ಬ್ರಿಟಿಷರ ಕುರುಹುಗಳ ಬದಲಾವಣೆ: ಕಾಲಘಟ್ಟದ ಅನಿವಾರ್ಯ


Team Udayavani, Sep 9, 2022, 6:00 AM IST

tdy-28

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದು 76ನೇ ವರ್ಷದಲ್ಲಿ ನಡೆಯುತ್ತಿದ್ದೇವೆ. ಇಂಥ ಹೊತ್ತಿನಲ್ಲೂ ನಮ್ಮನ್ನು 200 ವರ್ಷಗಳ ಕಾಲ ಆಳಿದ ಬ್ರಿಟಿಷರ ಕುರುಹುಗಳನ್ನು ಹಾಗೇ ಇರಿಸಿಕೊಳ್ಳುವುದರಲ್ಲಿ ಯಾವುದೇ ಅರ್ಥವಿಲ್ಲ. ಇದಕ್ಕೆ ಪೂರಕವೆಂಬಂತೆ ಕೇಂದ್ರ ಸರ‌ಕಾರ ಬ್ರಿಟಿಷರ ಕಾಲದ ಕಾನೂನುಗಳಿಂದ ಹಿಡಿದು ಹಲವಾರು ವಿಷಯಗಳಲ್ಲಿ ಸ್ವಂತಿಕೆಯನ್ನು ತಂದಿದೆ.

2014ರಲ್ಲಿ ಅಧಿಕಾರಕ್ಕೆ ಬಂದ ಮೋದಿ ಸರಕಾರ ಮೊದಲಿಗೆ ಮಾಡಿದ ಕೆಲಸವೇ, ಬ್ರಿಟಿಷರ ಕಾಲದಿಂದಲೂ ಜಾರಿಯಲ್ಲಿದ್ದ 1,800ಕ್ಕೂ ಹೆಚ್ಚು ಕಾನೂನುಗಳನ್ನು ರದ್ದು ಮಾಡಿದ್ದು. ವಿಚಿತ್ರವೆಂದರೆ ಇವುಗಳಲ್ಲಿ ಎಷ್ಟೋ ಕಾನೂನುಗಳು ಏಕೆ ಬಳಕೆಯಾಗುತ್ತಿವೆ? ಎಲ್ಲಿ ಬಳಕೆಯಾಗುತ್ತಿವೆ ಎಂಬುದೇ ಯಾರಿಗೂ ಗೊತ್ತಿರಲಿಲ್ಲ. ಹೀಗಾಗಿ, ಇವುಗಳನ್ನು ರದ್ದು ಮಾಡ ಲಾಗಿದೆ. ಆದರೆ, ಇದಕ್ಕಿಂತ ಪ್ರಮುಖವಾಗಿ ದೇಶದ್ರೋಹ ಕಾನೂನು ಮಾತ್ರ ಇನ್ನೂ ಜಾರಿಯಲ್ಲಿದ್ದು, ಪ್ರಸ್ತುತ ಸನ್ನಿವೇಶದಲ್ಲಿ ಇದರ ಅಗತ್ಯವಿಲ್ಲ. ಇದನ್ನು ರದ್ದು ಮಾಡಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ.  ಬ್ರಿಟಿಷರ ಕಾಲದಲ್ಲಿ ಈ ದೇಶದ್ರೋಹ ಕಾನೂನನ್ನು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡುತ್ತಿದ್ದವರ ಮೇಲೆ ಹಾಕಲಾಗುತ್ತಿತ್ತು. ಈಗಲೂ ಈ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪ ಗಳಿವೆ. ಹೀಗಾಗಿ ಇದನ್ನು ನಿಷೇಧಿಸಿದರೆ ಉತ್ತಮ ನಿರ್ಧಾರವಾದೀತು.

ಈ ಸಂಗತಿಗಳಿಗಿಂತ ಪ್ರಮುಖವಾಗಿ ಇನ್ನೂ ನಾಲ್ಕು ಅಂಶಗಳನ್ನು ಹಾಲಿ ಮೋದಿ ಸರಕಾರ ಬದಲಾವಣೆ ಮಾಡಿದೆ. ಪ್ರಮುಖವಾಗಿ ಇಂಡಿಯಾ ಗೇಟ್‌ ಬಳಿ 5ನೇ ಕಿಂಗ್‌ ಜಾರ್ಜ್‌ ಪ್ರತಿಮೆ ಇದ್ದ ಸ್ಥಳದಲ್ಲಿ ಈಗ ನೇತಾಜಿ ಸುಭಾಷ್‌ಚಂದ್ರ ಬೋಸ್‌ ಅವರ ಪ್ರತಿಮೆಯನ್ನು ಅನಾವರಣ ಮಾಡಲಾಗಿದೆ. ವಿಚಿತ್ರವೆಂದರೆ, ಈ ಪ್ರತಿಮೆ ಬ್ರಿಟಿಷರ ಆಳ್ವಿಕೆ ಅಂತ್ಯಗೊಂಡ ಮೇಲೂ 1968ರ ವರೆಗೆ ಇಂಡಿಯಾ ಗೇಟ್‌ ಬಳಿಯೇ ಇತ್ತು. ಮೊದಲಿಗೆ ನೇತಾಜಿ ಅವರ ಹಾಲೋಗ್ರಾಮ್‌ ಪ್ರತಿಮೆಯನ್ನು ಇರಿಸಿ, ಈಗ ಶಾಶ್ವತವಾದ ಪ್ರತಿಮೆ ನಿರ್ಮಿಸಲಾಗಿದೆ.

