ಹೆದ್ದಾರಿ ಯೋಜನೆಗಳಲ್ಲಿ ಸಮನ್ವಯ ಸಾಧಿಸಿ: ಗಡ್ಕರಿ
Team Udayavani, Sep 8, 2022, 9:24 PM IST
ಬೆಂಗಳೂರು: ವಿವಿಧ ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಇಲಾಖೆಗಳ ನಡುವೆ ಸಮನ್ವಯ, ಸಂವಹನ, ಸಹಕಾರ ಅತ್ಯಗತ್ಯವಾಗಿದೆ. ಅನಗತ್ಯ ವೆಚ್ಚ, ಶ್ರಮ ತಪ್ಪುತ್ತದೆ. ಸಮಯವೂ ಉಳಿತಾಯ ಆಗುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದಲ್ಲಿ ಹಮ್ಮಿಕೊಂಡ “ಮಂಥನ್’ ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದ ಅವರು, ಕರ್ನಾಟಕ ಅತಿಹೆಚ್ಚು ಎಥೆನಾಲ್ ಉತ್ಪಾದಿಸುವ ರಾಜ್ಯವಾಗಿದೆ. ಡೀಸೆಲ್ ಮತ್ತಿತರ ಮಾಲಿನ್ಯ ಉಂಟುಮಾಡುವ ಇಂಧನಕ್ಕೆ ಪರ್ಯಾಯವಾಗಿ ಇದನ್ನು ಬಳಸಿಕೊಂಡು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ರೂಪಿಸಲು ವಿಪುಲ ಅವಕಾಶಗಳಿವೆ. ಈ ದಿಸೆಯಲ್ಲಿ ಪ್ರಯತ್ನಗಳು ಆಗಬೇಕು ಎಂದರು.
“ರಸ್ತೆಗಳ ವಿಸ್ತರಣೆ ಅಥವಾ ಅಭಿವೃದ್ಧಿಗಾಗಿ ಮರಗಳ ಹನನ ತಪ್ಪಿಸಲು ಟ್ರೀ ಬ್ಯಾಂಕ್ ಸ್ಥಾಪಿಸುವಂತೆ ಸಲಹೆ ಮಾಡಲಾಗಿದೆ. ಇದರಡಿ ಮರಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದು. ರಸ್ತೆಗಳುದ್ದಕ್ಕೂ ಹೆಚ್ಚು ಹಸಿರು ವಲಯ ನಿರ್ಮಿಸುವ ಅವಶ್ಯಕತೆ ಇದೆ. ಇದರಿಂದ ವಾಹನಗಳು ಉಗುಳುವ ಇಂಗಾಲವನ್ನು ಮರಗಳು ತೆಗೆದುಕೊಳ್ಳುತ್ತವೆ. ಆ ಮೂಲಕ ವಾಯುಮಾಲಿನ್ಯ ಪ್ರಮಾಣ ತಗ್ಗಿಸಬಹುದು’ ಎಂದು ಅಭಿಪ್ರಾಯಪಟ್ಟರು.
ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಹಾಗೂ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಜನರಲ್ (ನಿವೃತ್ತ) ವಿ.ಕೆ. ಸಿಂಗ್ ಮಾತನಾಡಿ, ರಾಜ್ಯಗಳ ಸಾರಿಗೆ ಸಂಸ್ಥೆಗಳು ಸಾಧ್ಯವಾದಷ್ಟು ಡೀಸೆಲ್ ಆಧಾರಿತ ವಾಹನಗಳಿಂದ ಪರಿಸರ ಸ್ನೇಹಿಯಾದ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡಬೇಕು ಎಂದು ಹೇಳಿದರು.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಗಿರಿಧರ್ ಅರಮನೆ ಮಾತನಾಡಿ, 2047ರ ವೇಳೆಗೆ ರಸ್ತೆ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಸ್ವಾವಲಂಬನೆ ಸಾಧಿಸುವುದು ಇಲಾಖೆ ಗುರಿಯಾಗಿದೆ. ಈ ನಿಟ್ಟಿನಲ್ಲಿ ಎರಡು ದಿನಗಳ ಮಂಥನ ಸಮ್ಮೇಳನದಲ್ಲಿ ಚರ್ಚೆಗಳು ನಡೆಯಲಿವೆ ಎಂದರು.
ಸಚಿವರಾದ ಸಿ.ಸಿ. ಪಾಟೀಲ್, ಬಿ. ಶ್ರೀರಾಮುಲು, ಸಂಸದರಾದ ಪಿ.ಸಿ. ಮೋಹನ್, ತೇಜಸ್ವಿಸೂರ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯಸ್ಥೆ ಅಲ್ಕಾ ಉಪಾಧ್ಯಾಯ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
“ಟೋಲ್‌ಗಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.