2023ಕ್ಕೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಮಹೀಂದ್ರಾ XUV400 ಎಲೆಕ್ಟ್ರಿಕ್ ಕಾರು
Team Udayavani, Sep 11, 2022, 10:37 AM IST
ಮುಂಬಯಿ : ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ತನ್ನದೇ ಛಾಪು ಮೂಡಿಸಿರುವ ಮಹೀಂದ್ರಾ ಕಂಪನಿಯು ತನ್ನ ಗ್ರಾಹಕರಗೆ ಇದೀಗ ಎಕ್ಸ್ಯುವಿ 400 ಇವಿ ಎಸ್ಯುವಿ ಕಾರನ್ನು ಮಾರುಕಟ್ಟೆಗೆ ಪರಿಚಯಿಸಲು ಮುಂದಾಗಿದೆ.
ಮಹಿಂದ್ರಾ ಕಂಪೆನಿ XUV400 ಹೊಸ ಕಾರನ್ನು 2023ರ ಜನವರಿಯಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಲು ನಿರ್ಧರಿಸಿದ್ದು ಅಂದೇ ಮಾರಾಟ ಪ್ರಕ್ರಿಯೆ ನಡೆಸಲಿದೆ ಎಂದು ಹೇಳಿದೆ.
ಬೆಲೆ, ಮೈಲೇಜ್ ಮತ್ತು ತಾಂತ್ರಿಕ ಸೌಲಭ್ಯಗಳ ವಿಚಾರದಲ್ಲಿ ಹೇಳುವುದಾದರೆ ಹೊಸ ಮಾದರಿಯ ಎಲ್ಲಾ ವಾಹನಗಳಿಗೆ ಇದು ಸ್ಪರ್ಧೆ ನೀಡಲಿದ್ದು ಗ್ರಾಹಕರಿಗೆ ನೆರವಾಗುವ ಹಲವಾರು ಸೌಲಭ್ಯಗಳನ್ನು ಹೊಂದಿದೆ.
ಹೊಸ ಕಾರು 39.4 kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 100kW ಎಲೆಕ್ಟ್ರಿಕ್ ಮೋಟಾರ್ ಪಡೆದುಕೊಂಡಿದ್ದು, ಇದು ಅತ್ಯುತ್ತಮ ಪರ್ಫಾಮೆನ್ಸ್ ಜೊತೆಗೆ ಪ್ರತಿ ಚಾರ್ಜ್ಗೆ ಗರಿಷ್ಠ 456 ಕಿ.ಮೀ ಮೈಲೇಜ್ ನೀಡಲಿದೆ. ಸನ್ರೂಫ್, ಡ್ಯುಯಲ್ ಝೋನ್ ಎಸಿ ಅನ್ನು ಒಳಗೊಂಡಿದೆ. ಪ್ರಯಾಣಿಕರ ಸುರಕ್ಷತೆಗಾಗಿ ಆರು ಏರ್ಬ್ಯಾಗ್ಗಳನ್ನು ಅಳವಡಿಸಲಾಗಿದೆ, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ (ESC), ಕಾರ್ನರಿಂಗ್ ಬ್ರೇಕ್ ಕಂಟ್ರೋಲ್ ಸೇರಿದಂತೆ ಹಲವು ಸೌಲಭ್ಯಗಳನ್ನು ಇದು ಒಳಗೊಂಡಿದೆ.
ಕಾರಿನ ನಿಖರ ಬೆಲೆ ಕಂಪೆನಿ ಇನ್ನೂ ಪ್ರಕಟಿಸಿಲ್ಲ ಅಂದಾಜಿನ ಪ್ರಕಾರ 16 ಲಕ್ಷದಿಂದ ರೂ. 20 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.