ಸೆ. 30ರಿಂದ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ: ಡಿ.ಕೆ.ಶಿವಕುಮಾರ್
Team Udayavani, Sep 9, 2022, 9:15 PM IST
ಬೆಂಗಳೂರು: ರಾಹುಲ್ ಗಾಂಧಿ ಆರಂಭಿಸಿರುವ ಭಾರತ್ ಜೋಡೋ ಯಾತ್ರೆ ಸೆ. 30ರಿಂದ ರಾಜ್ಯದಲ್ಲಿ ಆರಂಭವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾತ್ರೆಗೆ ದಸರಾ ವೇಳೆ 2 ದಿನ ಬಿಡುವು ನೀಡಲಾಗುವುದು. ಆಸಕ್ತಿ ಇರುವವರಿಗೆ ಯಾತ್ರೆಯಲ್ಲಿ ನಡೆಯಲು ಅವಕಾಶ ಕಲ್ಪಿಸಿಕೊಡಲಿದ್ದೇವೆ. ಕೆಲವರು 1 ದಿನ ನಡೆದರೆ, ಮತ್ತೆ ಕೆಲವರು 21 ದಿನ ನಡೆಯಬಹುದು. ಹೀಗಾಗಿ ನಾವು ಪಕ್ಷಾತೀತವಾಗಿ ಎಲ್ಲರಿಗೂ ಅವಕಾಶ ಮಾಡಿಕೊಡಲು ಆನ್‌ಲೈನ್ ನೋಂದಣಿ ಆರಂಭಿಸುತ್ತಿದ್ದೇವೆ ಎಂದು ತಿಳಿಸಿದರು.
ಯಾತ್ರಿಗಳಿಗೆ ವಾಸ್ತವ್ಯ, ಆಹಾರ ಸೌಕರ್ಯ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಬೇಕಾಗುತ್ತದೆ. ಹೀಗಾಗಿ ನೋಂದಣಿ ಪ್ರಕ್ರಿಯೆ ಆರಂಭಿಸಿದ್ದು, ಯಾತ್ರೆಗೆ ಸಂಬಂಧಿಸಿದ ಜಾಲತಾಣವನ್ನು ಉದ್ಘಾಟಿಸುತ್ತಿದ್ದೇವೆ ಎಂದರು.
ರಾಹುಲ್ ಜತೆ ಸಂವಾದ
ಕರ್ನಾಟಕದಲ್ಲಿ ನಡೆಯಲಿರುವ ಯಾತ್ರೆ ಸಮಯದಲ್ಲಿ ಮಧ್ಯಾಹ್ನ ಬಿಡುವಿನ ವೇಳೆ ನಿರುದ್ಯೋಗಿ ಯುವಕರಿಗೆ ರಾಹುಲ್ ಜತೆ ಸಂವಾದಕ್ಕೆ ಅವಕಾಶ ಮಾಡಿಕೊಡಲಾಗುವುದು. ಜತೆಗೆ ಮಹಿಳೆಯರು, ಕಾರ್ಮಿಕರು, ಸಂಘ ಸಂಸ್ಥೆಗಳು, ಎರಡು ಕಡೆ ರೈತರು, ಪರಿಶಿಷ್ಟರು, ಅಲ್ಪಸಂಖ್ಯಾಕರು, ಶ್ರಮಿಕರಿಗೂ ಸಂವಾದಕ್ಕೆ ಒಂದೊಂದು ದಿನ ಅವಕಾಶ ಕಲ್ಪಿಸುತ್ತೇವೆ ಎಂದರು.
ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ಅನುದಾನ ಬರುತ್ತಿಲ್ಲ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಪ್ರವಾಹ ಸಮಯದಲ್ಲಿ ಬಂದು ಸಂಚಾರ ದಟ್ಟಣೆ ವಿಚಾರವಾಗಿ ಮಾತನಾಡಿದ್ದಾರೆ. ಪ್ರಧಾನ ಮಂತ್ರಿಗಳು ಬಂದು ಉಪನಗರ ರೈಲು ವಿಚಾರವಾಗಿ ಗಡುವು ನೀಡಿ ಹೋದರು. ಇದಕ್ಕಾಗಿ ಅವರು ಬಿಡುಗಡೆ ಮಾಡಿರುವ ಅನುದಾನ ಎಷ್ಟು?
-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.