![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Sep 8, 2022, 6:30 PM IST
ಸಾಗರ: ಸಾಗರ ಮತ್ತು ಹೊಸನಗರ ತಾಲೂಕಿನ ಅಡಕೆ ತೋಟಗಳಿಗೆ ಬಂದಿರುವ ಕರಿಚುಕ್ಕಿ ರೋಗ ಮತ್ತು ಮಲೆನಾಡಿನ ಅಡಕೆ ತೋಟಗಳನ್ನು ಬಾಧಿ ಸುತ್ತಿರುವ ಕೊಳೆ ರೋಗಕ್ಕೆ ಸಂಬಂಧಪಟ್ಟಂತೆ ವೈಜ್ಞಾನಿಕ ಸಂಶೋಧನೆ ನಡೆಸುವಂತೆ ಆಪ್ಸ್‌ಕೋಸ್ ವತಿಯಿಂದ ಇರುವಕ್ಕಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ| ಆರ್.ಸಿ. ಜಗದೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಆಪ್ಸ್‌ಕೋಸ್‌ಗೆ ಭೇಟಿ ನೀಡಿದ್ದ ಕುಲಪತಿಗಳಿಗೆ ನೀಡಿದ ಮನವಿಯಲ್ಲಿ ಸಾಗರ ಮತ್ತು ಹೊಸನಗರ ತಾಲೂಕಿನ ಅಡಕೆ ತೋಟಗಳಲ್ಲಿ ಎಲೆಚುಕ್ಕಿ, ಕರಿಚುಕ್ಕಿ ರೋಗ ಕಾಣಿಸಿಕೊಂಡು ಅಡಕೆ ಮರಗಳು ಒಣಗಿ ಹೋಗುತ್ತಿದೆ. ಅಡಕೆ ಬೆಳೆಗಾರರು ಕೃಷಿ ತಜ್ಞರು ಸೂಚಿಸಿರುವ ಔಷಧಿಗಳನ್ನು ಸಿಂಪಡಣೆ ಮಾಡಿದರೂ ರೋಗ ಹತೋಟಿಗೆ ಬರದೆ ಉಲ್ಬಣಗೊಳ್ಳುತ್ತಿದೆ.
ತಕ್ಷಣ ವಿಶ್ವವಿದ್ಯಾಲಯದ ವಿಜ್ಞಾನಿಗಳು ತೋಟಕ್ಕೆ ಭೇಟಿ ನೀಡಿ ರೋಗದ ಕುರಿತು ಸಂಶೋಧನೆ ಮತ್ತು ಪರಿಹಾರ ಕಂಡುಕೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮಲೆನಾಡಿನ ಸಾಗರ, ಸೊರಬ, ಹೊಸನಗರ ತಾಲೂಕಿನ ಎಲ್ಲ ಅಡಕೆ ತೋಟಗಳಿಗೂ ಕೊಳೆ ರೋಗ ಬಂದಿದೆ. ರೈತರು ವಿಜ್ಞಾನಿಗಳು ಸೂಚಿಸಿದ ಬೋಡೋì ದ್ರಾವಣ ಸಿಂಪಡಣೆ ಮಾಡಿದರೂ ಕೊಳೆರೋಗ ನಿಯಂತ್ರಣಕ್ಕೆ ಬರದೆ ಶೇ. 80ರಷ್ಟು ಅಡಕೆ ನಾಶವಾಗಿದೆ. ಈ ಎರಡೂ ರೋಗದ ಬಗ್ಗೆ ವಿಶೇಷ ಅಧ್ಯಯನ ನಡೆಸಿ ರೈತರಿಗೆ ಆದ ನಷ್ಟದ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಿ ಸೂಕ್ತ ಆರ್ಥಿಕ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಆಪ್ಸ್‌ಕೋಸ್ ಅಧ್ಯಕ್ಷ ಕೆ.ಎಂ.ಸೂರ್ಯನಾರಾಯಣ, ಭರತ್ ನಾಡಿಗ್, ವ್ಯವಸ್ಥಾಪಕ ಲಂಬೋದರ್ ಹಾಜರಿದ್ದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.