ಪಂಪ್‌ಸೆಟ್‌ಗೆ ಮೀಟರ್ ಅಳವಡಿಕೆಗೆ ವಿರೋಧ
ಈಗಿರುವ 22 ಲಕ್ಷ ಜಮೀನನ್ನು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಂಚಿಕೆ ಮಾಡಬೇಕು
Team Udayavani, Sep 8, 2022, 5:45 PM IST
ಹೊಸಪೇಟೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿದ್ಯುತ್ ಖಾಸಗೀಕರಣ, ರೈತರ ಪಂಪ್ ಸೆಟ್‌ಗಳಿಗೆ ಮೀಟರ್ ಅಳವಡಿಕೆ ವಿರೋಧಿಸಿ ನಗರದಲ್ಲಿ ಮಂಗಳವಾರ ರಾಜ್ಯ ರೈತ ಸಂಘದ ಹಾಗೂ ಹಸಿರುಸೇನೆ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಗಾಂಧಿ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಪುನೀತ್‌ರಾಜಕುಮಾರ ವೃತ್ತದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿಯಾಗಿ ಮಾರ್ಪಟ್ಟಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರನ್ನು ಕೃಷಿಯಿಂದ ಹೊರ ಹಾಕುವ ನೀತಿಯನ್ನು ಜಾರಿಗೆ ತಂದು ಈ ಕೃಷಿ ಮಾರುಕಟ್ಟೆಯನ್ನು ರೈತರಿಂದ ಕಸಿದು ಕಂಪನಿಗಳಿಗೆ ನೀಡಲು ಮತ್ತು ಕೃಷಿ ಭೂಮಿಯನ್ನು ರೈತರಿಂದ ಕಸಿದುಕೊಂಡು ಹಣವಂತರು, ಕಾರ್ಪೋರೇಟ್ ಕಂಪನಿಗಳಿಗೆ ನೀಡಲು ಕಂದಾಯ ಕಾಯ್ದೆ 1961 ಮತ್ತು 1964 ಕಾನೂನಿಗೆ ತಿದ್ದುಪಡಿ ತಂದು ದೇಶದಲ್ಲಿ ಎಲ್ಲಿ ಇಲ್ಲದ ಕಾನೂನು ರಾಜ್ಯದಲ್ಲಿ ಜಾರಿಗೆ ತಂದು ರೈತರನ್ನು ನಾಶಮಾಡಲು ಹೊರಟಿದೆ ಎಂದು ಪ್ರತಿಭಟನಾಕಾರರು ದೂರಿದರು.
ಬೇಡಿಕೆಗಳು: ವಿದ್ಯುತ್ ಖಾಸಗೀಕರಣ, ರೈತರ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಕೆ ಮಾಡಬಾರದು. ರೈತರು ಬೆಳೆದಂತಹ ಬೆಳೆಗಳಿಗೆ ಮೊದಲು ವೈಜ್ಞಾನಿಕ ಬೆಲೆಯನ್ನು ನಿಗದಿ ಮಾಡಿ (ಕಿರಾಣಿ ಅಂಗಡಿಯಲ್ಲಿರುವಂತಹ ಎಂ.ಆರ್.ಪಿ. ದರದ ಪ್ರಕಾರ) ರೈತರ ಬೆಳೆಗಳಿಗೆ ಅನ್ವಯವಾಗುವಂತೆ ಮಾಡಬೇಕು. ರೈತರಿಗೆ ಸರಿಯಾದ ರೀತಿಯಲ್ಲಿ ರಸಗೊಬ್ಬರ ಸಿಗುತ್ತಿಲ್ಲ.
