ಪ್ರತಿಯೊಬ್ಬನೂ ಕನ್ನಡದ ರಾಯಭಾರಿಯಾಗಬೇಕು: ಡಾ.ಮಹೇಶ್ ಜೋಶಿ

ಕನ್ನಡ ಸಾಹಿತ್ಯ ಪರಿಷತ್ತಿನ ದೆಹಲಿ ಘಟಕದ ಉದ್ಘಾಟನೆ

Team Udayavani, Sep 8, 2022, 6:26 PM IST

1-asdadad

ನವ ದೆಹಲಿ: ಕರ್ನಾಟಕದಲ್ಲಿ ಶೇ.64 ರಷ್ಟು ಜನ ಮಾತ್ರ ಕನ್ನಡದಲ್ಲಿ ಮಾತನಾಡುತ್ತಿದ್ದಾರೆ. ಕನ್ನಡ ಶಾಲೆಗಳು ತೀರ ದುಸ್ಥಿತಿಯಲ್ಲಿವೆ. ಹಾಗಾಗಿ ಪ್ರತಿಯೊಬ್ಬ ಕನ್ನಡಿಗರೂ ಕನ್ನಡದ ರಾಯಭಾರಿಗಳಾಗಿ ಕನ್ನಡವನ್ನು ಉಳಿಸಿ ಬೆಳೆಸಬೇಕು. ಇಲ್ಲದಿದ್ದರೆ ಮುಂದಿನ ಹತ್ತು ವರ್ಷಗಳಲ್ಲಿ ಕನ್ನಡ ಶಾಲೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಯಾವುದು ಉಳಿಯುವುದಿಲ್ಲ .ಇಂತಹ ಪರಿಸ್ಥಿತಿಯನ್ನು ಎದುರಿಸಲು ಕರ್ನಾಟಕ ಕಾನೂನು ಆಯೋಗ ಸಮಗ್ರ ಕನ್ನಡ ಅಭಿವೃದ್ಧಿಗಾಗಿ ಕಾನೂನನ್ನು ಜಾರಿಗೆ ತರುವ ಚಿಂತನೆ ನಡೆಸುತ್ತಿದೆ. ಇದನ್ನು ಮುಂಬರುವ ಅಧಿವೇಶನದಲ್ಲಿ ಕಾನೂನನ್ನಾಗಿ ರೂಪುಗೊಳಿಸುವಂತೆ ಕ್ರಮ ಕೈಗೊಳ್ಳವಂತೆ ಮಾಡಲು ಭಗೀರಥ ಪ್ರಯತ್ನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮಾಡಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಹೇಳಿದರು.

ಅವರು ದೆಹಲಿ ಕರ್ನಾಟಕ ಸಂಘದ ವಿಚಾರಸಂಕಿರಣ ಸಭಾಂಗಣದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ದೆಹಲಿ ಘಟಕದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಮಾತನಾಡಿದರು. “ಜನನಿ ಜನ್ಮ ಭೂಮಿಶ್ಚ ಸ್ವರ್ಗಾದಪಿ ಗರಿಯಸಿ” ಎಂಬ ರಾಮಾಯಣ ಮಹಾಕಾವ್ಯದಲ್ಲಿನ ವಾಕ್ಯವನ್ನು ಉಲ್ಲೇಖಿಸಿ ತಾಯಿ ಮತ್ತು ತಾಯ್ನೆಲ ಸ್ವರ್ಗಕ್ಕಿಂತಲು ಮಿಗಿಲು ಎಂದು ತಿಳಿಸುತ್ತಾ, ನಾವು ಕನ್ನಡ, ಕನ್ನಡಿಗ ಮತ್ತು ಕರ್ನಾಟಕದ ಬಗ್ಗೆ ಕಾಳಜಿ ವಹಿಸುವ ಮೂಲಕ ಕನ್ನಡಿಗರ ನೋವು ನಲಿವುಗಳಿಗೆ ಸಾಹಿತ್ಯ ಪರಿಷತ್ತು ಸ್ಪಂದಿಸುವ ಕೆಲಸವನ್ನು ಮಾಡುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತನ್ನು ಸಾಹಿತಿಗಳಿಗೆ ಮಾತ್ರ ಸೀಮಿತವಾಗುವಂತೆ ಮಾಡದೆ ಕನ್ನಡ ಭಾಷೆ ಸಾಹಿತ್ಯದ ಬಗ್ಗೆ ಕಾಳಜಿ ಇರುವ ಎಲ್ಲ ಕನ್ನಡಿಗರ ಮನೆ ಬಾಗಿಲಿಗೆ ಕೊಂಡೊಯ್ದು ಕನ್ನಡ ಸಾಹಿತ್ಯ ಪರಿಷತ್ತಿಗೆ ಕೋಟಿ ಸದಸ್ಯರನ್ನು ನೋಂದಣಿ ಮಾಡಿಸಬೇಕೆಂಬ ಮಹತ್ವದ ಗುರಿ ನಮ್ಮದಾಗಿದೆ. ಪ್ರತಿಯೊಬ್ಬ ಕನ್ನಡಿಗರು ಸೇರಿ ತಾಯಿ ಕನ್ನಡಾಂಬೆಯ ತೇರನ್ನು ಎಳೆಯುತ್ತ ಕನ್ನಡ ನಾಡು ನುಡಿ, ಭಾಷೆ ಸಂಸ್ಕೃತಿಯ ಬಗ್ಗೆ ದೇಶದ ಮೂಲೆ ಮೂಲೆಗೂ ಪರಿಚಯಿಸುವ ಕೆಲಸದಲ್ಲಿ ಸಾಹಿತ್ಯ ಪರಿಷತ್ತಿನ ಜೊತೆ ಕೈ ಜೋಡಿಸಬೇಕು ಎಂದು ಕರೆ ನೀಡಿದರು.

