆ ಹಣದೊಂದಿಗೆ ರೈತನ ವಿವರಗಳನ್ನು ಕಳುಹಿಸದೇ ನಿರ್ಲಕ್ಷ ಹಾಗೂ ಸೇವಾ ನ್ಯೂನ್ಯತೆ ಎಸಗಿದೆ ಎಂದು ಆಯೋಗದಲ್ಲಿ ದೂರು ದಾಖಲಿಸಿದ್ದರು.
ವಿಚಾರಣೆ ನಡೆಸಿದ ಆಯೋಗವು ಕಲಘಟಗಿಯ ಬ್ಯಾಂಕ್ ಆಫ್ ಬರೋಡಾ ಶಾಖೆಗೆ 40 ಸಾವಿರ ರೂ. ದಂಡ ಮತ್ತು ಪರಿಹಾರ ಹಾಗೂ ಪ್ರಕರಣದ ತನಿಖೆ ನಡೆಸಿದ ನ್ಯಾಯಾಲಯದ ಖರ್ಚಿಗೆ 10 ಸಾವಿರ ರೂ.ಗಳನ್ನು ಪಾವತಿಸುವಂತೆ ಆದೇಶಿಸಿದೆ.
ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ ಸದಸ್ಯರಾದ ವಿ.ಅ. ಬೋಳಶೆಟ್ಟಿ ಮತ್ತು ಪಿ.ಸಿ.ಹಿರೇಮಠ ಈ ತೀರ್ಪು ನೀಡಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.