ಮೊದಲನೇ ವಿಶ್ವಯುದ್ಧದಲ್ಲಿ ಭಾಗಿಯಾಗಿ ಹುತಾತ್ಮರಾಗಿದ್ದವರ ನೆನಪಿಗಾಗಿ ಸ್ಥಾಪಿಸಲಾಗಿದ್ದ ಅಮರ ಜವಾನ್‌ ಜ್ಯೋತಿ ಸ್ಮಾರಕವನ್ನು ಈಗ ರಾಷ್ಟ್ರೀಯ ಯುದ್ಧ ಸ್ಮಾರಕದೊಳಗೆ ವಿಲೀನ ಮಾಡಲಾಗಿದೆ. ಇಂಡಿಯಾ ಗೇಟ್‌ ಬಳಿ ಇದ್ದ ಈ ಸ್ಮಾರಕದಲ್ಲಿ ಕೇವಲ ಮೊದಲನೇ ಮಹಾಸಮರ ಮತ್ತು ಆಂಗ್ಲೋ-ಅಫ್ಘಾನ್‌ ಯುದ್ಧದಲ್ಲಿ ಭಾಗಿಯಾಗಿದ್ದವರ ಹೆಸರುಗಳಷ್ಟೇ ಇದ್ದವು. ಬಳಿಕ 1971ರಲ್ಲಿ ನಡೆದ ಬಾಂಗ್ಲಾ ವಿಮೋಚನಾ ಸಮರದಲ್ಲಿ ಹುತಾತ್ಮರಾದವರ ಹೆಸರುಗಳನ್ನು ಇಂದಿರಾ ಗಾಂಧಿಯವರ ಅವಧಿಯಲ್ಲಿ ಸೇರಿಸಲಾಗಿತ್ತು. ಈಗ ಭಾರತದಲ್ಲಿ ಇದುವರೆಗೆ ಆಗಿರುವ ಎಲ್ಲ ಯುದ್ಧಗಳ ಹುತಾತ್ಮರ ಹೆಸರುಗಳನ್ನು ಸೇರಿಸಿ ರಾಷ್ಟ್ರೀಯ ಸ್ಮಾರಕ ಮಾಡಲಾಗಿದ್ದು, ಎಲ್ಲವನ್ನು ಅಲ್ಲಿಗೆ ಸ್ಥಳಾಂತರಿಸಲಾಗಿದೆ.

ದಿಲ್ಲಿಯ ರೇಸ್‌ ಕೋರ್ಸ್‌ ರಸ್ತೆಯನ್ನು ಲೋಕ ಕಲ್ಯಾಣ ಮಾರ್ಗ ಎಂಬುದಾಗಿ ಬ್ರಿಟಿಷರ ಕಾಲದ ಪ್ರತ್ಯೇಕ ರೈಲ್ವೇ ಬಜೆಟ್‌ ಅನ್ನು ಸಾಮಾನ್ಯ ಬಜೆಟ್‌ನೊಳಗೇ ಸಮ್ಮಿಳಿತ ಮಾಡಲಾಗಿದೆ. ವಸಾಹತುಶಾಹಿಯ ಕುರುಹುಗಳಂತಿದ್ದ ಈ ಸಂಗತಿಗಳನ್ನು ತೆಗೆದುಹಾಕಿರುವುದು ಪ್ರಸ್ತುತ ಸಂದರ್ಭದಲ್ಲಿ ಸರಿಯಾದ ನಿರ್ಧಾರವೇ ಆಗಿದೆ.

ಇವೆಲ್ಲದರ ಜತೆಗೆ ಈಗ ಬ್ರಿಟಿಷರ ಕಾಲದ ರಾಜಪಥವನ್ನು ಕರ್ತವ್ಯ ಪಥವಾಗಿ ಬದಲಾವಣೆ ಮಾಡಿರುವುದು ದೇಶೀಯತೆಯ ಕುರುಹಾಗಿದೆ. ಈ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡಬೇಕಾದ ಅಗತ್ಯತೆಯೂ ಇದೆ.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.