ಈಗಿರುವ ಬೆಲೆಗಿಂತ ಹೆಚ್ಚಾಗಿ ಅಂಗಡಿ ಮಾಲೀಕರು ರೈತರಿಂದ ಪಡೆಯುತ್ತಿದ್ದಾರೆ. ಕೃಷಿ ಇಲಾಖೆ ಬರುವಂತಹ ಸೌಲಭ್ಯಗಳು ಗ್ರಾಮೀಣ ಮಟ್ಟದಲ್ಲಿ ಇರುವ ರೈತರಿಗೆ ದೊರೆಯುತ್ತಿಲ್ಲ. ಈ ಯೋಜನೆಗಳನ್ನು ಹಳ್ಳಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಕಮಲಾಪುರ ಕೆರೆಗೆ ಹೊಂದಿಕೊಂಡಂತ ಶಾದಿಮಹಲ್ ಹತ್ತಿರು ಬರುವಂಥ ತೂಬು ದುರಸ್ತಿಗೊಂಡಿದ್ದು ಈ ತೂಬಿನಲ್ಲಿ ಕಮಲಾಪುರದ ಚರಂಡಿ ನೀರು ಸೇರಿಕೊಂಡು ರೈತರ ಗದ್ದೆಗಳಿಗೆ ಹೋಗುತ್ತಿದೆ. ಕೂಡಲೇ ಈ ತೂಬನ್ನು ದುರಸ್ತಿಪಡಿಸಬೇಕು. ಕಮಲಾಪುರ ಕೆರೆಯನ್ನು ಈ ಹಿಂದೆ ಒತ್ತುವರಿ ಮಾಡಿದ್ದನ್ನು ತೆರವುಗೊಳಿಸಿ ಸರ್ವೇ ಮಾಡಿದ್ದರು. ಆದರೆ ಈ ಕೆಲವರು ಮತ್ತೇ ಕೆರೆಯನ್ನು ಒತ್ತುವರಿ ಮಾಡಿದ್ದಾರೆ.
ಕೆರೆ ಒತ್ತುವರಿ ಮಾಡಿದವರನ್ನು ತೆರವುಗೊಳಿಸಿ ಹದ್ದುಬಸ್ತು ಮಾಡಬೇಕು. ರೈತರ ಪಂಪ್‌ಸೆಟ್‌ಗಳಿಗೆ ಸರಿಯಾಗಿ 3 ಫೇಸ್ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಆದ ಕಾರಣ ರೈತರ ಪಂಪ್‌ಸೆಟ್‌ಗಳಿಗೆ 12 ತಾಸು 3 ಫೇಸ್ ಪೂರೈಕೆ ಮಾಡಬೇಕು. ಕಂದಾಯ ಸಚಿವ ಆರ್. ಅಶೋಕ್ ಅವರು ನಮ್ಮ ಹತ್ತಿರ ಸರ್ಕಾರದ ಜಮೀನು 22 ಲಕ್ಷ ಎಕರೆ ಇದೆ ಎಂದು ಹೇಳಿದ್ದಾರೆ. ಈಗಿರುವ 22 ಲಕ್ಷ ಜಮೀನನ್ನು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಆಗಮಿಸಿ ರೈತರ ಸಮಸ್ಯೆ ಆಲಿಸಿ, ವಿಧಾನಸಭೆ ಕಲಾಪದಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ರೈತ ಮುಖಂಡರಿಗೆ ಭರವಸೆ ನೀಡಿದರು. ಸಂಘದ ರಾಜ್ಯ ಪ್ರ. ಕಾರ್ಯದರ್ಶಿ ಜೆ. ಕಾರ್ತಿಕ್, ಮುಖಂಡರಾದ ಸಣ್ಣಕ್ಕಿ ರುದ್ರಪ್ಪ, ಟಿ. ನಾಗರಾಜ, ತಾಯಪ್ಪ, ಮಲ್ಲಿಕಾರ್ಜುನ, ರೇವಣಸಿದ್ದಪ್ಪ, ಮಹಾಂತೇಶ, ಜೆ. ನಾಗರಾಜ, ಹೇಮರೆಡ್ಡಿ, ಗಾಳೆಪ್ಪ, ಕೆ.ಎಂ. ಕೊಟ್ರೇಶ, ಕೆ. ಹನುಮಂತಪ್ಪ, ಅಕ್ಬರ್, ಅಯ್ಯಣ್ಣ,
ನವೀನ್, ನವಾಜ್, ಎಲ್.ಎಸ್. ರುದ್ರಪ್ಪ, ಜಗನ್, ಜೆ. ಬಸವರಾಜ, ಬಿ. ಬಸವರಾಜ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.