1,132 ನಕ್ಷತ್ರ ಆಮೆ ವಶ, ನಾಲ್ವರ ಬಂಧನ
Team Udayavani, Sep 11, 2022, 11:52 AM IST
ಬೆಂಗಳೂರು: ನಕ್ಷತ್ರ ಆಮೆಗಳನ್ನು ಮಾರಾಟ ಮಾಡಲು ಯತ್ನಿಸಿದ ನಾಲ್ವರು ಆರೋಪಿಗಳನ್ನು ಆರ್‌ಎಂಸಿ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ.
ಶಿಡ್ಲಘಟ್ಟ ತಾಲೂಕಿನ ರಾಜ್ವತ್ರ, ಕಲ್ಯಾಣ, ಸಿಂಹಾದ್ರಿ, ಇಸಾಕ್ ಬಂಧಿತರು. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ 1,132 ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆಯಲಾಗಿದೆ. ನಾಲ್ವರು ಅಕ್ಕಿ-ಪಿಕ್ಕಿ ಸಮುದಾಯಕ್ಕೆ ಸೇರಿದವರಾಗಿದ್ದು, ಸಾರ್ವಜನಿಕರು ಅದೃಷ್ಟ ಎಂದು ನಂಬುವ ನಕ್ಷತ್ರದ ಆಮೆಗಳನ್ನು ಸಾವಿರಾರು ರೂ. ನಿಗದಿಪಡಿಸಿ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಇತ್ತೀಚೆಗೆ ಠಾಣಾ ವ್ಯಾಪ್ತಿಯ ಗೊರಂಗುಂಟೆ ಪಾಳ್ಯದ ಕಾರು ಶೋರೂಮ್‌ವೊಂದರ ಬಳಿ ಆಮೆಗಳನ್ನು ಚೀಲದಲ್ಲಿ ತುಂಬಿಕೊಂಡು ಮಾರಾಟಕ್ಕೆ ಯತ್ನಿಸಿದ್ದರು.
ಈ ಬಗ್ಗೆ ಮಾಹಿತಿ ಪಡೆದ ಠಾಣಾಧಿಕಾರಿ ಪ್ರಕಾಶ್ ಮತ್ತು ಕಂಡ ಆರೋ ಪಿಗಳನ್ನು ಮಾಲು ಸಮೇತ ಬಂಧಿಸಿದೆ. ಆರೋಪಿಗಳು ನಕ್ಷತ್ರ ಆಮೆಗಳನ್ನು ಎಲ್ಲಿಂದ ತರುತ್ತಿದ್ದರು? ಎಲ್ಲಿಗೆ ಸಾಗಾಟ ಮಾಡುತ್ತಿದ್ದರು? ಎಂಬ ಬಗ್ಗೆ ತನಿಖೆ ನಡೆಸ ಬೇಕಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.