ನಮ್ಮ ಜೊತೆ ಹೆಜ್ಜೆ ಹಾಕುವ ಎಲ್ಲ ಕನ್ನಡಿಗರಿಗೂ ಕನ್ನಡ ಸಾಹಿತ್ಯ ಪರಿಷತ್ತು ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತದೆ ಎಂದರು. ಕನ್ನಡದ ಉಚ್ಚಾರಣೆ ಮತ್ತು ಬರಹ ಎರಡಲ್ಲೂ ಸಾಮ್ಯತೆ ಇರುವ ಜಗತ್ತಿನ ಮೂರು ಭಾಷೆಗಳಲ್ಲಿ ಕನ್ನಡವೂ ಒಂದು. ಉಳಿದೆರಡು ಸಂಸ್ಕೃತ ಮತ್ತು ಗ್ರೀಕ್ ಭಾಷೆಗಳು. ಹಾಗಾಗಿ ಕನ್ನಡ ಜಗತ್ತಿನಲ್ಲಿಯೇ ಕರಾರುವಕ್ಕಾದ ಭಾಷೆಯಾಗಿದೆ ಎನ್ನುವುದು ಹೆಮ್ಮೆಯ ವಿಷಯ ಎಂದು ನಾಡೋಜ ಡಾ. ಮಹೇಶ ಜೋಶಿ ಹೇಳಿದರು.

ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿದೇಶಾಂಗ ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿರುವ ಐಎಫ್ ಎಸ್ ಅಧಿಕಾರಿ ಮಂಜುನಾಥ್ ಅವರು ಕಾರ್ಯಕ್ರಮದಲ್ಲಿ ಪುಟ್ಟ ಬಾಲಕಿ ನೂತನ್ ಕೈಕಾಡೆ ವಾಚನ ಮಾಡಿದ ಕವಿ ಸಿದ್ಧಯ್ಯ ಪುರಾಣಿಕರ ʻಏನಾದರೂ ಆಗು ಮೊದಲು ಮಾನವನಾಗುʼ ಎಂಬ ಕವಿತೆಯನ್ನು ತಮ್ಮ ತಾಯಿಯವರು ಬಾಲ್ಯದಲ್ಲಿ ಕಲಿತಿದ್ದುದು, ಜೊತೆಗೆ ಅವರು ಕಲಿಸಿದ್ದ ʻಪುಣ್ಯಕೋಟಿʼ ಹಾಡನ್ನು ಸ್ಮರಿಸಿಕೊಂಡು ತಾಯ್ನುಡಿಯ ಹೃದಯಂಗಮ ಬೆಸುಗೆಯನ್ನು ಮೆಲುಕು ಹಾಕಿದರು.

