‘ಕೊಂಡಾಣ ಕೇಸ್’ ನಲ್ಲಿ ವಿಜಯ ರಾಘವೇಂದ್ರ
Team Udayavani, Sep 11, 2022, 1:12 PM IST
ವಿಜಯ ರಾಘವೇಂದ್ರ ನಾಯಕರಾಗಿದ್ದ “ಸೀತಾರಾಮ್ ಬಿನೋಯ್’ ಸಿನಿಮಾ ಮೂಲಕ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಈಗ ತಮ್ಮ ಎರಡನೇ ಚಿತ್ರಕ್ಕೆ ಮುಹೂರ್ತ ಮಾಡಿದ್ದಾರೆ. ಚಿತ್ರಕ್ಕೆ “ಕೇಸ್ ಆಫ್ ಕೊಂಡಾಣ’ ಎಂದು ಟೈಟಲ್ ಇಡಲಾಗಿದೆ. ಇತ್ತೀಚೆಗೆ ಬೆಂಗಳೂರಿನ ಧರ್ಮಗಿರಿ ಮಂಜುನಾಥ್ ಸ್ವಾಮಿ ದೇಗುಲದಲ್ಲಿ ಸಿನಿಮಾ ಮುಹೂರ್ತ ನೆರವೇರಿತು.
ಚಿತ್ರದ ಬಗ್ಗೆ ಮಾತನಾಡುವ ವಿಜಯ ರಾಘವೇಂದ್ರ,”ಸೀತಾರಾಮ್ ಬಿನೋಯ್ ನಂತರ ಇವರು ನನಗೆ ಮತ್ತೂಮ್ಮೆ ಅವಕಾಶ ಕೊಟ್ಟಿದ್ದಾರೆ. ಸಾಧಾರಣವಾಗಿ ಒಂದೊಳ್ಳೆ ತಂಡ ಸಿಗುವುದು ಅಪರೂಪ. ನಿರ್ದೇಶಕ ದೇವಿಪ್ರಸಾದ್ ಡೆಡಿಕೇಶನ್, ಕೆಲಸದ ಬಗ್ಗೆ ಸೀರಿಯಸ್‌ನೆಸ್ ಇರುವ, ಬಹಳ ವಿರಳವಾಗಿ ಸಿಗುವ ಟೆಕ್ನಿಷಿಯನ್’ ಎಂದು ಖುಷಿ ಹಂಚಿಕೊಂಡರು.
ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಈ ಬಾರಿ ಸಸ್ಪೆನ್ಸ್ ಥ್ರಿಲ್ಲರ್ ಕಥೆಯನ್ನು ಪ್ರೇಕ್ಷಕರಿಗೆ ಉಣಬಡಿಸಲು ಸಜ್ಜಾಗಿದ್ದಾರೆ. 09/2018 ಎಂಬ ಅಡಿಬರಹವಿರುವ ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಹಾಗೂ ಭಾವನಾ ಮೆನನ್ ಇಬ್ಬರು ಪೊಲೀಸ್ ಅಧಿಕಾರಿಗಳಾಗಿ ನಟಿಸಲಿದ್ದಾರೆ.
ದಿಯಾ ಸಿನಿಮಾ ಖ್ಯಾತಿಯ ಖುಷಿ ರವಿ ವೈದ್ಯೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಾತ್ವಿಕ್ ಹೆಬ್ಟಾರ್ ಮತ್ತು ದೇವಿಪ್ರಸಾದ್ ಶೆಟ್ಟಿ ಜೊತೆಗೆ ಅರವಿಂದ್ ಶೆಟ್ಟಿ ಸಹಯೋಗದಲ್ಲಿ ಸಿನಿಮಾ ನಿರ್ಮಾಣವಾಗಲಿದೆ. ಜಯಂತ್ ಕಾಯ್ಕಿಣಿ ಸಾಹಿತ್ಯ, ಪೂರ್ಣಚಂದ್ರ ತೇಜಸ್ವಿ ಸಂಗೀತ, ಜೋಗಿ ಅವರ ಸಂಭಾಷಣೆ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.