“ಮೂಡಾ’ ಅಕ್ರಮ: ಐವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಸಿಬಿಐ ವಿಶೇಷ ಕೋರ್ಟ್
Team Udayavani, Sep 9, 2022, 8:30 PM IST
ಬೆಂಗಳೂರು: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮೂಡಾ) ಸೇರಿದ 1 ಕೋಟಿ ರೂ. ಅನ್ನು ದುರುಪಯೋಗಪಡಿಸಿದ್ದ ಐವರಿಗೆ ಸಿಬಿಐ ವಿಶೇಷ ನ್ಯಾಯಾಲಯವು 7 ವರ್ಷ ಜೈಲು ಶಿಕ್ಷೆ ಹಾಗೂ 5,02 ಕೋಟಿ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಎ.ಆರ್.ಲಾಜಿಸ್ಟಿಕ್ಸ್‌ನ ಕೆ. ಆನಂದ್ ಅಲಿಯಾಸ್ ಕೆಬ್ಬಳ್ಳಿ ಆನಂದ್, ಫ್ಯೂಚರ್ ಫಾರ್ಮ್ ಆ್ಯಂಡ್ ಎಸ್ಟೇಟ್ ಲಿ. ನ ಸಿಇಒ ನಾಗಲಿಂಗ ಸ್ವಾಮಿ, ರಿಯಲ್ ಎಸ್ಟೇಟ್ ಏಜೆಂಟ್ ಚಂದ್ರಶೇಖರ್, ಮೂಡಾದಲ್ಲಿ ಎಫ್ಡಿಎ ಆಗಿ ಕಾರ್ಯ ನಿರ್ವಹಿಸುತ್ತಿರುವ ಎಚ್.ಕೆ. ನಾಗರಾಜ್, ಖಾಸಗಿ ವ್ಯಕ್ತಿ ಕೆ.ಬಿ.ಹರ್ಷನ್ ಶಿಕ್ಷೆಗೊಳಗಾದವರು.
ಇವರು ಫೋರ್ಜರಿ ಹಾಗೂ ನಕಲಿ ದಾಖಲೆ ಸೃಷ್ಟಿಸಿ ಮೂಡಾಗೆ ಸೇರಿದ 5 ಕೋಟಿ ರೂ. ಅನ್ನು ಅಲಹಾಬಾದ್ ಬ್ಯಾಂಕ್‌ನಿಂದ ಇಂಡಿಯನ್ ಬ್ಯಾಂಕ್‌ನಲ್ಲಿದ್ದ ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದರು.
ಈ ವಿಚಾರ ಬೆಳಕಿಗೆ ಬಂದ ಬಳಿಕ ಪ್ರಕರಣವನ್ನು ಸರಕಾರ ಸಿಬಿಐಗೆ ವಹಿಸಿತ್ತು. ಸಿಬಿಐ ಪರ ಸರಕಾರಿ ಅಭಿಯೋಜಕಿ ಹೇಮಾ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.