ಮತ್ತೊಬ್ಬ ಅತಿಥಿ ವಿದೇಶಾಂಗ ಇಲಾಖೆಯಲ್ಲಿ ಅಧೀನ ಕಾರ್ಯದರ್ಶಿಯಾಗಿರುವ ಡಾ. ನಿಖಿಲ್ ಅವರು ಮಾತನಾಡಿ ಇಂತಹ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಹೊರನಾಡಿನಲ್ಲಿ ಪ್ರತಿಬಿಂಬಿಸುವ ವೇದಿಕೆಯಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ದೆಹಲಿ ಘಟಕ ಹೊರಹೊಮ್ಮಲಿ ಎಂದು ಶುಭ ಕೋರಿದರು.

ಅಧಿಕಾರಿಗಳ ವಿಶೇಷ ಕರ್ತವ್ಯಾಧಿಕಾರಿ (ಕೋವಿಡ್ ಲಸಿಕೆ) ವೈಶಾಖ್ ನಾಗ್ ಅವರು ಮಾತನಾಡಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಆಸಕ್ತಿ ಅಭಿರುಚಿ ಬೆಳೆಸಿಕೊಂಡು ಇವತ್ತಿನ ಯುವ ಪೀಳಿಗೆಗೆ ಕನ್ನಡವನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಾದ ಗುರುತರ ಕಾರ್ಯವನ್ನು ಮಾಡುವಲ್ಲಿ ಈಗ ತಾನೇ ಮೊಳಕೆ ಹೊಡೆದಿರುವ ಕನ್ನಡ ಸಾಹಿತ್ಯ ಪರಿಷತ್ ನ ದೆಹಲಿ ಘಟಕ ಹೆಮ್ಮರವಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಅತಿಥಿ ಗಣ್ಯರು ಹಾಗೂ ಸಭಿಕರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ದೆಹಲಿಯ ನೂತನ ಘಟಕದ ಅಧ್ಯಕ್ಷರಾದ ಸಿ.ಎಂ. ನಾಗರಾಜ ಅವರು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿ ದೆಹಲಿಯಲ್ಲಿ ಕರ್ನಾಟಕ ಸಂಘದ ಮೂಲಕ ಈಗಾಗಲೇ ಮಾಡಿಕೊಂಡು ಬರುತ್ತಿರುವ ಕನ್ನಡದ ಕೆಲಸಗಳಿಗೆ ಇನ್ನಷ್ಟು ಬಲ ಬಂದಂತಾಗಿದ್ದು ಇದಕ್ಕೆ ಕಾರಣಕರ್ತರಾದ ನಾಡೋಜ ಡಾ. ಮಹೇಶ ಜೋಷಿ ಅವರು ನಿಜಕ್ಕೂ ಒಬ್ಬ ದೂರದೃಷ್ಟಿಯುಳ್ಳ ನಾಯಕ ಎಂದು ಅವರು ತೆಗೆದುಕೊಂಡ ಈ ಐತಿಹಾಸಿಕ ನಿರ್ಧಾರವನ್ನು ಶ್ಲಾಘಿಸಿದರು.

ದೆಹಲಿಯ ಕನ್ನಡತಿಯರಾದ, ಪೂಜಾ ರಾವ್, ಮಾಲಿನಿ ಪ್ರಹ್ಲಾದ್, ಶೋಭಾ ನಾಗರಾಜ್, ಹೇಮಶ್ರೀ ಚಂದ್ರಶೇಖರ್, ರೂಪಶ್ರೀ ನರಸಿಂಹ ಮೂರ್ತಿ, ನೇತ್ರಕುಮಾರ್ ಮತ್ತು ಲೀಲಾ ದೇವರಾಜ್ ರವರುಗಳು ಕರ್ನಾಟಕದ ನಾಡಗೀತೆನ್ನು ಪ್ರಸ್ತುತ ಪಡಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಗೌರವ ಕೋಶಧ್ಯಕ್ಷರಾದ ಸಂತೋಷ್ ಜೆ ಅವರು ವಂದನಾರ್ಪಣೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ದೆಹಲಿ ಘಟಕದ ಉದ್ಘಾಟನೆಯಂತಹ ಅಮೃತ ಘಳಿಗೆಗೆ ದೆಹಲಿಯ ಕನ್ನಡದ ಹಿರಿಯರು. ಅಧಿಕಾರಿಗಳು ಹಾಗೂ ಮಹಿಳೆಯರು ಮಕ್ಕಳು ಸೇರಿದಂತೆ ನೂರಾರು ಕನ್ನಡಾಭಿಮಾನಿಗಳು ಸಾಕ್ಷಿಯಾದರು.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.